ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರು ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಸಮಾನ ಅವಕಾಶ ಮಾಡಿಕೊಟ್ಟಿದ್ದಾರೆ. ತಾಯಿಯಾದವಳಿಗೆ ನಮ್ಮ ಸಂಸ್ಕೃತಿಯಲ್ಲಿ ಪವಿತ್ರ ಸ್ಥಾನವಿದೆ. ಇಂತಹವರಿಗೆ ಸಮಾಜದಲ್ಲಿ ಸಮಾನತೆ ನೀಡಬೇಕೆಂದು ಕಾಂಗ್ರೆಸ್ ಮುಖಂಡರು ನಾಡಿನ ಜನತೆಗೆ ಐದು ಗ್ಯಾರಂಟಿಗಳನ್ನು ನೀಡಲು ತೀರ್ಮಾನಿಸಿ ಅದರಂತೆ ಇಂದು ಪ್ರಥಮ ಗ್ಯಾರಂಟಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದೆ: ಸಚಿವ ಕೆ.ಎಚ್.ಮುನಿಯಪ್ಪ
ದೇವನಹಳ್ಳಿ(ಜೂ.12): ಕಳೆದ ವಿಧಾನಸಭಾ ಚುನಾವಣೆಯಲ್ಲಿ ಏನು ಗ್ಯಾರಂಟಿಗಳ ಮೂಲಕ ವಾಗ್ದಾನ ಮಾಡಿದ್ದೆವೋ ಅದರಂತೆ ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಆಡಳಿತ ಹಾಗು ಚಿಕ್ಕಬಳ್ಳಾಪುರ ವಿಭಾಗ ರಾಜ್ಯ ರಸ್ತೆ ಸಾರಿಗೆ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿ ಮಾತನಾಡಿ, ಭಾರತ ಸ್ವಾತಂತ್ರ್ಯ ಗಳಿಸಬೇಕಾದರೆ ಮಹಿಳೆಯರ ಪಾತ್ರವೂ ಸಹ ಮುಖ್ಯವಾದದು. ಮುಖ್ಯವಾಗಿ ಝಾನ್ಸಿ ರಾಣಿ ಲಕ್ಷ್ಮೇ ಬಾಯ್, ಕಿತ್ತೂರು ರಾಣಿ ಚೆನ್ನಮ್ಮ ಹೀಗೆ ಹಲವಾರು ಮಹಿಳೆಯರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಮಹಿಳೆಯರಿಗೂ ರಾಜಕೀಯವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸಮಾನ ಕಲ್ಪಿಸಬೇಕೆಂದು ರಾಜಕೀಯ ಮುಖಂಡರು ಕಂಕಣಬದ್ದವಾಗಿದ್ದಾರೆಂದು ಹೇಳಿದರು.
undefined
ದೇವನಹಳ್ಳಿ-ವಿಜಯಪುರ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಸಚಿವ ಮುನಿಯಪ್ಪ
ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರು ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಸಮಾನ ಅವಕಾಶ ಮಾಡಿಕೊಟ್ಟಿದ್ದಾರೆ. ತಾಯಿಯಾದವಳಿಗೆ ನಮ್ಮ ಸಂಸ್ಕೃತಿಯಲ್ಲಿ ಪವಿತ್ರ ಸ್ಥಾನವಿದೆ. ಇಂತಹವರಿಗೆ ಸಮಾಜದಲ್ಲಿ ಸಮಾನತೆ ನೀಡಬೇಕೆಂದು ಕಾಂಗ್ರೆಸ್ ಮುಖಂಡರು ನಾಡಿನ ಜನತೆಗೆ ಐದು ಗ್ಯಾರಂಟಿಗಳನ್ನು ನೀಡಲು ತೀರ್ಮಾನಿಸಿ ಅದರಂತೆ ಇಂದು ಪ್ರಥಮ ಗ್ಯಾರಂಟಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದೆ. ಉಳಿದ ನಾಲ್ಕು ಆಶ್ವಾಸನೆಗಳನ್ನು ಹಂತಹಂತವಾಗಿ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲು ಪ್ರಥಮ ದಿನದಂದು ತೂಬಗೆರೆ, ವಿಜಯಪುರ, ಬೂದಿಗೆರೆ, ಬೆಂಗಳೂರು ಹಾಗು ಚಿಕ್ಕಬಳ್ಳಾಪುರಕ್ಕೆ ಮೊದಲ ಪ್ರಯಾಣ ಬೆಳೆಸಿದವು. ಜಿಲ್ಲಾಧಿಕಾರಿ ಆರ್.ಲತಾ, ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್, ತಹಸೀಲ್ದಾರ್ ಶಿವರಾಜ್, ಪುರಸಭಾ ಮುಖ್ಯಾಧಿಕಾರಿ ದೊಡ್ಡಮಲವಯ್ಯ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತಿ ಮಾಜಿ ಅಧ್ತಕ್ಷ ಬಿ.ರಾಜಣ್ಣ, ಮಾಜಿ ಪುರಸಭಾಧ್ಯಕ್ಷ ಸಿ.ಜಗನ್ನಾಥ್, ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಾದ ಪ್ರಸನ್ನಕುಮಾರ್, ರಂಗಪ್ಪ , ಶಾಂತಕುಮಾರ್, ಕೆ.ಸಿ.ಮಂಜುನಾಥ್, ಮಾಜಿ ಪುರಸಭಾಧ್ಯಕ್ಷ ಎಂ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಸವಿತಾ ವೆಂಕಟಸ್ವಾಮಿ, ಅನಂತಕುಮಾರಿ ಚಿನ್ನಪ್ಪ ಉಪಸ್ಥಿತರಿದ್ದರು. ಉಚಿತ ಪ್ರಯಾಣದ ಯೋಜನೆ ಬಗ್ಗೆ ಆವತಿಯ ರಾಧಾಮಣಿ ಹಾಗು ಮಾಣಿಕ್ಯಮ್ಮ ಮಾತನಾಡಿದರು. ಸಾರಿಗೆ ಇಲಾಖೆಯ ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು.