ಹಿಂದೂ ಧರ್ಮವನ್ನು ಒಡೆಯುತ್ತೇವೆ ಎಂಬುದು ಶುದ್ಧ ಸುಳ್ಳು: ಸಚಿವ ಮಹದೇವಪ್ಪ

Published : Sep 21, 2025, 05:59 AM IST
HC Mahadevappa

ಸಾರಾಂಶ

ಹಿಂದು ಧರ್ಮ ಒಡೆಯುತ್ತೇವೆ ಎಂಬುದು ಶುದ್ಧ ಸುಳ್ಳು. ಸಿದ್ದರಾಮಯ್ಯ ಯಾಕೆ ಹಿಂದು ಧರ್ಮ ಒಡೆಯುತ್ತಾರೆ. ಹಿಂದು ಧರ್ಮ ಒಡೆಯುವ ಪ್ರಶ್ನೆಯೇ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ತಿಳಿಸಿದರು.

ಮೈಸೂರು (ಸೆ.21): ಹಿಂದು ಧರ್ಮ ಒಡೆಯುತ್ತೇವೆ ಎಂಬುದು ಶುದ್ಧ ಸುಳ್ಳು. ಸಿದ್ದರಾಮಯ್ಯ ಯಾಕೆ ಹಿಂದು ಧರ್ಮ ಒಡೆಯುತ್ತಾರೆ. ಹಿಂದು ಧರ್ಮ ಒಡೆಯುವ ಪ್ರಶ್ನೆಯೇ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು. ಜನಗಣತಿ ಮೂಲಕ ಹಿಂದು ಧರ್ಮ ಒಡೆಯುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಜಾತಿ ಗಣತಿ ಮಾಡುತ್ತಿರುವುದು ಜಾತಿಗಳ ಸ್ಥಿತಿಗಳ ಅಧ್ಯಯನಕ್ಕಾಗಿ. ಧರ್ಮ ಒಡೆಯುವುದು ನಮ್ಮ ಕೆಲಸ ಅಲ್ಲ. ಅದು ಬಿಜೆಪಿಯ ಕೆಲಸ. ಇದಕ್ಕಾಗಿ ಬಿಜೆಪಿ ಸುಳ್ಳು ಹಬ್ಬಿಸುತ್ತಿದೆ ಎಂದು ಕಿಡಿಕಾರಿದರು.

ಯಾರಾದರು ಮತಾಂತರ ಆಗುತ್ತೇವೆ ಎಂದರೇ ಅದನ್ನ ತಡೆಯುವ ಹಕ್ಕು ಯಾರಿಗೂ ಇಲ್ಲ. ಅದು ಅವರವರ ಸ್ವಾತಂತ್ರ್ಯ. ಆ ಸ್ವಾತಂತ್ರ್ಯಕ್ಕೆ ಅಡ್ಡಿ ಮಾಡಲು ನಾವ್ಯಾರು? ಡಾ. ಅಂಬೇಡ್ಕರ್ ಅವರೇ ನಾನು ಹಿಂದುವಾಗಿ ಹುಟ್ಟಿದ್ದೇನೆ. ಹಿಂದುವಾಗಿ ಸಾಯಲ್ಲ ಎಂದಿದ್ದರು. ಕೆಲವರು ಅದನ್ನ ಪರಿಪಾಲನೆ ಮಾಡುತ್ತಿರಬಹುದು ಎಂದರು. ನಾವು ಹೊಸ ಜಾತಿಗಳನ್ನ ಸೃಷ್ಟಿ ಮಾಡುತ್ತಿಲ್ಲ. ಹೊಸ ಜಾತಿಗಳನ್ನ ಸೃಷ್ಟಿ ಮಾಡಲು ಸಾಧ್ಯ ಇದ್ಯಾ ಹೇಳಿ. ಮತಾಂತರ ಆಗಿದ್ದವರ ಮೂಲ ಜಾತಿಯನ್ನ ನಮೂದಿಸಿದ್ದೇವೆ ಅಷ್ಟೇ. ಅದರಲ್ಲಿ ಏನು ತಪ್ಪಿದೆ ಹೇಳಿ. ಬಿಜೆಪಿ ನಮ್ಮ ಎಲ್ಲಾ ಒಳ್ಳೆಯ ಕೆಲಸಗಳಿಗೆ ವಿವಾದ ಸೃಷ್ಟಿಸುವ ಕೆಲಸ‌ ಮಾಡುತ್ತಿದೆ. ಅದು ಅವರ ಮನಸ್ಥಿತಿ ಎಂದು ಅವರು ಹೇಳಿದರು.

ಗಣತಿಗೆ ವಿರೋಧವಿಲ್ಲ

ಜಾತಿ ಗಣತಿಗೆ ನಮ್ಮ ಸಚಿವ ಸಂಪುಟದ ಯಾವ ಸಚಿವ ವಿರೋಧವು ಇಲ್ಲ. ಸಚಿವ ಸಂಪುಟದಲ್ಲಿ ಯಾವ ಗೊಂದಲವು ಆಗಿಲ್ಲ. ಹೊರಗಡೆ ಜಾತಿ ಸಭೆಗಳು ಮಾಡುತ್ತಿರುವುದು ಜಾತಿ ಗಣತಿಯ ವಿರೋಧಕ್ಕ ಅಲ್ಲ. ತಮ್ಮ ಜಾತಿಯನ್ನ ಯಾವ ನಿರ್ಧಿಷ್ಟ ಹೆಸರಿನಲ್ಲಿ ಬರೆಸಬೇಕೆಂದು ಜಾಗೃತಿ ಮೂಡಿಸಲು ಸಭೆಗಳು ನಡೆಯುತ್ತಿವೆ. ಆ ರೀತಿಯ ಸಭೆಗಳು ತಪ್ಪಲ್ಲ ಎಂದು ಅವರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!