
ಬೆಂಗಳೂರು (ಮಾ.23): ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಮಂಡ್ಯದಲ್ಲಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಸಚಿವ ನಾರಾಯಣ ಗೌಡ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಎಂಬ ಸುದ್ದಿ ಹಬ್ಬಿತ್ತು. ಇತ್ತೀಚೆಗಷ್ಟೇ ಕಾಂಗ್ರೆಸ್‌ಗೆ ಸೇರುವ ಸುಳಿವು ನೀಡಿದ್ದ ನಾರಾಯಣಗೌಡ ಇದೀಗ ಮತ್ತೆ ಬಿಜೆಯಲ್ಲೇ ಇರಲಿದ್ದಾರೆ. ಹೌದು! ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ನಾರಾಯಣಗೌಡರು ಕೆ.ಆರ್.ಪೇಟೆಯಿಂದ ಬಿಜೆಪಿಯಿಂದಲ್ಲೇ ಸ್ಪರ್ಧೆ ಮಾಡ್ತಾರೆ.
ಕಳೆದ ಭಾನುವಾರ ದೆಹಲಿಗೆ ತೆರಳಿ ಅಮಿತ್ ಶಾ ಮತ್ತು ಬಿ.ಎಲ್.ಸಂತೋಷ್ ಜೊತೆ ನಾರಾಯಣ ಗೌಡರು ಮಾತನಾಡಿಕೊಂಡು ಬಂದಿದ್ದಾರೆ. ಅಮಿತ್ ಶಾ ಭೇಟಿಯಾದ ಬಳಿಕ ನಿನ್ನೆ (ಬುಧುವಾರ) ಬಿ.ಎಸ್.ಯಡಿಯೂರಪ್ಪನವರನ್ನೂ ಸಹ ನಾರಾಯಣ ಗೌಡ ಭೇಟಿಯಾಗಿದ್ದು, ಯುಗಾದಿ ಶುಭಾಶಯ ಹೇಳಿ ಬಂದಿದ್ದಾರೆ. ಇಂದು ತಮ್ಮ ಇಲಾಖೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆ ನಾರಾಯಣ ಗೌಡ ಪಾಲ್ಗೊಳ್ಳುತ್ತಿದ್ದಾರೆ.
ಕಲಬುರಗಿ ಪಾಲಿಕೆ ಮೇಯರ್ ಎಲೆಕ್ಷನ್‌ಗೆ ಬರ್ತಾರಾ ಎಐಸಿಸಿ ಅಧ್ಯಕ್ಷ: ಕಾಂಗ್ರೆಸ್ ಗೆಲ್ಲಬೇಕಾದ್ರೆ ಖರ್ಗೆ ಬರಲೇಬೇಕು!
ನಾರಾಯಣಗೌಡ, ಸೋಮಣ್ಣ ಬಿಜೆಪಿ ಬಿಡಲ್ಲ: ಸಚಿವರಾದ ಕೆ.ಸಿ. ನಾರಾಯಣಗೌಡ, ವಿ. ಸೋಮಣ್ಣ ಅವರು ಬಿಜೆಪಿಯನ್ನು ತೊರೆಯುವುದಿಲ್ಲ. ಅಲ್ಲದೇ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಬಿಜೆಪಿ ಮತ್ತೊಮ್ಮೆ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪರ ಅಲೆ ರಾಜ್ಯದಲ್ಲಿ ವ್ಯಾಪಕವಾಗಿದೆ. ವಿರೋಧ ಪಕ್ಷದವರು ಬಿಜೆಪಿ ಬಗ್ಗೆ ಏನೇ ಅಪಪ್ರಚಾರ ಮಾಡಿದರೂ ರಾಜ್ಯದ ಜನ ನಂಬದೇ ಬಿಜೆಪಿ ಪರ ನಿಲ್ಲುತ್ತಾರೆ ಎಂದರು.
