ಒಬ್ಬರೇ ಇದ್ದರೆ ಹನಿಟ್ರ್ಯಾಪ್ ಆಗುತ್ತಾ ಸಚಿವ ಕೆ.ಎನ್ ರಾಜಣ್ಣ ತಪ್ಪು ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

Published : Mar 21, 2025, 05:29 PM ISTUpdated : Mar 21, 2025, 05:33 PM IST
ಒಬ್ಬರೇ ಇದ್ದರೆ ಹನಿಟ್ರ್ಯಾಪ್ ಆಗುತ್ತಾ ಸಚಿವ ಕೆ.ಎನ್ ರಾಜಣ್ಣ ತಪ್ಪು ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

ಸಾರಾಂಶ

ಹನಿಟ್ರ್ಯಾಪ್ ಅಂದರೆ ಸುಮ್ಮನೆ ಸುಮ್ಮನೆ ಯಾರಾದರೂ ನಿಮ್ಮ ಹತ್ತಿರ ಬರುತ್ತಾರಾ.? ನೀವು ಹಲೋ ಎಂದರೆ ಅವರು ಹಲೋ ಹಲೋ ಎನ್ನುತ್ತಾರೆ, ನೀವು ಮಾತನಾಡುತ್ತಿರುವುದಕ್ಕೆ ನಾನು ಮಾತನಾಡಿದ್ದೇನೆ. 

ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್

ಕೊಡಗು (ಮಾ.21): ಹನಿಟ್ರ್ಯಾಪ್ ಅಂದರೆ ಸುಮ್ಮನೆ ಸುಮ್ಮನೆ ಯಾರಾದರೂ ನಿಮ್ಮ ಹತ್ತಿರ ಬರುತ್ತಾರಾ.? ನೀವು ಹಲೋ ಎಂದರೆ ಅವರು ಹಲೋ ಹಲೋ ಎನ್ನುತ್ತಾರೆ, ನೀವು ಮಾತನಾಡುತ್ತಿರುವುದಕ್ಕೆ ನಾನು ಮಾತನಾಡಿದ್ದೇನೆ. ನೀವು ಮಾತನಾಡಿದಿದ್ದರೆ ನಾನು ಮಾತನಾಡುತ್ತಿದ್ದೆನಾ.? ನೀವು ವಿಶ್ ಮಾಡಿದ್ರೆ ನಾನು ವಿಶ್ ಮಾಡುತ್ತೇನೆ, ನೀವು ವಿಶ್ ಮಾಡದಿದ್ದರೆ ನಾನು ವಿಶ್ ಮಾಡುತ್ತೇನಾ ಎಂದು ಪ್ರಶ್ನಿಸುವ ಮೂಲಕ ಸಚಿವ ಕೆ.ಎನ್. ರಾಜಣ್ಣ ಒಬ್ಬರೇ ಇದ್ದಿದ್ದರೆ ಹನಿ ಟ್ರ್ಯಾಪ್ ಹೇಗೆ ಆಗುತಿತ್ತು ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವ ರಾಜಣ್ಣಗೆ ಹಿಂಡೈರಕ್ಟಾಗಿ ಟಾಂಗ್ ನೀಡಿದ್ದಾರೆ. 

ಅಲ್ಲದೆ ಆ ಮೂಲಕ ಸಚಿವ ರಾಜಣ್ಣ ಅಂತ ಕೆಲಸ ಮಾಡಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇನ್ನು ಡಿ. ಕೆ. ಶಿವಕುಮಾರ್ ಅವರೇ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಶಾಸಕ ಮುನಿರತ್ನ ಅವರು ಹೇಳಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಬಿಜೆಪಿಯವರು ವಿಧಾನಸೌಧದಲ್ಲಿ ಏನೆಲ್ಲಾ ಮಾಡಿದ್ದಾರೆ, ಅದು ಕಂಪ್ಲೇಂಟ್ ಕಾಪಿಯಲ್ಲಿ ಇದೆಯಲ್ಲ. ಅಶೋಕಗೆ ಏನೋ ಆಯ್ತು, ಯಡಿಯೂರಪ್ಪನವರಿಗೆ ಅದೇನೋ ಆಯ್ತು ಅಂತ ಹೇಳ್ತಿದ್ರಲಾ. ಪಾಪ ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ. ಮಾಡಿದ್ದುಣ್ಣೋ ಮಾರಾಯ ಎನ್ನುವ ಮಾತಿದೆಯಲ್ಲ ಎಂದು ಮುನಿರತ್ನ ಮತ್ತು ಬಿಜೆಪಿಯವರಿಗೆ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 

ಸರ್ಕಾರ ಖಜಾನೆಯಿಂದ ಒಂದು ಪೈಸೆ ಕೊಡಬೇಕಿಲ್ಲ, ಸರ್ಟಿಫಿಕೇಟ್ ಕೊಟ್ಟರೆ ಸಾಕು: ಸಂಸದ ಯದುವೀರ್‌

ಇನ್ನು ಶನಿವಾರ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ವಿಷಯಕ್ಕೆ ಪ್ರತಿಕ್ರಿಯಿಸಿದ  ಡಿ.ಕೆ. ಶಿವಕುಮಾರ್ ಅವರು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವುದು ಅವಶ್ಯಕತೆ ಇರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಒಳ್ಳೆಯ ಕೆಲಸವನ್ನು ನಾವು ರಕ್ಷಣೆ ಮಾಡುತ್ತೇವೆ. ರಾಜ್ಯದ ಹಿತವನ್ನು ಕಾಪಾಡುವ ಕೆಲಸ ಮಾಡುತ್ತೇವೆ. ದಯವಿಟ್ಟು ಎಲ್ಲರೂ ಶಾಂತಿಯನ್ನು ಕಾಪಾಡಬೇಕು. ಕಾನೂನಿನಲ್ಲಿ ಎಷ್ಟಕ್ಕೆ ಅವಕಾಶವಿದೆಯೋ ಅಷ್ಟನ್ನು ಮಾತ್ರ ಉಪಯೋಗಿಸಿಕೊಳ್ಳಬಹುದು. ಯಾವ ಗಲಾಟೆ ಅಥವಾ ಬಂದ್ ಮಾಡುವ ಅಗತ್ಯವಿಲ್ಲ. ದಯವಿಟ್ಟು ಮನವಿ ಮಾಡಿಕೊಳ್ಳುತ್ತೇನೆ. ಬಂದ್ ಅವಶ್ಯಕತೆ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