'ಸಿಡಿ ಬಗ್ಗೆ ಮಾತನಾಡಲು ನನಗೆ ವಾಕರಿಕೆ ಬರುತ್ತದೆ. ನನಗೆ ಯಾವುದೇ ಆಸಕ್ತಿಯಿಲ್ಲ'

By Suvarna News  |  First Published Mar 28, 2021, 6:49 PM IST

ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ


ಶಿವಮೊಗ್ಗ, (ಮಾ.28): ಸಿಡಿ ಬಗ್ಗೆ ಮಾತನಾಡಲು ನನಗೆ ವಾಕರಿಕೆ ಬರುತ್ತದೆ. ದಯವಿಟ್ಟು ನನಗೆ ಸಿಡಿ ಬಗ್ಗೆ ಕೇಳಬೇಡಿ, ಅದು ಅವರು ಅವರಿಗೆ ಬಿಟ್ಟದ್ದು. ನನಗೆ ಸಿಡಿ ಬಗ್ಗೆ ಆಸಕ್ತಿಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಚುನಾವಣೆ ಬಂದರೂ ಬಿಜೆಪಿಯ ಗೆಲುವು ನಿಶ್ಚಿತ. ಇತ್ತೀಚೆಗೆ ನಡೆದ ಉಪಚುನಾವಣೆ ನಡೆದ 17 ರಲ್ಲಿ 14 ರಲ್ಲಿ ನಾವು ಗೆದ್ದಿದ್ದೇವೆ. ಇದೀಗ ಬಸವಕಲ್ಯಾಣ, ಮಸ್ಕಿ ಮತ್ತು ಬೆಳಗಾವಿಗೆ ಉಪಚುನಾವಣೆ ಘೋಷಣೆಯಾಗಿದೆ. ಮಾರ್ಚ್ 30 ರಂದು ನಮ್ಮ ಅಭ್ಯರ್ಥಿ ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಸಿಎಂ, ರಾಜ್ಯಾಧ್ಯಕ್ಷರು, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ, ನಾನು ಸೇರಿದಂತೆ ಎಲ್ಲರೂ ಹೋಗುತ್ತೇವೆ ಎಂದರು.

Tap to resize

Latest Videos

'ಸ್ಟ್ರಾಂಗ್ ಕೇಸ್ ಇದ್ರು ಅರೆಸ್ಟ್ ಆಗಿಲ್ಲ : ಪೊಲೀಸ್‌ಗೆ ಬೆದರಿಕೆ'

ಕೆಲವು ಪಕ್ಷ ಅವರ ಅಭ್ಯರ್ಥಿಗಳನ್ನೇ ಹಾಕಲ್ಲ.‌ ಇನ್ನೂ ಕೆಲವು ಪಕ್ಷ ನಾಮಕವಸ್ಥೆಗೆ ಅಭ್ಯರ್ಥಿ ಹಾಕುತ್ತಿದ್ದಾರೆ. ಮೂರು ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸುತ್ತಾರೆ. ಕೇಂದ್ರ- ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಜನರು ನೋಡಿದ್ದಾರೆ. ಜೊತೆಗೆ ಪಕ್ಷದ ಕಾರ್ಯಕರ್ತರ ಸಂಘಟನೆಯ ಬಲದಿಂದ‌ ಗೆಲ್ಲುತ್ತೇವೆ ಎಂದು ಈಶ್ವರಪ್ಪ ಹೇಳಿದರು.

click me!