ರಾಷ್ಟ್ರಾದ್ಯಂತ ಕಾಂಗ್ರೆಸ್ ಪಕ್ಷ ಠೇವಣಿ ಕಳೆದುಕೊಳ್ಳುತ್ತಿದೆ. ಮೊನ್ನೆ ನಡೆದ 3 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ನೆಲ ಕಚ್ಚಿರುವುದು ನೋಡಿದರೆ ರಾಹುಲ್ ಗಾಂಧಿ ಪಾದಯಾತ್ರೆ ಯಾವುದೇ ಮ್ಯಾಜಿಕ್ ನಡೆದಿಲ್ಲ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಟೀಕಿಸಿದರು.
ರಾಯಬಾಗ (ಮಾ.09): ರಾಷ್ಟ್ರಾದ್ಯಂತ ಕಾಂಗ್ರೆಸ್ ಪಕ್ಷ ಠೇವಣಿ ಕಳೆದುಕೊಳ್ಳುತ್ತಿದೆ. ಮೊನ್ನೆ ನಡೆದ 3 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ನೆಲ ಕಚ್ಚಿರುವುದು ನೋಡಿದರೆ ರಾಹುಲ್ ಗಾಂಧಿ ಪಾದಯಾತ್ರೆ ಯಾವುದೇ ಮ್ಯಾಜಿಕ್ ನಡೆದಿಲ್ಲ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಟೀಕಿಸಿದರು. ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಹೊಂದುತ್ತಿದ್ದು, ಅವರ ನೇತೃತ್ವದಲ್ಲಿ ಬರುವ ವಿಧಾನಸಭೆ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲವು ಸಾಧಿಸಲಿದೆ. ಶಾಸಕ ದುರ್ಯೋಧನ ಐಹೊಳೆ ಅವರನ್ನು ಬರುವ ಚುನಾವಣೆಯಲ್ಲಿ ಹೆಚ್ಚಿನ ಅಂತರದಿಂದ ಕ್ಷೇತ್ರ ಮತದಾರರು ಗೆಲ್ಲಿಸಬೇಕು ಎಂದರು.
ಬಿಜೆಪಿ ಸರ್ಕಾರ ಅಧಿಕಾರ ಬಂದ ನಂತರ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೆ ಸುಮಾರು .6 ಸಾವಿರ ಕೋಟಿ ಹಣ ನೀಡಲಾಗಿದೆ. ಶಾಸಕ ಐಹೊಳೆ ಅವರ ಪ್ರಯತ್ನದಿಂದ ಕರಗಾಂವ ಏತನೀರಾವರಿ ಯೋಜನೆ ಮಂಜೂರಾಗಿದ್ದು, ಚುನಾವಣೆ ಪೂರ್ವದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು. ಕಾಂಗ್ರೆಸ್ ಪಕ್ಷದವರು ಅಧಿಕಾರ ಇಲ್ಲದೇ ಹತಾಶರಾಗಿ ಸುಳ್ಳು ಭರವಸೆ ನೀಡುತ್ತಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಇದ್ದಾಗ 5 ವರ್ಷ ನಿದ್ದೆ ಮಾಡುವುದರಲ್ಲಿ ಕಾಲ ಕಳೆದಿದ್ದಾರೆ. ತಾಯಿ-ಮಗನಿಗೆ ನಿಷ್ಠರಾದವರಿಗೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಾಗುತ್ತಾರೆ. ರಾಹುಲ್ ಗಾಂಧಿ ಬ್ರಿಟನ್‌ದಲ್ಲಿ ನಿಂತು ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದರು.
ಕರ್ಲಾನ್ ಹಾಸಿಗೆ ಮಳಿಗೆಯಲ್ಲಿ ಬೆಂಕಿ ಅವಘಡ: ಕ್ಷಣಾರ್ಧದಲ್ಲಿ ಹೊತ್ತಿಉರಿದ ಮಳಿಗೆ
ಶಾಸಕ ಡಿ.ಎಂ.ಐಹೊಳೆ ಮಾತನಾಡಿ, ಈಗಾಗಲೇ ಕರಗಾಂವ ಏತ ನೀರಾವರಿ ಯೋಜನೆ ಮಂಜೂರು ದೊರಕಿದ್ದು, ಮುಂಬರುವ ದಿನಗಳಲ್ಲಿ ಭೆಂಡವಾಡ ಮತ್ತು ಹನುಮಾನ ಏತ ನೀರಾವರಿ ಜಾರಿ ಮಾಡಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದು, ಬರುವ ದಿನಗಳಲ್ಲಿ ರಾಯಬಾಗ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವುದಾಗಿ ಭರವಸೆ ನೀಡಿದರು. ಮಧ್ಯಾಹ್ನ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪನವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ಅಂಬೇಡ್ಕರ್ ವೃತ್ತದಿಂದ ತೆರೆದ ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಪಟ್ಟಣದ ಝೇಂಡಾ ಕಟ್ಟಿವರೆಗೆ ಸುಮಂಗಲೆಯರ ಕುಂಭಮೇಳದೊಂದಿಗೆ ಸಂಕಲ್ಪ ಯಾತ್ರೆ ಜರುಗಿತು.
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ, ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ವಿಪ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಸಂಸದ ಅಮರಸಿಂಹ ಪಾಟೀಲ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜೇಶ ನೇರ್ಲಿ, ಶಾಸಕ ಪಿ.ರಾಜೀವ, ಮಾಜಿ ಸಚಿವ ಶಶಿಕಾಂತ ನಾಯಿಕ, ನ್ಯಾಯವಾದಿ ಎಲ್.ಬಿ.ಚೌಗುಲೆ, ಮಹೇಶ ಭಾತೆ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದರು.
ನಂಬರ್ ಬ್ಲಾಕ್ ಮಾಡಿದ್ದಕ್ಕೆ ಗೆಳತಿಯ ಹತ್ಯೆ: ಕ್ಯಾಬ್ ಚಾಲಕನ ಬಂಧನ
ಮಾಜಿ ಸಿಎಂ ಯಡಿಯೂರಪ್ಪನವರು ಕೃಷ್ಣಾ ನದಿ ಪ್ರವಾಹ ಬಂದಾಗ ಹೆಚ್ಚಿನ ಹಣ ನೀಡಿದ್ದಾರೆ. ನಿರಾಶ್ರೀತರಿಗೆ ಮನೆ ಕಟ್ಟಿಕೊಳ್ಳಲು ಮೊಟ್ಟಮೊದಲ ಬಾರಿ .5 ಲಕ್ಷ ನೀಡಿದ್ದಾರೆ. ಪ್ರವಾಹ ಸಮಯದಲ್ಲಿ ಬೆಳಗಾವಿ ಜಿಲ್ಲೆಗೆ 1200 ಕೋಟಿ ಪರಿಹಾರ ನೀಡಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ.
- ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವರು