
ಬೆಂಗಳೂರು (ಜೂ.21): ಅಧಿಕಾರ ಬಂತು ಎಂದರೆ 2-3 ಸಿಎಂ ಬದಲಿಸುವ ಚಾಳಿ ಬಿಜೆಪಿಯದ್ದು, ಸಿಎಂ ಬದಲಿಸುವ ಕೆಟ್ಟ ಚಾಳಿ ಇರುವ ಬಿಜೆಪಿಗೆ ಪೂರ್ಣವಧಿ ಸಿಎಂ ಎಂಬ ಪದ ಬಳಕೆಯ ನೈತಿಕತೆ ಇಲ್ಲ ಎಂದು ಪ್ರತಾಪ್ ಸಿಂಹ ವಿರುದ್ಧ ಸಚಿವ ಡಾ.ಎಚ್.ಸಿ.ಮಹದೇವಪ್ಪ ಗುಡುಗಿದ್ದಾರೆ. ಸಿದ್ದರಾಮಯ್ಯ ಪೂರ್ಣವಧಿ ಸಿಎಂ ಎಂದು ಘೋಷಣೆ ಮಾಡಲಿ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಅನಗತ್ಯವಾಗಿ ಕಾಂಗ್ರೆಸ್ ಪಕ್ಷದ ಬೆನ್ನು ಕೆರೆಯುವ ಕೆಲಸ ಪ್ರತಾಪ್ ಸಿಂಹ ಮಾಡುತ್ತಿದ್ದಾರೆ. ಕಾಂಗ್ರೆಸ್ ಮೇಲಿನ ಪ್ರೀತಿ ಬದಿಗಿಟ್ಟು ಬಿಜೆಪಿಗೆ ಪಕ್ಷ ನಿಷ್ಠೆ ವಹಿಸಲಿ ಎಂದು ಮಹದೇವಪ್ಪ ಹೇಳಿದರು.
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಸಚಿವ ಸಂಪುಟವನ್ನು ರಚಿಸಿದೆ. ಸೋಲಿನ ಸುಳಿಯಲ್ಲಿ ಕಂಗಲಾಗಿರುವ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇದು ಬಿಜೆಪಿಯ ದುರ್ಬಳತೆಯ ಸಂಕೇತ. ಪ್ರತಾಪ್ ಸಿಂಹ ಅಪ್ರಬುದ್ಧ ಮಾತುಗಳನ್ನಾಡುತ್ತಾರೆ ಎಂದು ಟ್ವೀಟ್‌ನಲ್ಲೆ ಮಹದೇವಪ್ಪ ತಿವಿದಿದ್ದಾರೆ.
10 ಕೆಜಿ ಉಚಿತ ಅಕ್ಕಿ ಜುಲೈನಲ್ಲಿ ಜಾರಿ ಅನುಮಾನ: ಸಿಎಂ ಸಿದ್ದರಾಮಯ್ಯ
5 ವರ್ಷ ಸಿಎಂ ಹುದ್ದೆ ಬಗ್ಗೆ ಮಹದೇವಪ್ಪನ ಕೇಳಿ: ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ಸ್ವತಃ ಸಿದ್ದರಾಮಯ್ಯ ಹಾಗೂ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನಿರಾಕರಿಸಿದ್ದು, ಅವರನ್ನೇ ಕೇಳಿ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಮಹದೇವಪ್ಪ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ. ಆ ಬಗ್ಗೆ ಅವರನ್ನೇ ಕೇಳಿ ಎಂದರು.
ವಿಚಾರಣೆಗೆ ಅಮೆರಿಕದಿಂದ ಬರುವ ಪತಿಗೆ ಪತ್ನಿ ಹಣ ಕೋಡಬೇಕಿಲ್ಲ: ಹೈಕೋರ್ಟ್
ಇನ್ನು ಎಂ.ಬಿ.ಪಾಟೀಲ್ ಮಾತನಾಡಿ, ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿ ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದೆ. ಈಗಲೂ ನಾನು ಆ ಮಾತಿಗೆ ಬದ್ಧನಾಗಿದ್ದೇನೆ. ನನಗೆ ಆ ಬಗ್ಗೆ ಮಾತನಾಡಬಾರದು ಎಂದು ಯಾರೂ ಹೇಳಿಲ್ಲ. ಆದರೆ ಸಚಿವ ಮಹದೇವಪ್ಪ ನೀಡಿರುವ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅದನ್ನು ಅವರ ಬಳಿಯೇ ಕೇಳಿ ಎಂದು ಹೇಳಿದರು. ಶಾಸಕಾಂಗ ಪಕ್ಷದ ಸಂದರ್ಭದಲ್ಲಿ ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಹೈಕಮಾಂಡ್ ಯಾವ ಸೂಚನೆಯನ್ನೂ ಕೊಟ್ಟಿಲ್ಲ. ಕೆ.ಸಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಮಾಹಿತಿ ಕೊಟ್ಟಿದ್ದರೋ ಅಷ್ಟುಮಾತ್ರ ನಮಗೆ ಗೊತ್ತಿದೆ. ಉಳಿದದ್ದು ಅವರವರ ವೈಯಕ್ತಿಕ ಹೇಳಿಕೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.