ಪ್ರಧಾನಿ ಮೋದಿ ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿ ರೈತ ಸಾಲ ಮಾಡುವಂತೆ ಮಾಡಿದ್ದಾರೆ. ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿ ಅನೇಕ ಉದ್ಯೋಗ ಕಡಿತವಾಗಿದೆ. ಮೋದಿ ಆಡಳಿತದಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದ ಸಚಿವ ಪಾಟೀಲ
ಬಾಗಲಕೋಟೆ(ಮಾ.15): ಬರಗಾಲ ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಆದರೆ, ರಾಜ್ಯದ ಬಿಜೆಪಿ ಯ ಎಷ್ಟು ಜನ ಸಂಸದರು ಕೇಂದ್ರದಿಂದ ಬರ ಪರಿಹಾರ ತಂದಿದ್ದಾರೆ ಎಂಬುದರ ಬಗ್ಗೆ ಒಬ್ಬರೂ ಮಾತನಾಡಿಲ್ಲ, ಇಂಥವರಿಗೆ ಬರ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸುವ ನೈತಿಕತೆ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಎಚ್. ಕೆ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಯಾವ ಸಚಿವರು ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟ ಪಡಿಸಿದರು. ಸೋಲಿನ ಭಯದಿಂದ ಸಚಿವರು ಸ್ಪರ್ಧೆ ಮಾಡುತ್ತಿಲ್ಲ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸೋಲಿನ ಭಯ ಇಲ್ಲ, ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಗ್ಯಾರಂಟಿ ಯೋಜನೆಗಳಿಗೆ ಬೊಮ್ಮಾಯಿ ಅಷ್ಟೇ ಅಲ್ಲ, ಮೋದಿಯೇ ನಡುಗಿದ್ದಾರೆ. ನಮ್ಮ ಗ್ಯಾರಂಟಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮೋದಿ ಗ್ಯಾರಂಟಿ ಅಂತಾ ಹೇಳುತ್ತಿದ್ದಾರೆ. ಮೋದಿ ಗ್ಯಾರಂಟಿ ಯಾರು ಕೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
undefined
ಮದರಸಾಗಳು ಭಯೋತ್ಪಾದಕರನ್ನು ತಯಾರು ಮಾಡುವ ಕಾರ್ಖಾನೆಗಳಾಗಿವೆ: ಪ್ರಮೋದ್ ಮುತಾಲಿಕ್ ಕಿಡಿ
ಪ್ರಧಾನಿ ಮೋದಿ ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿ ರೈತ ಸಾಲ ಮಾಡುವಂತೆ ಮಾಡಿದ್ದಾರೆ. ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿ ಅನೇಕ ಉದ್ಯೋಗ ಕಡಿತವಾಗಿದೆ. ಮೋದಿ ಆಡಳಿತದಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.
ಗ್ಯಾರಂಟಿ ಜನರು ಕೇಳುತ್ತಾರೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆಯನ್ನು ಕೇಳುತ್ತಾರೆ. ಶ್ರೀಮಂತರ ಪರ ಇದ್ದ ಮನಸುಗಳು ಗ್ಯಾರಂಟಿ ಒಪ್ಪಲ್ಲ, ಜಗತ್ತಿನಲ್ಲಿ ಕೆಲವೇ ತಿಂಗಳಲ್ಲಿ 1.10ಕೋಟಿಬಡಕುಟುಂಬಗಳನ್ನು ಬಡತನ ರೇಖೆಗಿಂತ ಮೇಲೆತ್ತಿದ್ದ ಇತಿಹಾಸ ನಮ್ಮದು ಎಂದರು. ದೇಶದಲ್ಲಿ ಚುನಾವಣೆ ಯಾವಾಗ ಆಗುತ್ತದೆ ಎನ್ನುವುದು ಮಟಕಾ (ಓಸಿ) ನಂಬರ್‌ರೀತಿ ಆಗಿದೆ. ಚುನಾವಣೆ ಘೋಷಣೆಯಾಗಬೇಕು ಎನ್ನುವಷ್ಟರಲ್ಲಿ ಚುನಾವಣೆ ಅಧಿಕಾರಿ ಒಬ್ಬ ಅಧಿಕಾರಿ ರಾಜೀನಾಮೆ ನೀಡಿದ್ದಾರೆ. ಅವರು ಯಾಕೆ ರಾಜೀನಾಮೆ ನೀಡಿದರು ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಬೇಕು ಎಂದು ಸಚಿವ ಪಾಟೀಲ ಆಗ್ರಹಿಸಿದರು.