ಸರ್ಕಾರ ಬೀಳಿಸುತ್ತೇವೆ ಎಂಬುದು ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು: ಸಚಿವ ಎಚ್.ಕೆ.ಪಾಟೀಲ್

By Kannadaprabha News  |  First Published Dec 11, 2023, 8:46 PM IST

ಸರ್ಕಾರ ಬೀಳಿಸುತ್ತೇವೆ ಎಂಬುದು ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪಥನವಾಗುತ್ತೆ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮೈಸೂರಿನಲ್ಲಿ ಭಾನುವಾರ ಪ್ರತಿಕ್ರಿಯಿಸಿದರು.


ಮೈಸೂರು (ಡಿ.11): ಸರ್ಕಾರ ಬೀಳಿಸುತ್ತೇವೆ ಎಂಬುದು ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪಥನವಾಗುತ್ತೆ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಮೈಸೂರಿನಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಈಗ ಅಧಿವೇಶನ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿ ಸರ್ಕಾರವನ್ನ ಅಲೆಗಾಡಿಸಲು ಮುಂದಾಗ್ತಿದ್ದಾರೆ. ನಾವು ಗಟ್ಟಿಯಾಗಿದ್ದೇವೆ, ಆ ರೀತಿ ಆಗಲ್ಲ ಎಂದರು.  ರಾಜ್ಯದಲ್ಲಿ ಬಹುಮತದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 

ಹೀಗಿರುವಾಗ ವಿರೋಧ ಪಕ್ಷದವರಾಗಲಿ ಅಥವಾ ಯಾರೇ ಆಗಲಿ ಸರ್ಕಾರವನ್ನು ಬೀಳಿಸುತ್ತೇವೆ ಎಂಬುದು ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಬೆಳವಣಿಗೆಯಲ್ಲ ಎಂದು ಅವರು ಕಿಡಿಕಾರಿದರು. ಸಿಎಂ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ನಾನು ನೋಡಿಲ್ಲ. ಕೆಲವೊಮ್ಮೆ ಮಾಧ್ಯಮಗಳೇ ಇಂತಹ ವಿಚಾರವನ್ನ ಪ್ರಸ್ತಾಪ ಮಾಡುತ್ತಿವೆ. ಇದು ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದರು. ವಕೀಲರ ರಕ್ಷಣೆಗೆ ಈಗಾಗಲೇ ಮಸೂದೆ ಸಿದ್ಧಪಡಿಸಲಾಗಿದೆ. ವಾದ ಪ್ರತಿವಾದಗಳು ನಡೆಯುತ್ತಿವೆ. ವಕೀಲರ ರಕ್ಷಣೆಗೆ ಸಿದ್ದರಿದ್ಧೇವೆ. ಈ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಿ ವಕೀಲರ ಸಂರಕ್ಷಣೆ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಅವರು ತಿಳಿಸಿದರು.

Tap to resize

Latest Videos

ನಿವೃತ್ತ ಅಧಿಕಾರಿ ನೇತೃತ್ವದಲ್ಲಿ ಅರ್ಜುನ ಸಾವಿನ ತನಿಖೆ: ಸಚಿವ ಈಶ್ವರ ಖಂಡ್ರೆ

ರಾಜ್ಯ ಸರ್ಕಾರ ಗಟ್ಟಿಯಾಗಿದೆ, ಪತನ ಆಗಲ್ಲ: ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಲೋಕಸಭಾ ಚುನಾವಣೆ ಬಳಿಕ ಸರ್ಕಾರ ಪತನ ಆಗಲಿದೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದ್ದಾರೆ ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಆರೋಪಿಸಿದರು. ಮಾತನಾಡಿ, ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಈಗ ಅಧಿವೇಶನ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ ಪತನ ಆಗುತ್ತದೆ ಎಂಬ ಹೇಳಿಕೆ ನೀಡಿ ಸರ್ಕಾರವನ್ನು ಅಲುಗಾಡಿಸಲು ಮುಂದಾಗುತ್ತಿದ್ದಾರೆ. ಆದರೆ ನಾವು ಗಟ್ಟಿಯಾಗಿದ್ದೇವೆ, ಅವರು ಹೇಳಿದಂತೆ ಸರ್ಕಾರ ಪತನ ಆಗಲ್ಲ ಎಂದರು.

ಕೊಬ್ಬರಿಗೆ ಬೆಂಬಲ ಬೆಲೆಗಾಗಿ ಅರಸೀಕೆರೆಯಿಂದ ತುಮಕೂರಿಗೆ ಪಾದಯಾತ್ರೆ: ಎಚ್‌ಡಿಕೆ

ರಾಜ್ಯದಲ್ಲಿ ಬಹುಮತದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಿರುವಾಗ ವಿರೋಧ ಪಕ್ಷದವರಾಗಲಿ ಅಥವಾ ಯಾರೇ ಆಗಲಿ ಸರ್ಕಾರವನ್ನು ಬೀಳಿಸುತ್ತೇವೆ ಎಂದು ಹೇಳುವುದು ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಬೆಳವಣಿಗೆಯಲ್ಲ ಎಂದು ಕಿಡಿಕಾರಿದರು. ಇದೇ ವೇಳೆ ಮುಖ್ಯಮಂತ್ರಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹರಿಪ್ರಸಾದ್ ಹೇಳಿಕೆ ನಾನು ನೋಡಿಲ್ಲ. ಕೆಲವೊಮ್ಮೆ ಮಾಧ್ಯಮಗಳೇ ಇಂಥ ವಿಚಾರವನ್ನು ಪ್ರಸ್ತಾಪ ಮಾಡುತ್ತಿವೆ. ಇದು ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದರು.

click me!