* ಚಿತ್ರದುರ್ಗದಲ್ಲಿ ಸಚಿವ ಕೆಎಸ್ ಈಶ್ವರಪ್ಪ ಸುದ್ದಿಗೋಷ್ಠಿ
* ಮತ್ತೆ ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ
* ಬಿಜೆಪಿಯಲ್ಲಿನ ಅಸಮಾಧಾನವನ್ನು ಒಪ್ಪಿಕೊಂಡ ಈಶ್ವರಪ್ಪ
ಚಿತ್ರದುರ್ಗ, (ಆ.08): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಚಿತ್ರದುರ್ಗದಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯಗೆ ಸಿಎಂ ಸ್ಥಾನ ಕಳೆದುಕೊಂಡಾಗಿಂದ ಕೆಟ್ಟ ಕನಸು ಬೀಳುತ್ತಿದೆ. ಯಾವಾಗಲೂ ಬಿಜೆಪಿ ಸರ್ಕಾರ ಉರುಳುವ ಕನಸು. ಮತ್ತೆ ಸಿಎಂ ಆಗಬೇಕು ಎಂದು ಕನುಸ ಕಾಣುತ್ತಿರುವ ಸಿದ್ದರಾಮಯ್ಯ ದೇಶದಲ್ಲೇ ಅತ್ಯಂತ ಕೆಟ್ಟ ಕನಸುಗಾರ ಎಂದು ಸಚಿವ ಕೆಎಸ್ ಈಶ್ವರಪ್ಪ ಟಾಂಗ್ ಕೊಟ್ಟರು.
'ಯಡಿಯೂರಪ್ಪ ಬಹಳ ಒಳ್ಳೆ ಕೆಲಸ ಮಾಡಿದ್ರು' ಸಿದ್ದು ಹೀಗಂದ್ರು!
undefined
ದಲಿತ ಮತ್ತು ಹಿಂದುಳಿದ ವರ್ಗದವರಿಗೆ ಮಾಡಿದ ಮೋಸದಿಂದಲೇ ಸಿದ್ದರಾಮಯ್ಯ ಸರ್ಕಾರ ಹೋಯ್ತು. ರಾಜ್ಯದಲ್ಲಿ ಇನ್ನೆಂದೂ ಕಾಂಗ್ರೆಸ್ ಸರ್ಕಾರ ಬರಲ್ಲ ಎಂದು ಭವಿಷ್ಯ ನುಡಿದರು.
ಸಿದ್ದರಾಮಯ್ಯ ಸಿಎಂ ಕನಸು ಕಾಣುವುದು ಬೇಡ. ಹೊರಗಡೆಯಿಂದ ಬಂದವರು ವಲಸಿಗರು ಎಂದು ಡಿಕೆಶಿ ಹೇಳಿದ್ದರು. ಕಾಂಗ್ರೆಸ್ ಪಕ್ಷದ ಸೊಸೆ ಎಂದು ಹೇಳಿ ಸಿದ್ದರಾಮಯ್ಯ ಒಪ್ಪಿಕೊಂಡರು. ಬಾದಾಮಿಯಲ್ಲಿ ಕಾಂಗ್ರೆಸ್ ಪಕ್ಷದ ಮಗ ಅಂದರು ಗೆದ್ದರು ಎಂದು ಹೇಳಿದರು.
ಇನ್ನು ಇದೇ ವೇಳೆ ಬಿಜೆಪಿಯಲ್ಲಿನ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆ ವೇಳೆ ಅಸಮಾಧಾನ ನಿಜ. ಮಂತ್ರಿಗಳಿಗೆ ಖಾತೆ ಹಂಚಿಕೆ ವೇಳೆ ಅಸಮಾಧಾನ ಸಹಜ. ಎಲ್ಲರನ್ನೂ ಸಮಾಧಾನ ಮಾಡುವ ಕೆಲಸ ಬಿಜೆಪಿಯಿಂದ ಆಗುತ್ತದೆ ಸ್ಪಷ್ಟಪಡಿಸಿದರು.