ಸಿದ್ದರಾಮಯ್ಯ ಅಧಿಕಾರಕ್ಕೆ ಬರುವುದು ಹಗಲುಗನಸು: ಸಚಿವ ಕಾರಜೋಳ

Published : Mar 10, 2023, 10:30 PM IST
ಸಿದ್ದರಾಮಯ್ಯ ಅಧಿಕಾರಕ್ಕೆ ಬರುವುದು ಹಗಲುಗನಸು: ಸಚಿವ ಕಾರಜೋಳ

ಸಾರಾಂಶ

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಬಹುಮತದೊಂದಿಗೆ ಬಿಜೆಪಿ ಮೇನಲ್ಲಿ ಅಧಿಕಾರಕ್ಕೆ ಬರುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದ ಸಚಿವ ಗೋವಿಂದ ಕಾರಜೋಳ.

ವಿಜಯಪುರ(ಮಾ.10): ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ ಎಂದು ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ವ್ಯಂಗ್ಯವಾಡಿದರು. ಗುರುವಾರ ಚಿಕ್ಕ ಗಲಗಲಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಬಹುಮತದೊಂದಿಗೆ ಬಿಜೆಪಿ ಮೇನಲ್ಲಿ ಅಧಿಕಾರಕ್ಕೆ ಬರುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದರು.

ದಶಪಥ ಹೆದ್ದಾರಿ ರಾಜಕೀಯ ಬಗ್ಗೆ ಪ್ರಸ್ತಾಪಿಸಿದ ಅವರು, ಅನುಷ್ಠಾನಗೊಳಿಸಿ ಯಾರು ಉದ್ಘಾಟನೆ ಮಾಡುತ್ತಾರೆಯೋ ಅದನ್ನು ಅವರೇ ಮಾಡಿದಂತಾಗುತ್ತದೆ. ಸರ್ಕಾರಗಳು ನಿರಂತರವಾಗಿರುತ್ತವೆ. ಪಕ್ಷದ ಸಿದ್ಧಾಂತದ ಮೇಲೆ ಬೇರೆ ಬೇರೆ ಪಕ್ಷಗಳು ಅಧಿಕಾರಕ್ಕೆ ಬರುತ್ತವೆ. ಹೋಗುತ್ತವೆ. ಆದರೆ ಸರ್ಕಾರ ನಿರಂತರವಾಗಿರುತ್ತದೆ. ಅದಕ್ಕೆ ಸರ್ಕಾರದ ಹೊರಗಿದ್ದುಕೊಂಡು ಆಪಾದನೆ ಮಾಡುವುದರಲ್ಲಿ ಅರ್ಥವಿಲ್ಲ ಎಂದರು.

ಎಲ್ಲಾ ಶಾಸಕರಿಗೂ ಟಿಕೆಟ್ ಸಿಗಲ್ಲ, ಹಾಲಿ ಬಿಜೆಪಿ ಶಾಸಕರಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ!

ಕೆಲ ಹಾಲಿ ಶಾಸಕರಿಗೆ ಟಿಕೆಟ್‌ ಕೈತಪ್ಪುತ್ತದೆ ಎಂದು ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ವ್ಯತ್ಯಾಸ ಆದರೂ ಆಗಬಹುದು ಎಂದು ಯಡಿಯೂರಹಪ್ಪನವರು ಹೇಳಿದ್ದಾರೆ. ಕೆಲ ಹಾಲಿ ಶಾಸಕರಿಗೆ ಟಿಕೆಟ್‌ ಕೈತಪ್ಪುತ್ತದೆ ಎಂದು ನಿಖರವಾಗಿ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ವಲಸೆ ಬಂದ 17 ಮಂದಿ ಮತ್ತೆ ಕಾಂಗ್ರೆಸ್‌ಗೆ ಸೇರುವುದು ಸುಳ್ಳು. ಇದು ಮಾಧ್ಯಮದವರ ಸೃಷ್ಟಿ. ವಲಸೆ ಬಂದ ಯಾವುದೇ ಶಾಸಕರು ಕಾಂಗ್ರೆಸ್ಸಿಗೆ ಮರಳುವುದಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!