
ಸಂಡೂರು(ನ.10): ಪ್ರಧಾನಿ ಮೋದಿ ವಚನ ಭ್ರಷ್ಟರಾಗಿದ್ದಾರೆ. ಅವರು ನೀಡಿದ್ದ 15 ಲಕ್ಷ ಅಕೌಂಟಿಗೆ ಹಾಕುವ, 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಗಳನ್ನು ಈಡೇರಿಸಿಲ್ಲ ಎಂದು ಸಚಿವ ಎಚ್.ಕೆ. ಪಾಟೀಲ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರು ನಡೆಸಿದ ಆಡಳಿತ ಶೈಲಿಯಿಂದಾಗಿ ಈ ಬಾರಿಯ ಲೋಕಸಭಾ ಚುನಾವಣೆಯ ನಂತರ ಅಧಿಕಾರದಲ್ಲಿ ಮುಂದುವರಿಯಲು ಎರಡು ರಾಜ್ಯಗಳ ಆಸರೆ ಪಡೆಯಬೇಕಾಯಿತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೊರೋನಾ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆಸಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಹಾಗೂ ಶ್ರೀರಾಮುಲು ಅವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಲಾಗಿದೆ ಎಂದು ಟೀಕಿಸಿದರು.
ಸಿಎಂ ಜನಪ್ರಿಯತೆ ಹೆಚ್ಚಾದಂತೆ ಅಡೆತಡೆ ಸಹಜ: ಎಚ್.ಕೆ ಪಾಟೀಲ್
ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ಮಿಂಚಿನ ಸಂಚಾರ, ಅವರಿಗೆ ದೊರೆಯುತ್ತಿರುವ ಜನಸ್ಪಂದನ ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ಸಂಸದ ಈ. ತುಕಾರಾಂ ತಾವು ಶಾಸಕರಾಗಿದ್ದ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಕಣ್ಣಿಗೆ ಕಾಣುತ್ತಿವೆ. ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳು ಪಕ್ಷದ ಅಭ್ಯರ್ಥಿ ಈ. ಅನ್ನಪೂರ್ಣಾ ತುಕಾರಾಂ ಅವರ ಕೈಹಿಡಿಯಲಿವೆ. ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ಒಂದು ಪೈಸೆಯೂ ಭ್ರಷ್ಟಾಚಾರ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುಮಾರು 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ ಎಂದು ಯಡಿಯೂರಪ್ಪ ಹೇಳುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ ಕುರಿತು ಮಾತನಾಡಲು ಯಡಿಯೂರಪ್ಪ ಅವರಿಗೆ ನೈತಿಕ ಹಕ್ಕಿದೆಯಾ? ಸಿದ್ದರಾಮಯ್ಯ ಅವರನ್ನು ಚುನಾವಣಾ ಪ್ರಚಾರಕ್ಕೆ ಬಾರದಂತೆ ತಡೆಯಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಅಬ್ಬರದ ಪ್ರಚಾರ ನೋಡಿ ಬಿಜೆಪಿಯವರಿಗೆ ಗಾಬರಿಯಾಗಿದೆ. ಜಿಲ್ಲೆಯಲ್ಲಿ ಗಣಿ ಲೂಟಿಯಾಗಿದ್ದನ್ನು ನೋಡಿದ್ದೀರಿ. ಲೂಟಿ ಮಾಡಿದವರು ಇಂದು ಒಂದಾಗಿದ್ದಾರೆ. ಜನತೆ ಅಭಿವೃದ್ಧಿಯನ್ನು ನೋಡುತ್ತಾರೆ ಎಂದರು.
ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ, ಕೆಪಿಸಿಸಿ ಉಪಾಧ್ಯಕ್ಷ ಎಆರ್‌ಎಂ ಹುಸೇನ್, ಪ್ರಧಾನ ಕಾರ್ಯದರ್ಶಿ ಷಣ್ಮುಖಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೋಮಪ್ಪ, ಮುಖಂಡರಾದ ಚೈತನ್ಯಾ, ಕೊಟ್ರೇಶ್ ಮುಂತಾದವರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.