ಇತ್ತೀಚೆಗೆ ನಡೆದ ರಾಮನಗರದ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಶಿಷ್ಟಾಚಾರಕ್ಕೆ ಧಕ್ಕೆಯಾಗಿಲ್ಲ. ಈ ಕುರಿತು ನನ್ನ ಜತೆ ಸಂಸದ ಡಿ.ಕೆ. ಸುರೇಶ ಅವರು ವಾಗ್ವಾದ ನಡೆಸಿದ್ದು ಸರಿಯಲ್ಲ ಎಂದರು. ಚನ್ನಗಿರಿ ಶಾಸಕ ಮಾಡಾಳು ವಿರುಪಾಕ್ಷಪ್ಪನವರ ಕಚೇರಿಯಲ್ಲಿ ಸಿಕ್ಕ ಕೋಟ್ಯಂತರ ರು. ಬಗ್ಗೆ ಲೋಕಾಯುಕ್ತ ವ್ಯಾಪಕ ತನಿಖೆ ಕೈಗೊಂಡಿದ್ದು, ಅವರು ಈಗಾಗಲೇ ಈ ಸಂಬಂಧ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳು ವಿರುಪಾಕ್ಷಪ್ಪನವರ ಅವರನ್ನು ರಕ್ಷಣೆ ಮಾಡುವ ಕಾರ್ಯವನ್ನು ಸರ್ಕಾರ ಮಾಡಿಲ್ಲ.
ನನ್ನನ್ನು ಎಷ್ಟು ಸಾವಿರ ಅಂತರದಲ್ಲಿ ಗೆಲ್ಲಿಸಬೇಕೆಂದು ಜನರು ತೀರ್ಮಾನ ಮಾಡ್ತಾರೆ: ಶಾಸಕ ಪ್ರೀತಂಗೌಡ
ವಿರೂಪಾಕ್ಷಪ್ಪ ಅವರನ್ನು ಇದುವರೆಗೂ ಲೋಕಾಯುಕ್ತ ಪೊಲೀಸರು ಬಂಧಿಸದೇ ಇರುವುದಕ್ಕೆ ತಾಂತ್ರಿಕ ಕಾರಣಗಳಿವೆ. ಕಾನೂನಿನ ಪ್ರಕಾರ ವಿರುಪಾಕ್ಷಪ್ಪ ದೋಷಿ ಎಂದು ಕಂಡುಬಂದರೆ ಕೂಡಲೇ ಅವರನ್ನು ಬಂಧಿಸುವ ಕ್ರಮವನ್ನು ಸಂಬಂಧಪಟ್ಟವರು ಮಾಡಲಿದ್ದಾರೆ ಎಂದರು. ಜನಾರ್ದನರೆಡ್ಡಿಯವರ ಪಕ್ಷದಿಂದ ಬಿಜೆಪಿಗೆ ಯಾವುದೇ ತೊಂದರೆ ಆಗದು. ಅವರನ್ನು ಬಿಜಿಪಿಗೆ ಸೆಳೆಯುವ ಪ್ರಯತ್ನ ನಡೆದಿದೆ ಎಂಬ ವಿದ್ಯಮಾನದ ಕುರಿತು ಗೊತ್ತಿಲ್ಲ ಎಂದರು. ಬಿಜಿಪಿ ಜಿಲ್ಲಾಧ್ಯಕ್ಷ ಪಿ. ಚನ್ನಬಸವನಗೌಡ, ಮಂಡಲ್ ಪ್ರಧಾನ ಕಾರ್ಯದರ್ಶಿ ಡಾ. ರಾಕೇಶ, ಕೊಟ್ಟೂರು ಬಿಜೆಪಿ ಘಟಕಾಧ್ಯಕ್ಷ ಬಿ.ಆರ್. ವಿಕ್ರಮ್, ಶ್ರೀನಿವಾಸ (ಬುಲ್) ಪ್ರಕಾಶ ಮಂಡಕ್ಕಿ, ಬಸವರಾಜ್ ಕೋನಾಪುರ್, ಆರ್. ಬೊಮ್ಮ ಮತ್ತಿತರರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.