
ಬಂಟ್ವಾಳ (ಫೆ.01): ಯುಗಾದಿ ಬಳಿಕ ಸಿಎಂ ಬದಲಾವಣೆ ಆಗುತ್ತೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಂಟ್ವಾಳದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಯಾವುದೇ ಊಹಾಪೋಹಗಳಿಗೆ ಕಿವಿಗೊಡುವುದು ಬೇಡ. ಮುಂದಿನ ಎರಡೂವರೆ ವರ್ಷಗಳವರೆಗೆ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ.
ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಮಾಜಿ MLAಗೆ ಬಿಜೆಪಿ ಗಾಳ, ಚರ್ಚೆಯಾಗಿದೆ ಎಂದ ಡಿಸಿಎಂ ...
ಇನ್ನು ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವ ಪ್ರಯತ್ನ ಆಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂದು ಅವರು ಪ್ರತಿಕ್ರಿಯಿಸಿದರು.
ನಿರಂತರವಾಗಿ ಬಿಜೆಪಿ ವಿರುದ್ಧ ಹಾಗೂ ಸಿಎಂ ವಿರುದ್ಧ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರದಲ್ಲಿ ಯಾವುದೇ ಹುರುಳಿಲ್ಲ ಎಂದು ಸಚಿವ ಸವದಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.