
ವಿಧಾನಸಭೆ (ಫೆ.17): ‘ದೇವೇಗೌಡರ ಕುಟುಂಬ ಎಟಿಎಂ ಇದ್ದಂತೆ’ ಎಂದಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸುತ್ತಿದ್ದ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದ ಕ್ರುದ್ಧರಾದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ನೀವು ಏನೇನು ಬೊಗಳಿದ್ದೀರಿ ನಾವು ಹೇಳಬೇಕಾ ಎಂದು ಪ್ರಶ್ನಿಸಿದ್ದು ಸದನದಲ್ಲಿ ಕೋಲಾಹಲಕರ ಸನ್ನಿವೇಶ ನಿರ್ಮಿಸಿ, ಬೊಗಳಿದ್ದೀರಿ ಪದ ಕಡತದಿಂದ ತೆಗೆಯುವಂತೆ ಆಗ್ರಹಿಸಿ ಜೆಡಿಎಸ್ ಸದಸ್ಯರು ಧರಣಿ ನಡೆಸಿದ ಘಟನೆ ನಡೆಯಿತು.
ಗುರುವಾರ ಭೋಜನ ವಿರಾಮದ ಬಳಿಕ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತು ಮುಂದುವರೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಯಾವನ್ರೀ ಗೃಹ ಸಚಿವ ಮಂಡ್ಯಕ್ಕೆ ಬಂದು ದೇವೇಗೌಡರ ಕುಟುಂಬ ಎಟಿಎಂ ಇದ್ದಂತೆ ಎಂದು ಹೇಳಿಕೆ ನೀಡುತ್ತಾನೆ. ನನ್ನ ಬಗ್ಗೆ ಬೇಕಾದರೆ ಮಾತನಾಡಲಿ, ಸಹಿಸಿಕೊಳ್ಳುತ್ತೇನೆ. ಚುನಾವಣೆ ಸಂದರ್ಭದಲ್ಲಿ ನಾಲ್ಕು ಜನರ ಬಳಿ ಹಣ ತಂದಿದ್ದೇನೆ. ಆದರೆ, ದೇವೇಗೌಡರು ಎಂದೂ ಹಣ, ಅಧಿಕಾರದ ಹಿಂದೆ ಹೋದವರಲ್ಲ, ಭ್ರಷ್ಟಾಚಾರ ನಡೆಸಿದವರಲ್ಲ.
ಸ್ವಂತ ಶಕ್ತಿ ಮೇಲೆ ಜೆಡಿಎಸ್ ಅಧಿಕಾರಕ್ಕೆ ಬರುವಂತೆ ಆಶೀರ್ವದಿಸಿ: ಎಚ್.ಡಿ.ಕುಮಾರಸ್ವಾಮಿ
ಅಂತಹವರ ಬಗ್ಗೆ ಇಂತಹ ಆರೋಪ ಮಾಡುವುದಕ್ಕೆ ಏನು ದಾಖಲೆ ಇದೆ? ಒಬ್ಬ ಗೃಹ ಸಚಿವ ಆದವರಿಗೆ ಇತಿಮಿತಿ ಇಲ್ಲವಾ? ಯಾವ ನೈತಿಕತೆ ಇದೆ ಈ ರೀತಿ ಮಾತನಾಡಲು ಎಂದು ಕೋಪೋದ್ರಿಕ್ತರಾಗಿ ಏರುಧ್ವನಿಯಲ್ಲಿ ಕಿಡಿ ಕಾರಿದರು. ಈ ವೇಳೆ ಮಧ್ಯಪ್ರವೇಶಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಸದನದ ಹೊರಗೆ ಯಾರೋ ಎಲ್ಲೋ ಮಾತನಾಡಿದ್ದನ್ನೆಲ್ಲಾ ಇಲ್ಲಿ ಪ್ರಸ್ತಾಪಿಸುತ್ತಿದ್ದೀರಿ. ಹೊರಗಡೆ ನೀವು ಏನು ಬೇಕಾದರೂ ಮಾತನಾಡಬಹುದಾ? ಏನು ಬೊಗಳಿದ್ದೀರಿ ಎಂದು ನಾವು ಹೇಳಬೇಕಾ ಎಂದು ತಿರುಗೇಟು ನೀಡಿದರು. ಇದಕ್ಕೆ ಜೆಡಿಎಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ‘ಬೊಗಳಿದ್ದೀರಿ’ ಎಂಬ ಪದವನ್ನು ಕಡತದಿಂದ ತೆಗೆಯಬೇಕೆಂದು ಆಗ್ರಹಿಸಿ ಬಾವಿಗಿಳಿದು ಧರಣಿ ನಡೆಸಿದರು.
ಬಿಜೆಪಿ ದುರಾಡಳಿತದ ವಿರುದ್ಧ ಜನತೆಗೆ ಬೇಸರ: ಸಿದ್ದರಾಮಯ್ಯ
ಕೊನೆಗೆ ತಮ್ಮ ನಾಯಕ ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಬಾವಿಯಿಂದ ಹಿಂತಿರುಗಿದರು. ಸ್ಪೀಕರ್ ಸ್ಥಾನದಲ್ಲಿದ್ದ ಕುಮಾರ ಬಂಗಾರಪ್ಪ ಅವರು ಬೊಗಳು ಪದ ಅಸಂವಿಧಾನಿಕವೇ ಎಂಬುದನ್ನು ಪರಿಶೀಲಿಸಿ ಕಡತದಿಂದ ತೆಗೆಯುವ ಬಗ್ಗೆ ಸ್ಪೀಕರ್ ನಿರ್ಧರಿಸುತ್ತಾರೆ ಎಂದರು. ಈಗ ಸದನದಲ್ಲಿ ನಿಮ್ಮ ಪಕ್ಷದ ನಾಯಕರೇ ಮಾತನಾಡುತ್ತಿದ್ದು, ಅವರ ಸಮಯ ಹಾಳು ಮಾಡಬೇಡಿ ಎಂದು ಮನವಿ ಮಾಡಿದರು. ಆದರೂ, ಜೆಡಿಎಸ್ ಸದಸ್ಯರು ಧರಣಿ ಮುಂದುವರೆಸಿದರು. ಕೊನೆಗೆ ತಮ್ಮ ನಾಯಕ ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಬಾವಿಯಿಂದ ಹಿಂತಿರುಗಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.