* ಕಾಂಗ್ರೆಸ್ಸಲ್ಲಿ ನಾಯಕತ್ವ ಇಲ್ಲ
* ಹಾನಗಲ್ ಹಾಗೂ ಸಿಂದಗಿಯಲ್ಲಿ ನಮ್ಮದೇ ಜಯ
* ನಾವು ಸಂಘಟನೆ, ಸಾಧನೆ, ನಾಯಕತ್ವದ ಆಧಾರದ ಮೇಲೆ ಚುನಾವಣೆ ನಡೆಸುತ್ತಿದ್ದೇವೆ
ಶಿವಮೊಗ್ಗ(ಅ.23): ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK shivakumar) ಹೆಸರು ಹೇಳಿದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಗೆ ಆಗಲ್ಲ. ಸಿದ್ದರಾಮಯ್ಯ ಹೆಸರು ಹೇಳಿದರೆ ಡಿ.ಕೆ. ಶಿವಕುಮಾರ್‌ಗೆ ಆಗಲ್ಲ. ಇನ್ನೆಲ್ಲಿ ನಾಯಕತ್ವ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ(Shivamogga) ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್(Congress) ಪಕ್ಷಕ್ಕೆ ಸಂಘಟನೆ, ನಾಯಕತ್ವ(Leadership), ಸಾಧನೆ ಯಾವುದೂ ಇಲ್ಲವಾಗಿದೆ. ಪ್ರಚಾರ(Campaign) ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ಇಲ್ಲವೇ ರಾಹುಲ್ ಗಾಂಧಿ(Rahul Gandhi) ಹೆಸರು ಹೇಳುತ್ತಾರೆಯೇ ಎಂದು ಪ್ರಶ್ನಿಸಿದರು.
undefined
ನಾನು ಬಿಜೆಪಿ ಸೇರಿದ್ದಕ್ಕೆ ಬಿಎಸ್‌ವೈ ಕಾರಣ: ಸಿಎಂ ಬೊಮ್ಮಾಯಿ
ಉಪ ಚುನಾವಣಾ(Byelection) ಪ್ರಚಾರದ ವೇಳೆ ವಿಪಕ್ಷ ನಾಯಕರು ವೈಯಕ್ತಿಕವಾಗಿ ವಾಕ್ಸಮರಕ್ಕೆ ಇಳಿದಿದ್ದಾರೆ. ಏನೇ ಆಗಲಿ ನಾವು ಸಂಘಟನೆ, ಸಾಧನೆ, ನಾಯಕತ್ವದ ಆಧಾರದ ಮೇಲೆ ಚುನಾವಣೆ ನಡೆಸುತ್ತಿದ್ದೇವೆ. ಉಪ ಚುನಾವಣೆ ನಡೆಯುತ್ತಿರುವ ಹಾನಗಲ್(Hanagal) ಹಾಗೂ ಸಿಂದಗಿ(Sindagi) ಎರಡೂ ಕ್ಷೇತ್ರದಲ್ಲೂ ಬಿಜೆಪಿ(BJP) ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾನಗಲ್ ಕ್ಷೇತ್ರದಲ್ಲಿರುವ ಅಭ್ಯರ್ಥಿಗಳು:
ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು: ನಿಯಾಜ್ ಶೇಖ್ (ಜೆಡಿಎಶ್), ಶಿವರಾಜ ಸಜ್ಜನರ (ಬಿಜೆಪಿ), ಶ್ರೀನಿವಾಸ ಮಾನೆ (ಕಾಂಗ್ರೆಸ್), ಉಡಚಪ್ಪ ಉದ್ದನಕಾಲ (ಕರ್ನಾಟಕ ರಾಷ್ಟ್ರ ಸಮಿತಿ), ಫಕ್ಕೀರಗೌಡ ಶಂಕರಗೌಡ ಗಾಜಿಗೌಡ್ರ (ರೈತ ಭಾರತ ಪಕ್ಷ), ತಳವಾರ ಶಿವಕುಮಾರ (ಲೋಕಶಕ್ತಿ ಪಕ್ಷ), ಉಮೇಶ ಕೃಷ್ಣಪ್ಪ ದೈವಜ್ಞ (ಪಕ್ಷೇತರ), ಸಿದ್ದಪ್ಪ ಕಲ್ಲಪ್ಪ ಪೂಜಾರ (ಪಕ್ಷೇತರ), ಎಸ್ಎಸ್.ದೊಡ್ಡ ಲಿಂಗಣ್ಣನವರ (ಪಕ್ಷೇತರ), ಸೋಮಶೇಖರ ಮಹದೇವಪ್ಪ ಕೋತಂಬರಿ (ಪಕ್ಷೇತರ), ಹೊನ್ನಪ್ಪ ಹನುಮಂತಪ್ಪ ಅಕ್ಕಿವಳ್ಳಿ (ಪಕ್ಷೇತರ)
ಸಿಂದಗಿಯಲ್ಲಿ ಕ್ಷೇತ್ರದಲ್ಲಿರುವ ಅಭ್ಯರ್ಥಿಗಳು:
ಇನ್ನು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಆರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಅಶೋಕ ಮನಗೊಳಿ(ಕಾಂಗ್ರೆಸ್), ರಮೇಶ್ ಬೂಸನೂರ್(ಬಿಜೆಪಿ), ನಜಿಯಾ ಅಂಗಡಿ(ಜೆಡಿಎಸ್), ಡಾ. ಸುನಿಲ್ ಕುಮಾರ್ ಹೆಬ್ಬಿ(ಕರ್ನಾಟಕ ರಾಷ್ಟ್ರ ಸಮಿತಿ) ಹಾಗೂ ಜಿಲಾನಿ ಗುಡುಸಾಬ್ ಮುಲ್ಲಾ, ದೀಪಿಕಾ ಎಸ್. ಪಡಸಲಗಿ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ.
ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಅ. 30ರಂದು ಮತದಾನ ನಡೆಯಲಿದ್ದು ನ.2ರಂದು ಫಲಿತಾಂಶ ಹೊರಬೀಳಲಿದೆ.