ಭಾರತ ಎಂಬ ಹೆಸರಿಗೆ ನಾವು ಯಾರೂ ವಿರೋಧ ಮಾಡಿಲ್ಲ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಂದು ನೋಟಿನ ಮೇಲೆ ಬರೆದಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎನ್ನುವ ಹೆಸರನ್ನು ಬದಲಾಯಿಸುತ್ತಾರಾ? ಇವರು ಏನೇನು ಬದಲಾಯಿಸುತ್ತಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ(ಸೆ.07): ಇಂಡಿಯಾ ಎಂದು ವಿರೋಧ ಪಕ್ಷಗಳ ಒಕ್ಕೂಟಕ್ಕೆ ಹೆಸರು ಇಟ್ಟುಕೊಂಡಿದ್ದಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹೆದರಿಕೆ ಶುರುವಾಗಿದೆ. ಪ್ರಧಾನಿ ಮೋದಿ ಕೂಡ ಇಷ್ಟಕ್ಕೇ ಹೆದರಿ ಬಿಟ್ಟಂತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಭಾರತ ಎಂಬ ಹೆಸರಿಗೆ ನಾವು ಯಾರೂ ವಿರೋಧ ಮಾಡಿಲ್ಲ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಂದು ನೋಟಿನ ಮೇಲೆ ಬರೆದಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎನ್ನುವ ಹೆಸರನ್ನು ಬದಲಾಯಿಸುತ್ತಾರಾ? ಇವರು ಏನೇನು ಬದಲಾಯಿಸುತ್ತಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಸತೀಶ್ ಜಾರಕಿಹೊಳಿ ನನ್ನ ನಡುವಿನ ವಾರ್ ಬಗ್ಗೆ ಅವರನ್ನೇ ಕೇಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಕಾಂಗ್ರೆಸ್ ಹೋರಾಟ ಮಾಡಿದೆ. ಭಾರತ ದೇಶ ಈ ಮಟ್ಟಕ್ಕೆ ಬೆಳೆಯಲು ಕಾಂಗ್ರೆಸ್ ಪಕ್ಷದ ತ್ಯಾಗ ಬಲಿದಾನವಿದೆ ಎಂದರು.
ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಶಾಂತಿ ನೆಲೆಸಬೇಕು ಎಂದು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದರು. ಭಾರತ್ ಜೋಡೋ ಯಾತ್ರೆಗೆ ಈಗ ಒಂದು ವರ್ಷವಾಗಿದೆ ಎಂದರು.