ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ವಾಪಸ್ ಪಡೆಯುವ ಸಚಿವ ಸಂಪುಟದ ತೀರ್ಮಾನ ಕಾನೂನಾತ್ಮಕವಾಗಿ ಸರಿಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಮರ್ಥಿಸಿಕೊಂಡರು.
ಮೈಸೂರು (ನ.25): ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ವಾಪಸ್ ಪಡೆಯುವ ಸಚಿವ ಸಂಪುಟದ ತೀರ್ಮಾನ ಕಾನೂನಾತ್ಮಕವಾಗಿ ಸರಿಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಮರ್ಥಿಸಿಕೊಂಡರು. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಅಡ್ವೋಕೆಟ್ ಜನರಲ್ ಅಭಿಪ್ರಾಯ ಪಡೆದಿರಲಿಲ್ಲ.
ಶಾಸಕರ ವಿರುದ್ಧ ತನಿಖೆ ನಡೆಸಲು ಸ್ಪೀಕರ್ ಅನುಮತಿಯನ್ನೂ ಕೇಳಿರಲಿಲ್ಲ. ಕೇವಲ ರಾಜಕೀಯ ದ್ವೇಷಕ್ಕೆ ಸಿಬಿಐಗೆ ವಹಿಸಿದ್ದರು ಎಂದರು. ಆ ಆದೇಶವನ್ನು ನಮ್ಮ ಸಚಿವ ಸಂಪುಟ ವಾಪಸ್ ಪಡೆದಿದೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲ. ಕಾನೂನು ರೀತಿಯಲ್ಲೇ ತೀರ್ಮಾನ ಮಾಡಿದ್ದೇವೆ. ತನಿಖೆಯನ್ನು ಯಾರು ಮುಂದುವರಿಸಬೇಕು ಎಂಬುದನ್ನು ಕಾನೂನು ತೀರ್ಮಾನಿಸಲಿದೆ ಎಂದು ಅವರು ಹೇಳಿದರು.
ಅಂಬರೀಶ್ ಗುರಿ, ಉದ್ದೇಶಗಳನ್ನು ಮುಂದುವರೆಸಿಕೊಂಡು ಹೋಗಲು ಸಂಕಲ್ಪ: ಸುಮಲತಾ
ಎಚ್‌ಡಿಕೆಗೆ ಅಧಿಕಾರ ಸಿಗಲಿಲ್ಲ ಎಂಬ ಹತಾಶೆ: ಬಿಜೆಪಿಯ ಎಲ್ಲಾ ಜನ ವಿರೋಧಿ ನೀತಿಗಳ ಸಂದರ್ಭದಲ್ಲಿ ಮೌನವಾಗಿದ್ದು, ಕೆಲವಕ್ಕೆ ಬೆಂಬಲವನ್ನೂ ನೀಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಈಗ ಅಧಿಕಾರ ಸಿಕ್ಕಿಲ್ಲ ಎಂಬ ಒಂದೇ ಕಾರಣಕ್ಕೆ ಬಹಳಷ್ಟು ಹತಾಶೆಯಿಂದ ವರ್ತಿಸುತ್ತಿರುವುದು ಸ್ಪಷ್ಟವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಅವರು ನಗರದಲ್ಲಿ ಮಾತನಾಡಿ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಸದನದ ಒಳಗೆ ಬಿಜೆಪಿಗೆ ಬೆಂಬಲ ನೀಡಿ, ಸದನದ ಹೊರಗೆ ಪ್ರತಿಭಟನೆ ಮಾಡುವ ನಾಟಕ ಆಡಿದ್ದ ಕುಮಾರಸ್ವಾಮಿ ಅವರಿಗೆ ಸೈದ್ಧಾಂತಿಕ ಸ್ಪಷ್ಟತೆಯೇ ಇಲ್ಲ ಎಂದವರು ಹರಿಹಾಯ್ದರು.
ರೈತರು ಕಾವೇರಿ ಹೋರಾಟ ಕೈಬಿಡಿ: ಸಚಿವ ಚಲುವರಾಯಸ್ವಾಮಿ
ಮನೆಗೆ ಕರೆಂಟ್ ಪಡೆದುಕೊಂಡ ವಿಚಾರದಲ್ಲಿ ಕ್ಷುಲ್ಲಕ ರಾಜಕೀಯ ಮಾಡಬಾರದು ಎಂದು ಬೋಧಿಸುವ ಕುಮಾರಸ್ವಾಮಿ, ಮುಖ್ಯಮಂತ್ರಿಗಳು ಒಂದೆರಡು ಗಂಟೆ ಕ್ರಿಕೆಟ್ ಪಂದ್ಯ ವೀಕ್ಷಿಸಲು ಹೋದರೆ ಬಾಲಿಶವಾಗಿ ಟೀಕೆಗೆ ನಿಲ್ಲುತ್ತಾರೆ ಎಂದು ಕಿಡಿಕಾರಿದರು. ಇನ್ನು, ಸಿದ್ದರಾಮಯ್ಯ ಅವರು ವರ್ಗಾವಣೆ ದಂಧೆ ಮಾಡುತ್ತಿದ್ದಾರೆ ಎಂದು ತಳಬುಡವಿಲ್ಲದ ಆರೋಪ ಮಾಡುತ್ತಿರುವ ಕುಮಾರಸ್ವಾಮಿ, ತಾವು ಮುಖ್ಯಮಂತ್ರಿ ಆಗಿದ್ದಾಗ ವರ್ಗಾವಣೆಗಳನ್ನು ಮಾಡಿಲ್ಲವೇ? ಅದನ್ನೂ ಅವರು ದಂಧೆ ಎಂದು ಪರಿಗಣಿಸುತ್ತಾರಾ? ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.