ಅಸ್ತಿತ್ವ ಉಳಿಸಿಕೊಳ್ಳಲು ಸಿದ್ದರಾಮೋತ್ಸವ: ಸಚಿವ ಹಾಲಪ್ಪ ಆಚಾರ್‌

Published : Jul 26, 2022, 04:00 AM IST
ಅಸ್ತಿತ್ವ ಉಳಿಸಿಕೊಳ್ಳಲು ಸಿದ್ದರಾಮೋತ್ಸವ: ಸಚಿವ ಹಾಲಪ್ಪ ಆಚಾರ್‌

ಸಾರಾಂಶ

ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಸಚಿವ ಹಾಲಪ್ಪ ಆಚಾರ್‌ ಟೀಕಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಜನರಿಗೆ ಒಳ್ಳೆಯದನ್ನು ಮಾಡುವ ಕಾರ್ಯವಾಗಿಲ್ಲ. 

ಧಾರವಾಡ (ಜು.26): ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಸಚಿವ ಹಾಲಪ್ಪ ಆಚಾರ್‌ ಟೀಕಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಜನರಿಗೆ ಒಳ್ಳೆಯದನ್ನು ಮಾಡುವ ಕಾರ್ಯವಾಗಿಲ್ಲ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಮಾಡುತ್ತಿರುವ ಉತ್ಸವವಾಗಿದೆ ಎಂದು ಟೀಕಿಸಿದರು. ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಚಿವ ಸಂಪುಟ ವಿಸ್ತರಣೆಗಾಗಿ ದೆಹಲಿಗೆ ತೆರಳಿಲ್ಲ. 

ದೆಹಲಿಗೆ ತೆರಳಿದ ಸಮಯದಲ್ಲಿ ಪಕ್ಷದ ನಾಯಕರನ್ನು ಭೇಟಿ ಆಗುವುದು ಸಹಜ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ನಾಯಕರು ಹೇಳಿದಾಗ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಇದೇ ವೇಳೆ ತಿಳಿಸಿದರು. ಇನ್ನು ಕೆಆರ್‌ಎಸ್‌ ಬಳಿ ಪರೀಕ್ಷಾರ್ಥ ಸ್ಫೋಟ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಗಣಿಗಾರಿಕೆ ನಿಂತಿದೆ. ಸದ್ಯ ಅಲ್ಲಿ ಯಾವುದೇ ಗಣಿಗಾರಿಕೆ ನಡೆಯುತ್ತಿಲ್ಲ. ತಜ್ಞರಿಂದ ಪರಿಶೀಲನೆ ನಡೆಸಲಾಗುವುದು. ಅವರು ಸಮಗ್ರ ವರದಿ ನೀಡಿದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.

ಸ್ವಾತಂತ್ರ್ಯವು ಹೋರಾಟಗಾರರ ತ್ಯಾಗ, ಬಲಿದಾನದ ಸಂಕೇತ; ಹಾಲಪ್ಪ ಆಚಾರ್

ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಿಸಿಲ್ಲ: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ಹಿಂದೆ ಸರಿದಿದ್ದಾರೆಯೇ ಹೊರತು ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿಲ್ಲ. ಇದನ್ನು ತಪ್ಪಾಗಿ ಅರ್ಥೈಸಬೇಡಿ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಬಿ.ಎಸ್‌. ಯಡಿಯೂರಪ್ಪ ಅವರು ಬಿಜೆಪಿಯನ್ನು ಕಟ್ಟಿಬೆಳೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಇಷ್ಟುಎತ್ತರಕ್ಕೆ ಏರಲು ಅವರ ಹೋರಾಟವೇ ಕಾರಣ. ಇದಕ್ಕಾಗಿಯೇ ಬಿಜೆಪಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದೆ. ಅವರಿಗೆ ಅಗೌರವ ತೋರುವ ಪ್ರಶ್ನೆಯೇ ಬರುವುದಿಲ್ಲ. 

ಪ್ರತಿಪಕ್ಷದವರಿಗೆ ಬೇರೆ ವಿಷಯಗಳು ಇಲ್ಲವಾದ್ದರಿಂದ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದರು. ಮಾಜಿ ಸಚಿವ ವಿಶ್ವನಾಥ ಅವರು ಹೇಳುತ್ತಲೇ ಇರುತ್ತಾರೆ. ಅವರು ಯಾವಾಗ ಯಾವುದಕ್ಕೆ ಹೇಳುವುದಿಲ್ಲ ಹೇಳಿ ಎಂದು ಮರುಪ್ರಶ್ನೆ ಹಾಕಿದರು. ಯಡಿಯೂರಪ್ಪ ಅವರು ಪಕ್ಷದ ಜತೆ ಇರುತ್ತಾರೆ. ಅವರ ಮಾರ್ಗದರ್ಶನದಲ್ಲಿಯೇ ಪಕ್ಷ ಮುನ್ನಡೆಸಲಾಗುತ್ತದೆ. ರಾಜ್ಯದಲ್ಲಿ ಬಿಜೆಪಿಯನ್ನು ಆಡಳಿತಕ್ಕೆ ತಂದವರು ಅವರು. ಮುಂದೆಯೇ ಅವರೇ ಅಧಿಕಾರಕ್ಕೆ ತರುತ್ತಾರೆ ಎಂದರು. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಈಗ ಅವಧಿಗೂ ಮುನ್ನವೇ ಚುನಾವಣೆ ನಡೆಸುವ ಪ್ರಶ್ನೆಯೇ ಇಲ್ಲ. 

ಸಾಗರ ತಾಲೂಕಿನಲ್ಲಿ 30 ಸಾವಿರಕ್ಕೂ ಹೆಚ್ಚು ಮನೆಗಳಲ್ಲಿ ಧ್ವಜ ಹಾರಲಿದೆ

ಪೂರ್ಣ ಅವಧಿಯ ಬಳಿಕವೇ ಚುನಾವಣೆ ನಡೆಯುತ್ತದೆ. ವಿಜಯೇಂದ್ರ ಅವರೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಕುಟುಂಬ ರಾಜಕಾರಣವಾಗುವುದಿಲ್ಲ. ವಿಜಯೇಂದ್ರ ಅವರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ರಾಜ್ಯ ಉಪಾಧ್ಯಕ್ಷರು ಇದ್ದಾರೆ. ಹೀಗಿದ್ದಾಗ್ಯೂ ವಿನಾಕಾರಣ ಕುಟುಂಬ ರಾಜಕಾರಣ ಎಂದು ಆರೋಪ ಮಾಡುವುದು ಸರಿಯಲ್ಲ ಎಂದರು. ನಮ್ಮಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಕಿತ್ತಾಟ ಇಲ್ಲ. ಪಕ್ಷದ ಹೈಕಮಾಂಡ್‌ ಈ ಕುರಿತು ತೀರ್ಮಾನ ಮಾಡುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!