ಸಚಿವೆ ಹೆಬ್ಬಾಳ್ಕರ್‌ ಬಗ್ಗೆ ಸಿ.ಟಿ.ರವಿ ಹೇಳಿಕೆ, ನೈತಿಕ ಸಮಿತಿ ತನಿಖೆ, 1 ತಿಂಗಳಲ್ಲಿ ವರದಿಗೆ ಸೂಚನೆ

Published : Mar 02, 2025, 12:04 PM ISTUpdated : Mar 02, 2025, 12:10 PM IST
ಸಚಿವೆ ಹೆಬ್ಬಾಳ್ಕರ್‌ ಬಗ್ಗೆ ಸಿ.ಟಿ.ರವಿ ಹೇಳಿಕೆ, ನೈತಿಕ ಸಮಿತಿ ತನಿಖೆ, 1 ತಿಂಗಳಲ್ಲಿ ವರದಿಗೆ ಸೂಚನೆ

ಸಾರಾಂಶ

ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುರಿತು ಸಿ.ಟಿ.ರವಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಪ್ರಕರಣವನ್ನು ನೈತಿಕ ಸಮಿತಿಗೆ ವಹಿಸಲಾಗಿದೆ. ಒಂದು ತಿಂಗಳೊಳಗೆ ವರದಿ ನೀಡಲು ಸೂಚಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ರಾಜೀನಾಮೆ ನೀಡುವುದಾಗಿ ಅವರು ಹೇಳಿದ್ದಾರೆ.  

ಬೆಂಗಳೂರು (ಮಾ.2): ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುರಿತು ಸದಸ್ಯ ಸಿ.ಟಿ.ರವಿ ನೀಡಿದ ಆಕ್ಷೇಪಾರ್ಹ ಹೇಳಿಕೆ ಪ್ರಕರಣವನ್ನು ವಿಧಾನಪರಿಷತ್‌ ನೈತಿಕ ಸಮಿತಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗಾವಿ ಅಧಿವೇಶನದಲ್ಲಿ ಇಬ್ಬರ ನಡುವಿನ ಗಲಾಟೆ ವಿಚಾರವನ್ನು ಅಲ್ಲೇ ಮುಕ್ತಾಯಗೊಳಿಸಲಾಗಿತ್ತು. ಆದರೆ, ಪ್ರತ್ಯೇಕವಾಗಿ ಇಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ಅರಿಯಲು ನೈತಿಕ ಸಮಿತಿಗೆ ವಹಿಸಲಾಗಿದೆ ಎಂದು ತಿಳಿಸಿದರು.

ಅನುಮತಿ ನೀಡದ ಸಭಾಪತಿ: ಮಹಜರೇ ಇಲ್ಲದೆ ಸಿ.ಟಿ.ರವಿ ಕೇಸ್ ತನಿಖೆ!

ಘಟನೆಗೆ ಸಂಬಂಧಿಸಿ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸಮಿತಿಗೆ ತಿಳಿಸಲಾಗಿದೆ. ಅಧಿವೇಶನದಲ್ಲಿ ವರದಿ ಸಲ್ಲಿಕೆಯಾಗುವ ನಿರೀಕ್ಷೆ ಇದೆ. ಪ್ರಕರಣವನ್ನು ಅಧಿವೇಶನದಲ್ಲಿ ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನಿಸಲಾಗುವುದು. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಪಿ.ಎಚ್.ಪೂಜಾರ್ ಅಧ್ಯಕ್ಷತೆಯ ನೈತಿಕ ಸಮಿತಿ ನೀಡುವ ವರದಿಯಂತೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಈ ಮೊದಲು ನೈತಿಕ ಸಮಿತಿಗೆ ಸಿ.ಟಿ.ರವಿ ಅಧ್ಯಕ್ಷರಾಗಿದ್ದರು. ಘಟನೆಯಾದ ತಕ್ಷಣ ಅವರನ್ನು ಬದಲಾವಣೆ ಮಾಡಿ ಪಿ.ಎಚ್.ಪೂಜಾರ್ ಅವರನ್ನು ನೇಮಿಸಲಾಗಿದೆ. ಪೂಜಾರ್‌ ನೇತೃತ್ವದಲ್ಲಿ ಸಮಿತಿಯು ಪ್ರಕರಣ ಕುರಿತು ಅಧ್ಯಯನ ನಡೆಸಲಿದೆ ಎಂದು ಹೇಳಿದರು.

ಸಿ.ಟಿ. ರವಿ, ಹೆಬ್ಬಾಳ್ಕರ್‌ ಕೇಸ್‌ ಪರಿಣಾಮ: ಸಭಾಪತಿ ಹೊರಟ್ಟಿ ಬದಲಿಗೆ ಕಾಂಗ್ರೆಸ್‌ ಪ್ಲ್ಯಾನ್‌!

ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ರಾಜೀನಾಮೆ:
ಸದನದಲ್ಲಿ ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ತಕ್ಷಣ ಸಭಾಪತಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ವಿಧಾನಪರಿಷತ್‌ಗೆ ಆಡಳಿತರೂಢ ಕಾಂಗ್ರೆಸ್‌ ನಾಲ್ವರನ್ನು ನಾಮಕರಣ ಮಾಡಿದರೆ ಬಹುಮತ ಪಡೆದುಕೊಳ್ಳಲಿದೆ. ಒಂದು ವೇಳೆ ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಕಾರಣ ಪಡೆದು ರಾಜೀನಾಮೆ ನೀಡುತ್ತೇನೆ. ತಮಗೆ ಯಾವುದೇ ಅಧಿಕಾರದ ವ್ಯಾಮೋಹ ಇಲ್ಲ ಎಂದು ಹೇಳಿದರು.

ಸಾಮಾನ್ಯ ಕುಟುಂಬದಿಂದ ಬಂದು ಶಿಕ್ಷಕನಾಗಿ ಕೆಲಸ ಮಾಡಿದ್ದೇನೆ. ವಿಧಾನಪರಿಷತ್‌ ಸದಸ್ಯನಾಗಿ, ಸಚಿವನಾಗಿ, ಸಭಾಪತಿಯಂಥ ಉನ್ನತ ಹುದ್ದೆಯಲ್ಲಿದ್ದೇನೆ. ಈ ಬಗ್ಗೆ ತೃಪ್ತಿ ಇದೆ. ಶಿಕ್ಷಕನಾಗಿ ಈ ಹುದ್ದೆಗೆ ಬರುವುದು ಸುಲಭವಲ್ಲ. ಉತ್ತಮವಾಗಿ ಕೆಲಸ ಮಾಡಿದ್ದೇನೆ ಎಂಬ ಭಾವನೆ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಚಿಕ್ಕಮಗಳೂರು - ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!