ಏಪ್ರಿಲ್‌ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಹೇಳಿಕೆ ನೀಡಿರುವ ಸಿದ್ದರಾಂಯ್ಯಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ಕೊಟ್ಟಿದ್ದಾರೆ.
ಮೈಸೂರು, (ಜ.18) : ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಸಿದ್ದರಾಮಯ್ಯನವರು ಪ್ರತಿ ಸಮಯದಲ್ಲೂ ಒಂದೊಂದು ದಿನಾಂಕವನ್ನು ಕೊಡುತ್ತಾ ಬರುತ್ತಿದ್ದಾರೆ ಅದ್ಯಾವಾಗ ಸಿದ್ದರಾಮಯ್ಯನವರು ಜ್ಯೋತಿಷ್ಯರಾಗಿದ್ದಾರೆ ಗೊತ್ತಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಏಪ್ರಿಲ್ ನಂತರ ಸಿಎಂ ಬದಲಾವಣೆ ಆಗುತ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಚಾಮುಂಡಿ ಬೆಟ್ಟದಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯಸಿದ್ದು, ಸಿದ್ದರಾಮಯ್ಯ ಯಾವಾಗ ಜ್ಯೋತಿಷಿ ಆದರೋ ಗೊತ್ತಿಲ್ಲ. ಪ್ರತಿ ಸಮಯದಲ್ಲೂ ಒಂದೊಂದು ದಿನಾಂಕವನ್ನು ಕೊಡುತ್ತಾ ಬರುತ್ತಿದ್ದಾರೆ. ಈಗ ಏಪ್ರಿಲ್ ಎಂದು ಹೇಳುತ್ತಿದ್ದಾರೆ ಎಂದರು.
ಅದು ಯಾವುದೂ ನಿಜ ಆಗಲ್ಲ. ಅವರ ಭವಿಷ್ಯ ಪ್ರತಿ ಬಾರಿಯೂ ಸುಳ್ಳಾಗುತ್ತದೆ. ಈಗ ಏಪ್ರಿಲ್, ಮೇ, ಜೂನ್ ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಇನ್ನು, ಫೆಬ್ರವರಿ 7ರಂದು ಬೆಂಗಳೂರಿನಲ್ಲಿ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ. ಕಾಗಿನೆಲೆ ಸ್ವಾಮೀಜಿ ಸಮ್ಮುಖದಲ್ಲಿ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.