ಜನ ನಮಗೆ ಆರ್ಶೀವಾದ ಮಾಡಿದ್ದಾರೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆ ಈಡೇರಿಸಲು ಮಾತ್ರ ನಮ್ಮ ಚಿತ್ತವಿದೆ. ಅದಕ್ಕೆ ನಾವು ಆದ್ಯತೆ ಕೊಡುತ್ತೇವೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ(ಜೂ.20): ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾರೇ ಹೇಳಿಕೆ ನೀಡಿದರೂ ಹೈ ಕಮಾಂಡ್ ಗಮನಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ನಮಗೆ ಆರ್ಶೀವಾದ ಮಾಡಿದ್ದಾರೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆ ಈಡೇರಿಸಲು ಮಾತ್ರ ನಮ್ಮ ಚಿತ್ತವಿದೆ. ಅದಕ್ಕೆ ನಾವು ಆದ್ಯತೆ ಕೊಡುತ್ತೇವೆ ಎಂದರು.
ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಯಾರು ಹೇಳಿಕೆ ಕೊಟ್ಟಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ನೀವು ಈ ಕುರಿತು ಅವರನ್ನೇ ಕೇಳಿ. ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳದ್ದು ಹೊರತು ನಮ್ಮ ಪಕ್ಷದಲ್ಲಿಲ್ಲ. ಮುಂಗಾರು ಮಳೆ ಸಕಾಲಕ್ಕೆ ಆಗಿಲ್ಲ. ರೈತರ ಅನುಕೂಲವಾಗುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತದೆ. ಅವಶ್ಯಕತೆ ಬಿದ್ದರೆ ಮೋಡ ಬಿತ್ತನೆ ಆಗಿರಬಹುದು, ಮತ್ತೊಂದು ಆಗಿರಬಹುದು ಎಲ್ಲವನ್ನೂ ಸರ್ಕಾರ ಮಾಡುತ್ತದೆ ಎಂದು ಹೇಳಿದರು.
undefined
ಬಿಜೆಪಿ ಮೊದಲು ಎಲ್ಲರ ಖಾತೆಗೆ 15 ಲಕ್ಷ ಹಾಕಿ ನಂತರ ನಮ್ಮ ವಿರುದ್ಧ ಪ್ರತಿಭಟಿಸಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಮುಂಗಾರು ಮಳೆ ವಿಳಂಬಗೊಂಡಿರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ನೀರಿನ ಅಭಾವ ಎದುರಾಗಿದೆ. ಹಮಾವಾನ ಇಲಾಖೆ ಒದಗಿಸಿರುವ ಮಾಹಿತಿ ಪ್ರಕಾರ ಮುಂದಿನ 7 ದಿನಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ. ಹಾಗೆಯೇ ಆಗಲಿ ಎಂದು ಭರವಂತನ್ನು ಪ್ರಾರ್ಥಿಸೋಣ. ಜಿಲ್ಲೆಯ ಜಲಾಶಯಗಳಲ್ಲಿ ನೀರಿನ ಮಟ್ಟ ಪಾತಾಳ ಕಂಡಿದೆ. ನೀರಿನ ತೊಂದರೆ ಇರುವ ಕೆಡೆಗಳಲ್ಲೆಲ್ಲ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಉಡುಪಿ ಜಿಲ್ಲೆಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಸುವುದನ್ನು ಬಹಳ ದಿನ ಮಾಡಲಾಗದು. ಹಾಗಾಗಿ, ಮಳೆರಾಯನ ಕೃಪೆಗೆ ಎದುರು ನೋಡದೇ ಬೇರೆ ದಾರಿಯಿಲ್ಲ ಎಂದು ಹೇಳಿದರು.