ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಅವಕಾಶ ಸಿಕ್ಕರೆ ತಮ್ಮ ಪುತ್ರ ಸುನಿಲ್ ಬೋಸ್ ಸ್ಪರ್ಧೆ ಮಾಡುತ್ತಾನೆ ಎಂದು ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಮೈಸೂರು (ಆ.08): ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಅವಕಾಶ ಸಿಕ್ಕರೆ ತಮ್ಮ ಪುತ್ರ ಸುನಿಲ್ ಬೋಸ್ ಸ್ಪರ್ಧೆ ಮಾಡುತ್ತಾನೆ ಎಂದು ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ಬಾರಿಯೂ ಸುನಿಲ್ ಬೋಸ್‌ಗೆ ಅವಕಾಶ ಸಿಕ್ಕಿಲ್ಲ. ಅದರೂ ಅವನು ಯಾವುದೇ ಬೇಸರವಿಲ್ಲದೆ ಪಕ್ಷ ಸಂಘಟನೆ ಮಾಡುತ್ತಿದ್ದಾನೆ. ಈ ಬಾರಿ ಅವಕಾಶ ಸಿಕ್ಕರೆ ಸ್ಪರ್ಧೆ ಮಾಡುತ್ತಾನೆ. ಈ ವಿಚಾರದ ಬಗ್ಗೆಯೂ ಪಕ್ಷದಲ್ಲಿ ಯಾವ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವರನ್ನ ಲೋಕಸಭಾ ಚುನಾವಣೆಗೆ ನಿಲ್ಲಿಸುವ ಬಗ್ಗೆ ಪಕ್ಷದಲ್ಲಿ ಯಾವ ಚರ್ಚೆಯೂ ಆಗಿಲ್ಲ. ಇದರ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಸುದ್ದಿಗಳು ಬರುತ್ತಿದೆ ಅಷ್ಟೇ. ನಮಗೆ ಅಂತಹ ಯಾವುದೇ ಸೂಚನೆ ಬಂದಿಲ್ಲ. ಪಕ್ಷದಲ್ಲೂ ಚರ್ಚೆಗಳು ನಡೆದಿಲ್ಲ. ನಡೆಯದಿರೂ ಚರ್ಚೆ ನಿಮ್ಮ ಗಮನಕ್ಕೆ ಹೇಗೆ ಬಂತು ಗೊತ್ತಿಲ್ಲ ಎಂದು ಅವರು ತಿಳಿಸಿದರು.
undefined
ಅಡಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ
ಸ್ಪಂದನಾ ನಿಧನಕ್ಕೆ ಸಂತಾಪ: ಇದೇ ವೇಳೆ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಸಂತಾಪ ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸಂತಾಪ ಸೂಚಿಸಿದ್ದು, ಸಾವಿನ ದುಃಖ ಭರಿಸುವ ಶಕ್ತಿಯನ್ನ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸಿದರು.
ಮೂಲ ಸೌಲಭ್ಯ ಕಲ್ಪಿಸದವರ ವಿರುದ್ಧ ಕ್ರಮ: ಮೈಸೂರು ನಗರ, ಹೊರ ವಲಯದ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಬಡಾವಣೆಗಳಲ್ಲಿ ಅಗತ್ಯವಾದ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೇ ಇರುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.
ಮೈಸೂರು ಜಿಪಂ ಕಚೇರಿಯ ದೇವರಾಜ ಅರಸು ಸಭಾಂಗಣದಲ್ಲಿ ಸೋಮವಾರ ನಡೆದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಮರ್ಪಕವಾಗಿ ನೀರು ನೀಡುವುದು, ಯುಜಿಡಿ ಸಮಸ್ಯೆ, ಕುಡಿಯುವ ನೀರು ನಿರ್ವಹಣೆ, ರಾಜಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವ ಬಗ್ಗೆ ಜನ ಪ್ರತಿನಿಧಿಗಳ ಸಲಹೆ ಸೂಚನೆಗಳನ್ನು ಪಾಲಿಸುವಂತೆ ಹೇಳಿದರು.
