ಸರ್ಕಾರ ನಡೆಯುತ್ತಿಲ್ಲ ಹೇಗೋ ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ: ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

By Suvarna News  |  First Published Aug 13, 2022, 7:51 PM IST

ತಮ್ಮ ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧವೇ ಸಚಿವ ಜೆಸಿ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ರೈತರೊಬ್ಬರು ಕರೆ ಮಾಡಿದಾಗ ಮಾಧುಸ್ವಾಮಿ ಸರ್ಕಾರದ ಆಡಳಿತ ವೈಖರಿ ಬಗ್ಗೆ ಬೇಸರ ಹೇಳಿಕೊಂಡಿದ್ದಾರೆ. ಇದೀಗ ಆ ಆಡಿಯೋ ಫುಲ್ ವೈರಲ್ ಆಗಿದೆ.


ಬೆಂಗಳೂರು, (ಆಗಸ್ಟ್.13): ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ತಮ್ಮ ರಾಜ್ಯ ಸರ್ಕಾರ ಆಡಳಿತದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. 

ರಾಜ್ಯದಲ್ಲಿ ಸರ್ಕಾರ ನಡೆಯುತ್ತಿಲ್ಲ ಹೇಗೋ ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ ಎಂದು ಮಾಧುಸ್ವಾಮಿ ರೈತನ ಬಳಿ ಅಸಹಾಯಕತೆ ತೋಡಿಕೊಂಡಿದ್ದಾರೆ. ಇದೀಗ ಆ ವಿಡಿಯೋ ಫುಲ್ ವೈರಲ್ ಅಗಿದೆ.

Tap to resize

Latest Videos

ರಾಮನಗರದಲ್ಲಿ ಜೆಡಿಎಸ್‌ಗೆ ಶಾಕ್ ಕೊಟ್ಟ ಅಶ್ವತ್ಥ್ ನಾರಾಯಣ, ಮಾಜಿ MLC ಬಿಜೆಪಿ ಸೇರ್ಪಡೆ

ಚನ್ನಪಟ್ಟಣದ ಭಾಸ್ಕರ್ ಎಂಬ ವ್ಯಕ್ತಿ ಕರೆ ಮಾಡಿ ಬ್ಯಾಂಕ್ ಸಾಲ ತೀರಿಸುವ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಮಾಧುಸ್ವಾಮಿ ಅವರು ತಮ್ಮ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಹಾಯಕತೆ ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ಭಾಸ್ಕರ್ ಹಾಗೂ ಮಾಧುಸ್ವಾಮಿ ನಡುವೆ ನಡೆದ ಸಂಭಾಷಣೆಯಲ್ಲಿ ಏನಿದೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಆಡಿಯೋದಲ್ಲಿ ಏನಿದೆ..?
ಭಾಸ್ಕರ್: ನಮಸ್ತೆ ಸರ್, ನಾನು ಚನ್ನಪಟ್ಟಣದಿಂದ ಸಮಾಜ ಸೇವಕ ಭಾಸ್ಕರ್ ಅಂತ. ವಿಎಸ್ಎಸ್‌ಎನ್ ಬ್ಯಾಂಕ್‌ನಲ್ಲಿ 50 ಸಾವಿರ ರೂಪಾಯಿ ಸಾಲ ಪಡೆದಿದ್ದಾರೆ ರೈತರು. ಆ ಹಣ ಕಟ್ಟಬೇಕಾದರೆ ರಿನೀವಲ್‌ಗೆ ಅಂತ 1,300 ರೂಪಾಯಿಯನ್ನ ಬ್ಯಾಂಕ್ ಸಿಬ್ಬಂದಿಗಳು ತಗೊಂಡು ಅವರೇ ಬಡ್ಡಿಗೆ ಅಂತ ಹಣ ಇಡ್ಕೊತ್ತಿದ್ದಾರೆ.

ಮಾಧುಸ್ವಾಮಿ: ಏನಪ್ಪ ಮಾಡ್ಲಿ... ಇದೆಲ್ಲ ನನಗೆ ಗೊತ್ತು, ಬಡ್ಡಿ ಹೊಡ್ಕೊಂಡು ತಿಂತಾರೆ ಅಂತ ಸನ್ಮಾನ್ಯ ಸೋಮಶೇಖರ್ ಅವರ ಗಮನಕ್ಕೂ ತಂದಿದ್ದೇನೆ. ಅವರೇನು ಕ್ರಮ ಜರುಗಿಸ್ತಾ ಇಲ್ವಲ್ಲಾ… ಏನ್ ಮಾಡೋದು?

ಭಾಸ್ಕರ್: ರೈತರನ್ನ ಬ್ಯಾಂಕ್‌ನವರು ಮಂಗನಂತೆ ಮಾಡಿಬಿಟ್ಟಿದ್ದಾರೆ ನೋಡಿ ಸರ್

ಮಾಧುಸ್ವಾಮಿ: ನಾನೇ ಕಟ್ಟಿದ್ದೀನಿ ಮಾರಾಯಾ, ರೈತರಲ್ಲ ನನ್ನ ಅತ್ರನೂ ತಗೊಂಡವೋ.

ಭಾಸ್ಕರ್: ನೋಡಿ ಸರ್ ಇದೆಲ್ಲಾ ನೋಡೋಕೆ ಸರಿ ಕಾಣೋದಿಲ್ಲ

ಮಾಧುಸ್ವಾಮಿ: ಸರ್ಕಾರ ನಡೀತಾ ಇಲ್ಲ ಇಲ್ಲಿ, ಮ್ಯಾನೇಜ್‌ಮೆಂಟ್ ಮಾಡ್ತಿದ್ದೀವಿ ಅಷ್ಟೆ. ತಳ್ಳಿದ್ರೆ ಸಾಕು ಇನ್ನು 8 ತಿಂಗಳು ಅಂತ ತಳ್ತಾ ಇದ್ದೀವಿ.

click me!