ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಪೂರೈಸಿದ್ದು, ಉಳಿದ ಒಂದು ಗ್ಯಾರಂಟಿಯನ್ನು ಡಿಸೆಂಬರ್ ತಿಂಗಳಲ್ಲಿ ಜಾರಿ ಮಾಡಲಿದ್ದೇವೆಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ದೇವನಹಳ್ಳಿ (ಆ.06): ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಪೂರೈಸಿದ್ದು, ಉಳಿದ ಒಂದು ಗ್ಯಾರಂಟಿಯನ್ನು ಡಿಸೆಂಬರ್ ತಿಂಗಳಲ್ಲಿ ಜಾರಿ ಮಾಡಲಿದ್ದೇವೆಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಇಲ್ಲಿನ ಡಾ.ಅಂಬೇಡ್ಕರ್ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗು ಬೆಸ್ಕಾಂ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿಗೆ ಶೇ.72ರಷ್ಟು ಕುಟುಂಬಗಳು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ.
ನಮ್ಮ ಗುರಿ ಇರುವುದು ರಾಜ್ಯದಲ್ಲಿ ಸುಮಾರು 2.16 ಕೋಟಿ 16 ಕುಟುಂಬಗಳಿಗೆ ಈ ಯೋಜನೆಯ ಲಾಭ ಪಡೆಯಲಿದೆ. ಇಂತಹ ಮಹತ್ತರ ಕಾರ್ಯಕ್ರಮ ಭಾರತದ ಯಾವುದೇ ರಾಜ್ಯದಲ್ಲಿ ಯಾವ ಸರ್ಕಾರವೂ ನೀಡಿಲ್ಲ. ಸೆಪ್ಟೆಂಬರ್ ತಿಂಗಳಲ್ಲಿ ನಮ್ಮ ಗ್ಯಾರಂಟಿಯಂತೆ ಬಡವರಿಗೆ ಅಕ್ಕಿ ಕೊಡುವುದಾಗಿ ತಿಳಿಸಿದರು. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬೀಳಗಿ ಮಾತನಾಡಿ, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನೆಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಅಲ್ಲದೆ 200 ಯೂನಿಟ್ ಉಚಿತವಾಗಿ ವಿದ್ಯುತ್ ನೀಡುವ ಯೋಜನೆ ದೇಶದ ಇತಿಹಾಸದಲ್ಲೆ ಇದೇ ಮೊದಲಾಗಿದೆ.
undefined
ಯಾರು ಎಷ್ಟೇ ಅಡ್ಡಗಾಲು ಹಾಕಿದರೂ ಗ್ಯಾರಂಟಿಗಳು ಜಾರಿ: ಸಚಿವ ರಾಮಲಿಂಗಾರೆಡ್ಡಿ
ಇದೂವರೆಗೂ 1.42 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದಾರೆ. ಯಾರು 200 ಯೂನಿಟ್ ಒಳಗೆ ಬಳಸಿದ್ದಾರೋ ಅವರಿಗೆ ಶೂನ್ಯ ಬಿಲ್ ನೀಡುತ್ತಿದ್ದೇವೆ. ಇದುವರೆವಿಗೆ 74 ಲಕ್ಷ ಕುಟುಂಬಗಳು ಅರ್ಹತೆ ಪಡೆದಿದ್ದಾರೆ ಎಂದು ಹೇಳಿದರು. ಸಮಾರಂಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ರಾಜಣ್ಣ, ಮಾಜಿ ಪುರಸಭಾಧ್ಯಕ್ಷ ಎಂ. ನಾರಾಯಣಸ್ವಾಮಿ, ವಿಜಯಪುರ ಮುಖಂಡ ಮಂಜುನಾಥ್, ಪುರಸಭಾ ಮಾಜಿ ಅಧ್ಯಕ್ಷ ಸತೀಶ್, ಬಿದಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಪಿ.ಮುನಿರಾಜು ಹಾಗು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಗುರುಗಳಿಗಿಂತ ಮಿಗಿಲಾದ ದೇವರಿಲ್ಲ: ಮಕ್ಕಳನ್ನು ಸತ್ಪ್ರಜೆಗಳನ್ನಗಿ ತಯಾರಿಸಿ ದೇಶಕ್ಕೆ ಕೊಡುಗೆ ನೀಡುವ ಜವಾಬ್ದಾರಿಯುತ ಮಹತ್ಕಾರ್ಯ ಗುರುಗಳಿಂದ ಮಾತ್ರ ಸಾಧ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ತಾಲೂಕಿನ ಚಾಣುಕ್ಯ ವಿಶ್ವ ವಿದ್ಯಾಲಯ ಚನ್ನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ 8 ಸರ್ಕಾರಿ ಶಾಲೆಗಳಿಗೆ 35 ಲಕ್ಷ ರು. ಮೌಲ್ಯದ 300 ಮಕ್ಕಳಿಗೆ ಬ್ಯಾಗ್, ನೋಟ್ ಪುಸ್ತಕ, ಡೆಸ್ಕ್ ಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಲಿಷ್ಠ ರಾಷ್ಟ್ರವನ್ನು ಕಟ್ಟಬೇಕಾದರೆ ಮಕ್ಕಳಿಗೆ ನೀಡುವ ಶಿಕ್ಷಣವೇ ಮುಖ್ಯ ಅಡಿಪಾಯ.
ವರ್ಗಾವಣೆಗೂ ನನಗೂ ಯಾವುದೇ ಸಂಬಂಧ ಇಲ್ಲ: ಸಂಸದ ಡಿ.ಕೆ.ಸುರೇಶ್
ಅದರಲ್ಲಿ ಶಿಕ್ಷಕರ ಪಾತ್ರ ಬಹು ಮಹತ್ತರವಾದುದು. ಸರ್ಕಾರಿ ಶಾಲೆಯಲ್ಲಿ ಅರ್ಹ ಶಿಕ್ಷಕರಿದ್ದು ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಪೋಷಕರು ಅದನ್ನು ಅರ್ಥ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಚನ್ನಹಳ್ಳಿ ಸರ್ಕಾರಿ ಪ್ರೌಢಶಾಲೆ ತಾಲೂಕಿನ ಮಾದರಿ ಶಾಲೆಯಾಗಬೇಕು. ಅದಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಚಾಣಕ್ಯ ವಿಶ್ವ ವಿದ್ಯಾಲಯದ ಉಪ ಕುಲಪತಿ ಯಶವಂತ ಡೋಂಗ್ರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಸೇವಕ ಆರ್.ಲೋಕೇಶ್, ಜಿಪಂ ಮಾಜಿ ಅಧ್ಯಕ್ಷ ಬಿ. ರಾಜಣ್ಣ, ಗ್ರಾಪಂ ಅಧ್ಯಕ್ಷ ರಾಧಕೃಷ್ಣ, ಪುರಸಭಾ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, Íಮುಖ್ಯ ಶಿಕ್ಷಕ ಮುನಿರಾಜು, ಸಿಇಒ ನಾಗರಾಜರೆಡ್ಡಿ, ದೇವರಾಜ್ ಇತರರಿದ್ದರು.