ಕೆರೆಕಟ್ಟೆಗಳನ್ನು ದುರಸ್ತಿಪಡಿಸುವುದನ್ನು ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಆಗಸ್ಟ್ ಅಂತ್ಯಕ್ಕೆ ಅಥವಾ ಸೆಪ್ಟಂಬರ್ ತಿಂಗಳ ಮೊದಲ ವಾರ ನಡೆಯಲಿರುವ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗುತ್ತಿರುವ ಕಾರಣ ನಗರದಲ್ಲಿ ಕಾಡುತ್ತಿರುವ ಹಲವಾರು ಸಮಸ್ಯೆಗಳು ಮತ್ತು ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಅನುದಾನ ಕುರಿತು ಇಲಾಖಾವಾರು ಪಟ್ಟಿಮಾಡಿ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕ್ಲೀನ್‌ಸಿಟಿ ನಿರ್ವಹಿಸಿ: ಮೈಸೂರು ನಗರವನ್ನು ನಾವು ಕ್ಲೀನ್‌ಸಿಟಿ ಎಂದು ಹೇಳುತ್ತೇವೆ. ಈ ನಿಟ್ಟಿನಲ್ಲಿ ಕ್ಲೀನ್ ಸಿಟಿ ಮಾಡಲು ನಿರ್ವಹಣೆ ಮಾರ್ಗ ಸರಿಯಾಗಿರಬೇಕು. ದಸರಾ ಮಹೋತ್ಸವಕ್ಕೂ ಮುನ್ನ ಹಲವು ಸಮಸ್ಯೆಗಳನ್ನು ಪರಿಹರಿಸಲು ಜನಪ್ರತಿನಿಧಿಗಳೊಂದಿಗೆ ನಗರ ಪ್ರದಕ್ಷಿಣೆ ಹಾಕಲಾಗುವುದು. ನಗರ ಪಾಲಿಕೆ, ಎಂಡಿಎ ಮೊದಲಾದ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸ, ಸಮಸ್ಯೆಗಳ ಪಟ್ಟಿಮಾಡಿಕೊಂಡು ಸಲ್ಲಿಸಬೇಕು. ಮತ್ತೊಂದು ಬಾರಿ ಪರಿಶೀಲಿಸಿದ ಮೇಲೆ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದರು.
ಹಿಂದುಳಿದ, ತುಳಿತಕ್ಕೊಳಗಾದವರ ಪರ ನಮ್ಮ ಸರ್ಕಾರವಿದೆ: ಸಚಿವ ಮಹದೇವಪ್ಪ
ನಗರದ ವ್ಯಾಪ್ತಿಯಲ್ಲಿ ಖಾಸಗಿ ಬಡಾವಣೆಗಳನ್ನು ರಚನೆ ಮಾಡಿದವರು, ಮೂಲ ಸೌಕರ್ಯವನ್ನು ಒದಗಿಸದಿದ್ದಲ್ಲಿ ಎನ್‌ಒಸಿ ಯಾಕೆ ಕೊಡಬೇಕು? ಸರ್ಕಾರದಿಂದ ನೀಡುವ ಹಣವನ್ನು ಸರಿಯಾಗಿ ಬಳಸಿಕೊಳ್ಳದಿದ್ದಲ್ಲಿ ಯಾವ ಅಭಿವೃದ್ಧಿಯೂ ಆಗುವುದಿಲ್ಲ ಎಂದು ಅವರು ತಿಳಿಸಿದರು. ನಗರದ ಯುಜಿಡಿ ಸಮಸ್ಯೆಯನ್ನು ಇತ್ಯರ್ಥಪಡಿಸುವ ಸಂಬಂಧ ಘನತ್ಯಾಜ್ಯ ನೀರು ನಿರ್ವಹಣಾ ಘಟಕಕ್ಕೆ ಸೇರದೆ ರಾಜಕಾಲುವೆ, ಮೋರಿಗಳಿಗೆ ಹರಿದು ಹೋಗುವುದನ್ನು ಗುರುತಿಸುವುದು, ಲಿಂಕ್ ಮಾಡಿರುವುದನ್ನು ಪತ್ತೆ ಹಚ್ಚುವುದರ ಜೊತೆಗೆ ಯುಜಿಡಿ ನೀರು ನೇರವಾಗಿ ಎಸ್‌ಟಿಪಿ ಪ್ಲಾಂಟ್‌ಗೆ ಸೇರುವಂತೆ ಮಾಡಲು ಡಿಪಿಆರ್ ತಯಾರು ಮಾಡಿ ಸಲ್ಲಿಸುವಂತೆ ನಗರ ಪಾಲಿಕೆ ಆಯುಕ್ತರಿಗೆ ಸಚಿವರು ಸೂಚಿಸಿದರು.