ಬರೀ ಶ್ರೀರಾಮುಲು ಅವರು ಅಷ್ಟೇ ಅಲ್ಲದೇ ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಯಾರೇ ಬಂದರೂ ಅವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ
ರಾಯಚೂರು(ಜ.30): ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಯಾರೇ ಬಂದರೂ ಸ್ವಾಗತಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ನಗರದಲ್ಲಿ ಸೋಮವಾರ ಮಾತನಾಡಿದ ಅವರು, ಬರೀ ಶ್ರೀರಾಮುಲು ಅವರು ಅಷ್ಟೇ ಅಲ್ಲದೇ ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಯಾರೇ ಬಂದರೂ ಅವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಪತ್ನಿಗೆ ಇಡಿ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಇದರಲ್ಲಿ ಯಾವುದೇ ಹುರುಳಿಲ್ಲ, ಈಗಾಗಲೇ ಲೋಕಾಯುಕ್ತರು ತನಿಖೆ ನಡೆಸಿ ಪ್ರಕರಣದಿಂದ ಮುಕ್ತಗೊಳಿಸಿದೆ. ನೋಟಿಸ್‌ನಿಂದ ಆತಂಕ ಪಡುವ ಅಗತ್ಯವಿಲ್ಲ ಎಂದರು.
ಕಾಡಾನೆ ಹಾವಳಿ ತಡೆಗೆ 26 ಕಿಮೀ ರೈಲ್ವೆ ಬ್ಯಾರಿಕೇಡ್: ಸಚಿವ ಈಶ್ವರ್ ಖಂಡ್ರೆ
ಕೇಂದ್ರ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ಮೇಲೆ ಸುಳ್ಳು ಅರೋಪ ಹೊರೆಸುತ್ತಿವೆ, ಇಡಿ ದುರುಪಯೋಗ ಮಾಡಿಕೊಳ್ಳುತ್ತಿರುವ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಚಾಟಿ ಬೀಸಿದ್ದು, ಈ ಹಿಂದೆ ಹಾಲಿ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಿರುವುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದ್ದು, ಅನ್ಯಾಯ ಬಹಳ ದಿನ ನಡೆಯುವುದಿಲ್ಲ ಅದಕ್ಕೆ ಕೊನೆಯಿದೆ. ವಿರೋಧ ಪಕ್ಷಗಳನ್ನು ಹೆಣೆಯಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದು, ಎಲ್ಲದಕ್ಕೂ ಕಾಲ ಉತ್ತರಿಸಲಿದೆ ಎಂದು ತಿರುಗೇಟು ನೀಡಿದರು.
ರಾಜ್ಯದ ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿಯಿಲ್ಲ ನಮ್ಮ ವರಿಷ್ಠರು ಈಗಾಗಲೇ ಹೇಳಿದ್ದಾರೆ ಯಾರು ಸಹ ಸಿಎಂ ಸ್ಥಾನದ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದೆಂದು ನಾವೆಲ್ಲರೂ ವರಿಷ್ಠರ ಸೂಚನೆ ಪಾಲಿಸುತ್ತೇವೆ ನಮ್ಮ ಪಕ್ಷದಲ್ಲಿ ಶಿಸ್ತು ಇದೆ ಎಂದರು.
ಬುಡಕಟ್ಟು ಜನರನ್ನು ಮುಖ್ಯವಾಹಿನಿಗೆ ತರಲು ಚಿಂತನೆ: ಸಚಿವ ಈಶ್ವರ್ ಖಂಡ್ರೆ
ಕಲ್ಯಾಣ ಕರ್ನಾಟಕದಲ್ಲಿ ಅರಣ್ಯ ಭಾಗ ಕಡಿಮೆಯಿದ್ದು ಅದನ್ನು ವಿಸ್ತರಿಸಿ ಸಂರಕ್ಷಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅರಣ್ಯೀಕರಣಕ್ಕೆ ಸೂಚಿಸುತ್ತೇನೆ ಎಂದ ಅವರು ಮಾನವ ಮತ್ತು ಪ್ರಾಣಿಗಳ ಸಂಘರ್ಷ ತಡೆಗೆ ಕ್ರಿಯೋಜನೆ ರೂಪಿಸಿದ್ದೇವೆ ಅರಣ್ಯ ಒತ್ತವರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುಗುವುದು ಎಂದು ಹೇಳಿದರು.
ಈ ವೇಳೆ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಸೇರಿ ಇತರರು ಇದ್ದರು.