ಮುಂದಿನ ವರ್ಷ ಲೋಕಸಭೆ ಚುನಾವಣೆ ಎದುರಾಗಲಿದ್ದು, ಕಾರ್ಯಕರ್ತರು ಗ್ಯಾರಂಟಿ ಯೋಜನೆ ಅಸ್ತ್ರ ಬಳಸಿ ಪಕ್ಷವನ್ನು ಜಯದ ಹಾದಿಗೆ ಕೊಂಡೊಯ್ಯಬೇಕೆಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಚಿತ್ರದುರ್ಗ (ಅ.12): ಮುಂದಿನ ವರ್ಷ ಲೋಕಸಭೆ ಚುನಾವಣೆ ಎದುರಾಗಲಿದ್ದು, ಕಾರ್ಯಕರ್ತರು ಗ್ಯಾರಂಟಿ ಯೋಜನೆ ಅಸ್ತ್ರ ಬಳಸಿ ಪಕ್ಷವನ್ನು ಜಯದ ಹಾದಿಗೆ ಕೊಂಡೊಯ್ಯಬೇಕೆಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ನಂತರ ಆಯೋಜಿಸಲಾದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನ ನಿರೀಕ್ಷೆಯಿಟ್ಟು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಜನರ ಮನಸ್ಸಿಗೆ ಬೇಸರವಾಗದಂತೆ ನಡೆದುಕೊಳ್ಳಬೇಕು ಎಂದರು.
ವಿಧಾನಸಭಾ ಚುನಾವಣಾ ಪೂರ್ವದಲ್ಲಿಯೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇವರು 5 ಉಚಿತ ಗ್ಯಾರೆಂಟಿಗಳನ್ನು ಘೋಷಿಸಿದರು. ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು 4 ಗ್ಯಾರೆಂಟಿಗಳನ್ನು ಈಡೇರಿಸಿದ್ದಾರೆ. ಇನ್ನೊಂದು ಗ್ಯಾರೆಂಟಿ ಬಾಕಿ ಇದೆ. ಲೋಕಸಭಾ ಚುನಾವಣೆಯಲ್ಲಿ ಯಶ ಕಂಡು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಸಿದ್ಧರಾಗಬೇಕು ಎಂದು ಕರೆ ನೀಡಿದರು.
undefined
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ: ಸಂಸದ ಡಿ.ಕೆ.ಸುರೇಶ್
ಜನತೆಗೆ ಗ್ಯಾರೆಂಟಿಗಳನ್ನು ನೀಡುವುದಷ್ಟೆ ಸರ್ಕಾರದ ಕೆಲಸವಲ್ಲ. ಜನರು ನಮ್ಮ ಮೇಲೆ ಇಟ್ಟಿರುವ ಭರವಸೆಗೆ ಚ್ಯುತಿ ಬಾರದಂತೆ ಸರ್ಕಾರವನ್ನು ಮುನ್ನಡೆಸಿಕೊಂಡು ಹೋಗಬೇಕಿದೆ. ಕಂದಾಯ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಹಂತ ಹಂತವಾಗಿ ಎಲ್ಲವನ್ನು ಬಗೆಹರಿಸಲಾಗುವುದು. ಜಿಲ್ಲೆಯ ಕೆಲವು ಕಡೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಮಧ್ಯ ಕರ್ನಾಟಕದ ಬಯಲುಸೀಮೆ ಮೊದಲಿನಿಂದಲೂ ಬರಗಾಲವನ್ನು ಎದುರಿಸಿಕೊಂಡು ಬರುತ್ತಿದೆ. ಹಾಗಾಗಿ ಚಿತ್ರದುರ್ಗ ಜಿಲ್ಲೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಾಗಿರುವುದರಿಂದ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಭರವಸೆ ಕೊಟ್ಟರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ಕೃಷ್ಣ ಬೈರೇಗೌಡರು ಈ ಹಿಂದೆಯೂ ಸಚಿವರಾಗಿದ್ದವರು. ಆದ್ದರಿಂದ ಜಿಲ್ಲೆಯ ಪರಿಸ್ಥಿತಿ ಚೆನ್ನಾಗಿ ಗೊತ್ತಿದೆ. ಚಿತ್ರದುರ್ಗ ಜಿಲ್ಲೆ ಸದಾ ಬರಪೀಡಿತ ಪ್ರದೇಶ. ಜನ ಸಾಕಷ್ಟು ನಿರೀಕ್ಷೆಯಿಟ್ಟುಕೊಂಡು ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಜನರ ನಿರೀಕ್ಷೆ ಹುಸಿಯಾಗದಂತೆ ಕೆಲಸ ಮಾಡುತ್ತಿದ್ದಾರೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಕಾಯಕರ್ತರಲ್ಲಿ ಮನವಿ ಮಾಡಿದರು.
ಉತ್ತಮ ವರದಿ, ಲೇಖನ ಬರೆದಿದ್ದೀರಾ? ನೀವು ಒಳ್ಳೆ ಫೋಟೋಗ್ರಾಫರಾ?: ಕೆಯುಡಬ್ಯುಜೆ ಮಾಧ್ಯಮ ಪ್ರಶಸ್ತಿಗೆ ಅರ್ಜಿ ಹಾಕಿ!
ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್ ಕುಮಾರ್, ಹಿರಿಯ ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತ ನಂದಿನಿ ಗೌಡ, ಯುವ ಮುಖಂಡ ಜೆಜೆ ಹಟ್ಟಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಯೋಗೇಶ್‍ಬಾಬು, ಸೈಯದ್ ಖುದ್ದೂಸ್, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಮೆಹಬೂಬ್ ಖಾತೂನ್, ಕಾಂಗ್ರೆಸ್ ಕಿಸಾನ್‍ಸೆಲ್ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಶಿವಲಿಂಗಪ್ಪ, ಎಚ್.ಶಬ್ಬೀರ್ ಭಾಷಾ, ಚಾಂದ್‍ಪೀರ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಫಾತ್ಯರಾಜನ್, ನ್ಯಾಯವಾದಿಗಳಾದ ಸುದರ್ಶನ್, ನೂರುಲ್ಲಾ ಹಸನ್, ಬೀಸ್ನಳ್ಳಿ ಜಯಣ್ಣ, ರವೀಂದ್ರ ಈ ಸಂದರ್ಭದಲ್ಲಿದ್ದರು.