
ಗದಗ (ಅ.23): ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಕಲ್ಯಾಣಕ್ಕೆ ಸಂಬಂಧಿಸಿದಂತೆ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು. ಬೆಟಗೇರಿಯ ಹುಯಿಲಗೋಳ ರಸ್ತೆಯಲ್ಲಿರುವ ವೆಂಕಟೇಶ್ವರ ಕಲ್ಯಾಣಮಂಟಪದಲ್ಲಿ ಹುಯಿಲಗೋಳ ಟ್ರಸ್ಟ್ ಆಶ್ರಯದಲ್ಲಿ ಜರುಗಿದ ಜಿಲ್ಲಾ ನೇಕಾರ ಕುರುಹಿನಶೆಟ್ಟಿ ಸಂಘದ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಮುದಾಯಗಳ ಹಾಗೂ ಅಲ್ಪಸಂಖ್ಯಾತ ಅವಕಾಶ ವಂಚಿತ ಸಮುದಾಯಗಳ ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಅದಕ್ಕಾಗಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಅದಕ್ಕೆ ಸಮುದಾಯದವರು ಸ್ಪಂದಿಸಬೇಕು ಎಂದರು. ಒಗ್ಗಟ್ಟಿನಿಂದ ಮುನ್ನಡೆದರೆ ಅಭಿವೃದ್ಧಿ ಕಟ್ಟಿಟ್ಟ ಬುತ್ತಿ. ಈ ಸಮುದಾಯಗಳಿಗೆ ನಾಯಕತ್ವದ ಗುಣ ಅಗತ್ಯ. ಈ ಹಿನ್ನೆಲೆ ಸಣ್ಣಪುಟ್ಟ ಸಮುದಾಯಗಳು ಯಾವುದೇ ರೀತಿಯ ಬಿನ್ನಾಭಿಪ್ರಾಯಗಳಿಗೆ ಕಿವಿಗೊಡದೇ ಒಗ್ಗಟ್ಟಿನಿಂದ ಮುನ್ನಡೆದು, ಸಮಾಜದ ಮುಖ್ಯವಾಹಿನಿಯಲ್ಲಿ ಬಂದರೆ ಪ್ರಗತಿ ಸಾಧ್ಯ ಎಂದರು.
ನರಗುಂದ ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ಕುರುಹಿನಶೆಟ್ಟಿ ಸಮಾಜದ ಯಾವುದೇ ಬೇಡಿಕೆಗಳಿದ್ದರೂ ಅದನ್ನು ಸರ್ಕಾರದ ಮಟ್ಟದಲ್ಲಿ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಿ, ಸಮಸ್ಯೆಗಳು ಹಾಗೂ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ತಾಲೂಕ ಕುರುಹಿನಶೆಟ್ಟಿ ಸಂಘದ ಅಧ್ಯಕ್ಷ ರಮೇಶ ಅರಹುಣಸಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಡಿ.ಆರ್. ಪಾಟೀಲ ಮಾತನಾಡಿದರು.
ಸಾಮೂಹಿಕ ವಿವಾಹಗಳಲ್ಲಿ ನಡೆಯುವ ಬಾಲ್ಯವಿವಾಹ ತಡೆಗಟ್ಟಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಾಮೂಹಿಕ ವಿವಾಹಗಳು ನಡೆಯುವ ಕಡೆ ಒಂದು ದಿನ ಮುಂಚಿತವಾಗಿಯೇ ಹೋಗಬೇಕು. ಪೊಲೀಸರ ನೆರವು ಪಡೆದು ವಿಡಿಯೋ ಚಿತ್ರೀಕರಣದ ಮೂಲಕ ಪರಿಶೀಲನೆ ನಡೆಸಿ, ಬಾಲ್ಯವಿವಾಹ ನಡೆಯದಂತೆ ನೋಡಿಕೊಳ್ಳಬೇಕು ಎಂದರು.
ಮುಂದಿನ ದಿನಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಸಂಘ- ಸಂಸ್ಥೆಗಳು, ಆಯೋಜಕರು ಕಡ್ಡಾಯವಾಗಿ ಮಕ್ಕಳ ರಕ್ಷಣಾ ಘಟಕದಿಂದ ನಿರಪೇಕ್ಷಣಾ ಪತ್ರ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಮಾರ್ಗಸೂಚಿ ಪ್ರಕಟಿಸಲಿದ್ದು, ಅಧಿಕಾರಿಗಳು ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.ಮಕ್ಕಳ ಸಹಾಯವಾಣಿ 1098ಗೆ ಯಾವ ಸಂದರ್ಭದಲ್ಲಿ ಮತ್ತು ಯಾವ ಉದ್ದೇಶಕ್ಕೆ ಕರೆ ಮಾಡಬೇಕು. ಬಾಲ ನ್ಯಾಯ ಮಂಡಳಿಯ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ಕೈಗೊಳ್ಳಬೇಕು. ಬಾಲ ನ್ಯಾಯ ಮಂಡಳಿ ಆವರಣದಲ್ಲಿ ವಿಶಾಲವಾದ ಜಾಗವಿದ್ದು, ತೋಟಗಾರಿಕೆ ಇಲಾಖೆ ನೆರವಿನಿಂದ ಉದ್ಯಾನ ನಿರ್ಮಾಣ ಮಾಡಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.