ಬಿಜೆಪಿ ಜನಹಿತ ಬಯಸುವ ಪ್ರಣಾಳಿಕೆ ರೂಪಿಸಲಿದೆ: ಸಚಿವ ಸುಧಾಕರ್‌

By Kannadaprabha NewsFirst Published Apr 6, 2023, 2:00 AM IST
Highlights

ಕಳೆದೊಂದು ತಿಂಗಳಿಂದ ನಿರಂತರವಾಗಿ ಕೂಲಿ ಕಾರ್ಮಿಕರರ, ರೈತರ, ಮಹಿಳೆಯರನ್ನು ಒಳಗೊಂಡಂತೆ ಸಮಾಜದಲ್ಲಿರುವ ಎಲ್ಲಾ ವರ್ಗದ ಜನರ ಅಭಿಪ್ರಾಯವನ್ನು ಪಡೆದು ನಾವು ಪ್ರಣಾಳಿಕೆ ರೂಪಿಸಲಿರುವುದರಿಂದ ಪ್ರಣಾಳಿಕ ಜನಪರವಾಗಿ ಜನಹಿತದ ಜೊತೆಗೆ ಸತ್ಯದಿಂದ ಕೂಡಿರುತ್ತದೆ ಎಂದ ಸಚಿವ ಸುಧಾಕರ್‌. 

ಚಿಕ್ಕಬಳ್ಳಾಪುರ(ಏ.06):  ಸಮಾಜದಲ್ಲಿರುವ ಎಲ್ಲ ವಲಯಗಳ ಭಾಗಿದಾರರ ಜೊತೆ ಚರ್ಚೆ ನಡೆಸಿ ಜನಹಿತವಾದ ಪ್ರಣಾಳಿಕೆಯನ್ನು ರೂಪಿಸಲಾಗುವುದೆಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಸಂಚಾಲಕರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಬುಧವಾರ ಜಿಲ್ಲೆಯ ಹೂ, ಹಣ್ಣು, ತರಕಾರಿ ಬೆಳೆಗಾರರ ಜೊತೆಗೆ ಚುನಾವಣಾ ಪ್ರಣಾಳಿಕೆ ಸಂಬಂದ ಅಭಿಪ್ರಾಯ ಸಂಗ್ರಹಿಸಿ ಮಾತನಾಡಿದ ಅವರು, ಬೇರೆಯವರ ರೀತಿ ನಾವು ಎಸಿ ಕೊಠಡಿಯಲ್ಲಿ ಕೂತು ಪ್ರಣಾಳಿಕೆ ಸಿದ್ದಪಡಿಸುವುದಿಲ್ಲ ಎಂದು ಕಾಂಗ್ರೆಸ್‌ಗೆ ಪರೋಕ್ಷವಾಗಿ ಟಾಂಗ್‌ ನೀಡಿದರು.

Latest Videos

ಗುರುಮಠಕಲ್‌: ಕಾಂಗ್ರೆಸ್‌, ಜೆಡಿಎಸ್‌ ಕಾರ್ಯಕರ್ತರ ಮಧ್ಯೆ ಘರ್ಷಣೆ, ಚಿಂಚನಸೂರು ಮೇಲೆ ಹಲ್ಲೆ ಯತ್ನ

