ನಾನು ರಾಮ ಮತ್ತು ರಾವಣನ ಪರ ಇದ್ದೇನೆ: ಸಚಿವ ಕೆ.ಎನ್‌.ರಾಜಣ್ಣ

By Kannadaprabha NewsFirst Published Jan 20, 2024, 9:43 AM IST
Highlights

ನಾನು ರಾಮ ಮತ್ತು ರಾವಣನ ಪರ ಇದ್ದೇನೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ನನಗೆ ರಾವಣ ಎಂದಿದ್ದಾರೆ. ನನಗೆ ಬೇಜಾರಿಲ್ಲ, ರಾವಣ ಎಂದು ಅನಿಸಿಕೊಳ್ಳಲು ನಾನು ಸಿದ್ಧನಿದ್ದೇನೆ. 

ತುಮಕೂರು (19): ನಾನು ರಾಮ ಮತ್ತು ರಾವಣನ ಪರ ಇದ್ದೇನೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ನನಗೆ ರಾವಣ ಎಂದಿದ್ದಾರೆ. ನನಗೆ ಬೇಜಾರಿಲ್ಲ, ರಾವಣ ಎಂದು ಅನಿಸಿಕೊಳ್ಳಲು ನಾನು ಸಿದ್ಧನಿದ್ದೇನೆ. ಅವನಂತ ದೈವ ಭಕ್ತ ಯಾರೂ ಇರಲಿಲ್ಲ ಎಂದರು. ರಾವಣ ಶಿವನ ಪರಮಭಕ್ತ ರಾವಣನಿಗೆ ಶಿವ ಆತ್ಮಲಿಂಗ ಕೊಟ್ಟಿರುವುದು ಎಂದರು. ಕಾಂಗ್ರೆಸ್ ನವರು ಹಜ್ ಯಾತ್ರೆಗೆ ದುಡ್ಡು ಕೊಟ್ಟಂತೆ ಯಡಿಯೂರಪ್ಪ ನವರು ಕಾಶಿಗೆ ಹೋಗೋಕೆ ದುಡ್ಡು ಕೊಟ್ಟಿದ್ದರು. 

ಅದನ್ನು ಯಾರೂ ಬೇಡ ಅನ್ನುವುದಿಲ್ಲ ಎಂದರು. ಇದರ ಕುರಿತು ಇನ್ನೂ ಹಲವು ಸೂಕ್ಷ್ಮವಾದ ವಿಚಾರಗಳಿವೆ. ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದರು. ಐದು ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯ ಮುಂದುವರಿಯುತ್ತಾರೆ ಎಂಬ ಯತೀಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಯತೀಂದ್ರನಾದರೂ ಹೇಳಲಿ ಬೇರೆ ಯಾರಾದರೂ ಹೇಳಲಿ, ಇನ್ನಾರು ತಿಂಗಳಲ್ಲಿ ಚುನಾವಣೆ ಬರುತ್ತಿದೆ. ಅದಾದ ಬಳಿಕ ಮಾತನಾಡೋಣ ಎಂದರು. ದೇಶದ ಹಿತದೃಷ್ಟಿ, ಸಂವಿಧಾನದ ರಕ್ಷಣೆ ದೃಷ್ಡಿಯಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಾಗುತ್ತದೆ ಎಂದರು.

ಲಿಂಗಾಯತ ಸೇರಿ ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡಿಲ್ಲ: ಎಚ್‌.ಡಿ.ದೇವೇಗೌಡ

ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಮುಖಂಡರ ಸಲಹೆ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಮಯೂರ ಜಯಕುಮಾರ್ ಅವರ ಸಮ್ಮುಖದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರು, ಕಾರ್ಯಕರ್ತರು, ಮಂಚೂಣಿ ಘಟಕಗಳ ಅಧ್ಯಕ್ಷರ ಅಭಿಪ್ರಾಯ ಆಲಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. 

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರ ಸಲಹೆಗಳನ್ನು ಪಡೆಯುವ ನಿಟ್ಟಿನಲ್ಲಿ ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಿರುವ ಸಚಿವರು, ಶಾಸಕರು, ಮಾಜಿ ಶಾಸಕರು, ಮಾಜಿ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿವಿಧ ಮಂಚೂಣಿ ಘಟಕಗಳ ಅಧ್ಯಕ್ಷರು ಮಂಡಿಸುವ ಸಲಹೆಗಳನ್ನು ಕ್ರೂಢಿಕರಿಸಿ, ಜಿಲ್ಲೆಯ ಇಬ್ಬರು ಸಚಿವರಾದ ಡಾ.ಜಿ. ಪರಮೇಶ್ವರ್ ಮತ್ತು ಕೆ.ಎನ್. ರಾಜಣ್ಣ ಅವರ ಅಭಿಪ್ರಾಯಗಳನ್ನು ಆಲಿಸಿ, ಪಕ್ಷದ ಹೈಕಮಾಂಡ್ ಓರ್ವ ಸೂಕ್ತ, ಗೆಲ್ಲವು ಎಲ್ಲಾ ಆರ್ಹತೆ ಇರುವ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ ಎಂದರು.

ಪಕ್ಷದ ಆಯ್ಕೆ ಮಾಡಿದ ಅಭ್ಯರ್ಥಿಯ ಪರ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡುವ ಮೂಲಕ ಅವರ ಗೆಲುವಿಗೆ ಶ್ರಮಿಸಬೇಕಿದೆ. ನಮಗೆ ಅಭ್ಯರ್ಥಿ ಯಾರು ಎಂಬುದು ಮುಖ್ಯವಲ್ಲ, ಪಕ್ಷ ಮುಖ್ಯ. ಹಾಗಾಗಿ ಎಲ್ಲರೂ ಸಹ ಪಕ್ಷದ ನಿಲುವಿಗೆ ಬದ್ದವಾಗಿ ಕೆಲಸ ಮಾಡಿ, ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಶ್ರಮಿಸೋಣ ಎಂದರು.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ಜ.22ರಂದು ಕರ್ನಾಟಕದಲ್ಲೂ ರಜೆ ಘೋಷಿಸಿ: ಕೆ.ಎಸ್.ಈಶ್ವರಪ್ಪ

ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಯಾವುದೇ ಪಕ್ಷ ಸದೃಢವಾಗಬೇಕಿದ್ದರೆ, ಆ ಪಕ್ಷದ ಕಾರ್ಯಕರ್ತರು ಸದೃಢರಾಗಿದ್ದಾಗ ಮಾತ್ರ ಸಾಧ್ಯ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇದು ಸಾಭೀತಾಗಿದೆ. ಗೆಲ್ಲುವ ಅಭ್ಯರ್ಥಿಗೆ ಟಿಕೇಟ್ ನೀಡಬೇಕೆಂಬ ಆಶಯ ನಮ್ಮದು. ನಾವೇನು ಅಭಿಪ್ರಾಯ ಮಂಡಿಸಿದರೂ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳುವವರು ಮುಖ್ಯಮಂತ್ರಿಗಳು ಮತ್ತು ಎಐಸಿಸಿ ಮುಖಂಡರು. 28 ಸೀಟುಗಳಲ್ಲಿ ಕನಿಷ್ಠ 20 ಸೀಟುಗಳನ್ನಾದರೂ ಈ ಬಾರಿಯ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕಿದೆ. ಇಲ್ಲದಿದ್ದರೆ ಸರಕಾರ ನಡೆಸುವ ನೈತಿಕತೆ ನಮಗೆ ಇರುವುದಿಲ್ಲ ಎಂದರು.

click me!