ಮುಡಾ ಪ್ರಕರಣ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ದೇಶದ ಕಾನೂನು, ಸಂವಿಧಾನದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಬೆಳಗಾವಿ (ಆ.29): ಮುಡಾ ಪ್ರಕರಣ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ದೇಶದ ಕಾನೂನು, ಸಂವಿಧಾನದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರೀಟ್ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸುತ್ತಿರುವ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಭವನದಲ್ಲಿ ಒತ್ತಡದಿಂದ ಕೆಲಸ ಮಾಡುತ್ತಿರಬಹುದು ಆದರೆ ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ಮುಡಾ ಪ್ರಕರಣದಲ್ಲಿ ಇಂದು ವಿಚಾರಣೆ ನಡೆಯುತ್ತಿದೆ. ನಿಮ್ಮಷ್ಟೇ ಕುತೂಹಲದಿಂದ ನಾವು ಕಾಯುತ್ತಿದ್ದೇವೆ, ಇತ್ಯರ್ಥ ಆಗಲಿ ಅನಂತರ ಪ್ರತಿಕ್ರಿಯಿಸುವೆ ಎಂದರು.
ಭದ್ರತೆ ದೃಷ್ಟಿಯಿಂದ ಬಳ್ಳಾರಿ ಜೈಲಿಗೆ ಶಿಫ್ಟ್; ದರ್ಶನ್ ತಲುಪಿದ್ದಾರೋ ಇಲ್ವೋ ನನಗೆ ಮಾಹಿತಿ ಇಲ್ಲ: ಗೃಹ ಸಚಿವ
ಇನ್ನು ಡಿಸಿಎಂ ಡಿಕೆ ಶಿವಕುಮಾರ ಅವರ ವಿರುದ್ಧ ಸಿಬಿಐ ತನಿಖೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸಲು ಹತ್ತು ವರ್ಷಗಳಿಂದ ಹುನ್ನಾರ ನಡೆಸುತ್ತಿದ್ದಾರೆ. ನಾವು ಕಾನೂನು ಹೋರಾಟ ಮಾಡಿಕೊಂಡೇ ಅಧಿಕಾರದಲ್ಲಿದ್ದೇವೆ. ಈ ವಿಚಾರದಲ್ಲಿ ನ್ಯಾಯಾಂಗದ ಮೇಲೆ ನಮಗೆ ವಿಶ್ವಾಸವಿದೆ.