ಕೇಂದ್ರ ಸರ್ಕಾರ ಜನರ ಹೊಟ್ಟೆ ಮೇಲೆ ಹೊಡೆದು ಅಧಿಕಾರ ನಡೆಸ್ತಿದೆ: ಸಚಿವ ವೆಂಕಟೇಶ್‌ ವಾಗ್ದಾಳಿ

Published : Apr 03, 2025, 05:57 PM ISTUpdated : Apr 03, 2025, 06:18 PM IST
ಕೇಂದ್ರ ಸರ್ಕಾರ ಜನರ ಹೊಟ್ಟೆ ಮೇಲೆ ಹೊಡೆದು ಅಧಿಕಾರ ನಡೆಸ್ತಿದೆ: ಸಚಿವ ವೆಂಕಟೇಶ್‌ ವಾಗ್ದಾಳಿ

ಸಾರಾಂಶ

ಕೇಂದ್ರ ಸರ್ಕಾರ ಎಲ್ಲದರ ಮೇಲೆ ಟ್ಯಾಕ್ಸ್‌ ಹಾಕಿ ಜನರ ಹೊಟ್ಟೆ ಮೇಲೆ ಹೊಡೆದು ಬಿಜೆಪಿ ಸರ್ಕಾರ ನಡೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 

ಗುಂಡ್ಲುಪೇಟೆ (ಏ.03): ಕೇಂದ್ರ ಸರ್ಕಾರ ಎಲ್ಲದರ ಮೇಲೆ ಟ್ಯಾಕ್ಸ್‌ ಹಾಕಿ ಜನರ ಹೊಟ್ಟೆ ಮೇಲೆ ಹೊಡೆದು ಬಿಜೆಪಿ ಸರ್ಕಾರ ನಡೆಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಗುಂಡ್ಲುಪೇಟೆ ಹಾಗೂ ಬೇಗೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ಧ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.

ಹಾಲಿಗೆ ನಾಲ್ಕು ದರ ಏರಿಕೆ ಮಾಡಿ ನೇರವಾಗಿ ರೈತರಿಗೆ ನಮ್ಮ ಸರ್ಕಾರ ನೀಡುತ್ತಿದೆ. ಇದಕ್ಕೆ ಬಿಜೆಪಿ ಅಹೋರಾತ್ರಿ ಧರಣಿ ನಡೆಸುವ ಮೂಲಕ ರಾಜ್ಯದ ಜನರ ದಾರಿ ತಪ್ಪಿಸುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ 40 ರಿಂದ 50 ಡಿಸೇಲ್‌, ಪೆಟ್ರೋಲ್‌ 50 ರಿಂದ 60 ರು. ಇತ್ತು ಬಿಜೆಪಿಯ ಕೇಂದ್ರ ಸರ್ಕಾರ ಬಂದ ಮೇಲೆ ಡಿಸೇಲ್‌, ಪೆಟ್ರೋಲ್‌ ಬೆಲೆ ಎಷ್ಟಿದೆ ಎಂಬುದು ಬಿಜೆಪಿಗರಿಗೆ ಗೊತ್ತಿಲ್ಲವೇ? ಹಾಲಿನ ದರ ಏರಿಕೆ ಮಾಡಲಾಗಿದೆ ಅದು ರೈತರಿಗೆ ತಲುಪುತ್ತದೆ ಸರ್ಕಾರಕ್ಕಲ್ಲ ಎಂದರು.

ನನ್ನ ಗೆಲುವಿನಲ್ಲಿ ಯಡಿಯೂರಪ್ಪ ಶ್ರಮವಿದೆ: ಸಂಸದ ಗೋವಿಂದ ಕಾರಜೋಳ

ಸಹಾಯ ತಪ್ಪಾ?: ರಾಜ್ಯ ಸರ್ಕಾರ 60 ಸಾವಿರ ಕೋಟಿ ಬಡವರ ಗ್ಯಾರಂಟಿ ಯೋಜನೆಗಳಿಗೆ ನೀಡುತ್ತದೆ ಬಡವರಿಗೆ ಸಹಾಯ ಮಾಡೋದು ತಪ್ಪಾ? ಬಡವರ ಕಷ್ಟಕ್ಕೆ ಬಂದರೆ ರಾಜ್ಯ ಸರ್ಕಾರ ಖಾಲಿಯಾಗಿದೆ ಎಂದು ಬಿಜೆಪಿಗರು ಬೊಬ್ಬೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಗುಂಡ್ಲುಪೇಟೆ ನನ್ನ ಕ್ಷೇತ್ರದಂತೆ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ತಂದೆ ದಿವಂಗತ ಎಚ್.ಎಸ್. ಮಹದೇವಪ್ರಸಾದ್‌ ನನಗೆ ಆಪ್ತ ಸ್ನೆಹಿತ. ಗುಂಡ್ಲುಪೇಟೆಗೆ ಬಂದರೆ ನನ್ನ ಕ್ಷೇತ್ರಕ್ಕೆ ಬಂದ ಭಾವನೆ ಬರುತ್ತದೆ. ಶಾಸಕ ಯುವಕ ಸಣ್ಣ ಪುಟ್ಟ ತಪ್ಪುಗಳಾದರೆ ತಿದ್ದಿ ತೀಡುವ ಕೆಲಸ ಕಾರ್ಯಕರ್ತರು ಮಾಡಬೇಕು. ಸಣ್ಣ ವಿಚಾರವನ್ನೆ ದೊಡ್ಡದು ಮಾಡಬೇಡಿ ಎಂದರು. ಮುಂದೆ ಜಿಪಂ, ತಾಪಂ, ಪುರಸಭೆ ಚುನಾವಣೆಗಳು ಬರುತ್ತವೆ. ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು. ಅಲ್ಲದೆ ಹೆಚ್ಚಿನ ಅಭ್ಯರ್ಥಿ ಗೆಲ್ಲಿಸಿ ಅಧಿಕಾರ ಹಿಡಿಯಲು ಶ್ರಮಿಸಿ ಎಂದರು.

ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಮನವಿ ಮಾಡಿದ್ದಾರೆ. ನನ್ನ ಸಹಕಾರ ಜಿಲ್ಲೆ ಹಾಗೂ ಗುಂಡ್ಲುಪೇಟೆಗೆ ಇದೆ. ಶಾಸಕರು ಹಾಗೂ ಕಾರ್ಯಕರ್ತರಿಗೂ ನಾನು ಸಹಕಾರ ನೀಡುತ್ತೇನೆ ಎಂಬ ಭರವಸೆಯ ಮಾತನಾಡಿದರು. ಅಧಿಕಾರ ಕಳೆದುಕೊಂಡು ಬಿಜೆಪಿಗರಿಗೆ ಇರಲು ಆಗುತ್ತಿಲ್ಲ. ಮುಖ್ಯಮಂತ್ರಿಗಳ ಮೇಲೆ ಮುಡಾ ಹಗರಣ ಎತ್ತಿಕೊಂಡು ಹೋರಾಟ ಮಾಡಿ ಸಿಎಂ ಮುಖಕ್ಕೆ ಮಸಿ ಬಳಿಯಲು ಹೊರಟಿದ್ದಾರೆ. ಬಿಜೆಪಿಗರ ಆರೋಪ, ಟೀಕೆಗೆ ರಾಜ್ಯದ ಜನರು ತಲೆ ಕೆಡಿಸಿಕೊಳ್ಳಬೇಡಿ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆದ ಕಾಡ ಅಧ್ಯಕ್ಷ ಪಿ. ಮರಿಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರೇ ನಮಗೆ ಸರ್ಕಾರ ಹಾಗಾಗಿ ಪಕ್ಷ ಅಧಿಕಾರಕ್ಕೆ ಬರಲು ಕಾರಣರಾದ ಕಾರ್ಯಕರ್ತರಿಗೆ ಅಧಿಕಾರ ನೀಡಬೇಕು ಎಂದರು. ಜಿಲ್ಲಾ ಉಸ್ತುವಾರಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರಿಗಾಗಿ ಒಂದು ಗಂಟೆ ಬಿಡುವು ಮಾಡಿಕೊಂಡು ಸಮಸ್ಯೆ ಆಲಿಸಬೇಕು ಎಂದು ಒತ್ತಾಯಿಸಿದರು.

ಪರಮೇಶ್ವರ್ ಬಿಟ್ಟು ಉಳಿದ ಎಲ್ಲರೂ ಡಿಕೆಶಿ ಡಿನ್ನರ್ ಪಾರ್ಟಿಗೆ ಹೋಗಿದ್ವಿ: ಎಂ.ಬಿ.ಪಾಟೀಲ್‌

ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಎಂ.ಮುನಿರಾಜು, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಲತಾ ರಾಜಶೇಖರ್(ಜತ್ತಿ), ಪುರಸಭೆ ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್‌.ನಂಜುಂಡಪ್ರಸಾದ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಬಿ.ರಾಜಶೇಖರ್, ಪುರಸಭೆ ಅಧ್ಯಕ್ಷ ಮಧು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಉಮಾಪತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಲತಾ ಜತ್ತಿ, ಹಾಪ್ ಕಾಮ್ಸ್ ಅಧ್ಯಕ್ಷ ಎಂ.ನಾಗೇಶ್, ಕಾಂಗ್ರೆಸ್ ಮುಖಂಡ ಬಿ.ಕುಮಾರಸ್ವಾಮಿ, ಪುರಸಭೆ, ಎಪಿಎಂಸಿ ಸದಸ್ಯರು, ಜಿಪಂ, ತಾಪಂ ಮಾಜಿ ಸದಸ್ಯರು, ಗ್ರಾಪಂ ಮಾಜಿ ಅಧ್ಯಕ್ಷ,ಸದಸ್ಯರು ಸೇರಿದಂತೆ ನೂರಾರು ಮಂದಿ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

West bengal CM: ಬಂಗಾಳದ ಅಭಿವೃದ್ಧಿಗೆ ಸುವೇಂದು ಅಧಿಕಾರಿ ಫುಲ್ ಆ್ಯಕ್ಟೀವ್! L&T ಮುಖ್ಯಸ್ಥ, ರೈಲ್ವೆ ಸಚಿವರ ಜೊತೆ ಮಹತ್ವದ ಸಭೆ
ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?