ಎಲ್ಲ ವರ್ಗಗಳ ಅಭಿಪ್ರಾಯ ಸಂಗ್ರಹ

ಕಳೆದೊಂದು ತಿಂಗಳಿಂದ ನಿರಂತರವಾಗಿ ಕೂಲಿ ಕಾರ್ಮಿಕರರ, ರೈತರ, ಮಹಿಳೆಯರನ್ನು ಒಳಗೊಂಡಂತೆ ಸಮಾಜದಲ್ಲಿರುವ ಎಲ್ಲಾ ವರ್ಗದ ಜನರ ಅಭಿಪ್ರಾಯವನ್ನು ಪಡೆದು ನಾವು ಪ್ರಣಾಳಿಕೆ ರೂಪಿಸಲಿರುವುದರಿಂದ ಪ್ರಣಾಳಿಕ ಜನಪರವಾಗಿ ಜನಹಿತದ ಜೊತೆಗೆ ಸತ್ಯದಿಂದ ಕೂಡಿರುತ್ತದೆ ಎಂದರು. ಕೇಂದ್ರ ವಿತ್ತ ಸಚಿವರು, ಪಿಯೂಷ್‌ ಗೋಯೆಲ್‌ ಕೂಡ ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರಕ್ಕೆ ಪ್ರಣಾಳಿಕೆ ಭಾಗವಾಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆಂದರು. ಜನರಿಂದ ಜನರಿಗಾಗಿ ಜನರಗೋಸ್ಕರ ಮುಂದಿನ 5 ವರ್ಷಗಳಲ್ಲಿ ಅನುಷ್ಟಾನಕ್ಕೆ ತರಬಹುದಾದ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ತರಲಾಗುವುದೆಂದು ಸಚಿವ ಸುಧಾಕರ್‌ ತಿಳಿಸಿದರು.

ಮೂಲಕ ಸಭೆಯಲ್ಲಿ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ಚಿಕ್ಕಬಳ್ಳಾಪುರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಹಾಪ್‌ಕಾಮ್ಸ್‌ ಮಾಜಿ ಅಧ್ಯಕ್ಷ ಜಿ.ಆರ್‌.ಶ್ರೀನಿವಾಸ್‌, ಬಿಜೆಪಿ ಮಂಡಲ ಅಧ್ಯಕ್ಷ ಕೃಷ್ಣಾರೆಡ್ಡಿ, ತಾಪಂ ಮಾಜಿ ಅಧ್ಯಕ್ಷ ಮೋಹನ್‌, ಬಿಜೆಪಿ ನಗರ ಘಟಕದ ಅಧ್ಯಕ್ಷ ಆನಂದ್‌, ಎಂಎಫ್‌ಸಿ ನಾರಾಯಣಸ್ವಾಮಿ ಮತ್ತಿತರರು ಇದ್ದರು.

ಬಿಜೆಪಿಯಲ್ಲಿ ಬಹಳ ಎಚ್ಚರಿಕೆಯಿಂದ ಅಭ್ಯರ್ಥಿಗಳ ಆಯ್ಕೆ, ಪ್ರತಿ ಕ್ಷೇತ್ರದಿಂದ ಮೂವರು ಆಕಾಂಕ್ಷಿಗಳ ಹೆಸರು!

ಕೀಟನಾಶಕ ಬೆಲೆ ಇಳಿಸಲು ಮನವಿ

ಬಿಜೆಪಿ ಚುನಾವಣಾ ಪ್ರಣಾಳಿಕೆಗೆ ಅಭಿಪ್ರಾಯ ಸಂಗ್ರಹಕ್ಕೆಂದು ಬುಧವಾರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅಧ್ಯಕ್ಷತೆಯಲ್ಲಿ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸಭೆಗೆ ಹೂ, ಹಣ್ಣು, ದ್ರಾಕ್ಷಿ ಬೆಳೆಗಾರರು ಬೆಲೆ ಏರಿಕೆ ಆಗಿರುವ ಔಷಧಿ, ಕೀಟನಾಶಕ ಹಾಗೂ ಕ್ರಿಮನಾಶಕಗಳನ್ನು ತಂದು ಮೊದಲು ಇವುಗಳ ಬೆಲೆ ಇಳಿಸಬೇಕು, ಔಷದಿಗಳ ಬೆಲೆ ದುಪ್ಪಟ್ಟು ಆಗಿದೆ. ಮೊದಲು ಔಷದಿಗಳಿಗೆ ಸಬ್ಸಿಡಿ ಕೊಡಬೇಕು, ಹೂ, ಹಣ್ಣು, ತರಕಾರಿ ರಪ್ಪುಗೆ ಅವಕಾಶ ಕಲ್ಪಿಸಬೇಕೆಂದು ಸಚಿವ ಸುಧಾಕರ್‌ ಅವರನ್ನು ಒತ್ತಾಯಿಸಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!