
ಶಿವಮೊಗ್ಗ, (ಜುಲೈ.04): ಪಕ್ಷದ ಒಳಗೂ ಟೀಕೆ ಮಾಡುವ ಬೆಳವಣಿಗೆ ನಮ್ಮ ಪಕ್ಷದಲ್ಲೂ ಈಗ ಬಂದು ಬಿಟ್ಟಿದೆ. ಇದನ್ನು ನಾನು ನೊಂದು ಹೇಳುತ್ತಿದ್ದೆನೆ ಎಂದು ಸಚಿವ ಕೆಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಶಿವಮೊಗ್ಗ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ರಾಜಕೀಯ ವಿದ್ಯಮಾನಗಳ ಮಾತನಾಡಿದ ಅವರು, ಪಕ್ಷದ ಒಳಗಿರುವವರು ಟೀಕೆ ಮಾಡುವ ವ್ಯವಸ್ಥೆ ನಮ್ಮಲ್ಲಿ ಎಂದೂ ಇರಲಿಲ್ಲ. ಸಂಘಟನೆ ಶಕ್ತಿಯುತವಾಗಿ ಬೆಳೆಸಿಕೊಂಡು ಹೋಗುತ್ತಿದ್ದರೆ ಎಂದಿಗೂ ನಮ್ಮ ಪಕ್ಷಕ್ಕೆ ತೊಂದರೆಯಾಗುವುದಿಲ್ಲ ಎಂದರು.
ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ
ಕೋವಿಡ್ ಬರುತ್ತೋ.. ಸರ್ಕಾರ ಬರುತ್ತೋ. ಮುಖ್ಯಮಂತ್ರಿ ಬದಲಾಗುತ್ತಾರೋ ಇರುತ್ತಾರೋ ಗೊತ್ತಿಲ್ಲ. ಆದರೆ ಕಾರ್ಯಕರ್ತರು ತಮ್ಮ ನಿಷ್ಠೆ, ಸಿದ್ದಾಂತ ನಂಬಿ ಸಂಘಟನೆ ಬೆಳೆಸಬೇಕಿದೆ ಎಂದು ಹೇಳಿದರು.
ಕಾಂಗ್ರೆಸ್ ನ ಬಡಿದಾಟ ಇರಬಹುದು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಇರಬಹುದು. ಯಾರೇ ಏನೇ ಮಾತನಾಡಿದರೂ ಪರವಾಗಿಲ್ಲ. ಕಾರ್ಯಕರ್ತರು ಸಂಘಟನೆ ಶಕ್ತಿಯುತವಾಗಿ ಬೆಳೆಸುವ ನಿಟ್ಟಿನಲ್ಲಿ ಮಾತ್ರ ಯೋಚಿಸಬೇಕು. ಯಾರಾದರೂ ಟೀಕೆ ಮಾಡಲಿ, ಯಾರಾದರೂ ಏನಾದರೂ ಮಾತನಾಡಿಕೊಂಡು ಹೋಗಲಿ. ಪಕ್ಷದ ಒಳಗೆ ಇರಲಿ, ಹೊರಗೆ ಆರೋಪ ಮಾಡಲಿ. ವಿರೋಧಿಗಳ ಟೀಕೆಗೆ ಸಂಘಟನೆ ಮೂಲಕವೇ ಉತ್ತರ ನೀಡಬೇಕು ಎಂದು ತಿಳಿಸಿದರು.
ಸಂಘಟನೆ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕರ್ತರು ಗಮನ ಕೇಂದ್ರಿಕರಿಸಬೇಕು. ಕೋವಿಡ್ ನಂತಹ ಸಂಕಷ್ಟವನ್ನು ನಾವು ಸಂಘಟನೆ ಮುಖಾಂತರ ಜಾಗೃತಿ ಮೂಡಿಸಿ ಎದುರಿಸಿದ್ದೇವೆ ಎಂದು ಈಶ್ವರಪ್ಪ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.