ಬಿಜೆಪಿ ಮೊದಲು ಎಲ್ಲರ ಖಾತೆಗೆ 15 ಲಕ್ಷ ಹಾಕಿ ನಂತರ ನಮ್ಮ ವಿರುದ್ಧ ಪ್ರತಿಭಟಿಸಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

By Kannadaprabha News  |  First Published Jun 19, 2023, 11:22 PM IST

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿರುವ ಬಿಜೆಪಿ ನಾಯಕರಿಗೆ ಮೊದಲು ಎಲ್ಲರ ಖಾತೆಗೆ 15 ಲಕ್ಷ  ಹಾಕಿ ಪ್ರತಿಭಟನೆ ಮಾಡಲು ಹೇಳಿ ಎಂದು ಪರೋಕ್ಷವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ  ಹೆಬ್ಬಾಳಕರ ಟಾಂಗ್ ನೀಡಿದರು. 


ಬೆಳಗಾವಿ (ಜೂ.19): ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿರುವ ಬಿಜೆಪಿ ನಾಯಕರಿಗೆ ಮೊದಲು ಎಲ್ಲರ ಖಾತೆಗೆ 15 ಲಕ್ಷ  ಹಾಕಿ ಪ್ರತಿಭಟನೆ ಮಾಡಲು ಹೇಳಿ ಎಂದು ಪರೋಕ್ಷವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ  ಹೆಬ್ಬಾಳಕರ ಟಾಂಗ್ ನೀಡಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾವು ಬದ್ಧರಾಗಿದ್ದೇವೆ. ಹಂತ ಹಂತವಾಗಿ ಅನುಷ್ಠಾನ ಮಾಡುತ್ತಿದ್ದೇವೆ. 

ಇದರ ನಡುವೆಯೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಅವರಿಗೆ ಮೊದಲು ಎಲ್ಲರ ಖಾತೆಗೆ 15 ಲಕ್ಷ, ನಿರುದ್ಯೋಗ ಯುವಕರಿಗೆ ಉದ್ಯೋಗ ಕೊಟ್ಟು ಪ್ರತಿಭಟನೆ ಮಾಡಲು ಹೇಳಿ ಎಂದು ವಾಗ್ದಾಳಿ ನಡೆಸಿದರು. ನಾವು ರಾಜ್ಯದ ಜನರಿಗೆ ವಾಗ್ದಾನ ಮಾಡಿದ್ದೇವೆ. ನಾವು ಅಕ್ಕಿಯನ್ನು ಕೊಟ್ಟೆ ಕೊಡುತ್ತೇವೆ. ಯಾವುದೇ ತೊಂದರೆಯೂ ಇಲ್ಲ. ಗೊಂದಲವೂ ಇಲ್ಲ ಎಂದರು.

Tap to resize

Latest Videos

ಮೇಕೆದಾಟು ಯೋಜನೆಯಿಂದ ಹಲವು ಜಿಲ್ಲೆಗೆ ನೀರು: ಡಿ.ಕೆ.ಶಿವಕುಮಾರ್‌

ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರವನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ: ರಾಜ್ಯದಲ್ಲಿ ಮಂತ್ರಿಯಾಗಿ ಇಡೀ ರಾಜ್ಯದ ಜವಾಬ್ದಾರಿ ಇದ್ದರೂ ನನ್ನನ್ನು ಈ ಸ್ಥಾನಕ್ಕೆ ಏರಿಸಿದ ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರವನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಟ್ಟಲವಾಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಮಾರುತಿ ಮಂದಿರದ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ, ಮಹಾಪ್ರಸಾದ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಅವರು ಮಾತನಾಡಿದರು. 

ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸಿ: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆ

ಗ್ರಾಮೀಣ ಕ್ಷೇತ್ರದ ಸಮಸ್ಯೆಗಳು ಮತ್ತು ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳ ಪಟ್ಟಿಯನ್ನು ಜನರ ಸಹಕಾರದೊಂದಿಗೆ ಅತೀ ಶೀಘ್ರದಲ್ಲಿ ಸಿದ್ಧಪಡಿಸಲಾಗುವುದು. ಯಾವುದೇ ಮೂಲೆಯನ್ನೂ ಬಿಡದೆ ಅಭಿವೃದ್ಧಿಪಡಿಸಲಾಗುವುದು. ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವ ಮೂಲಕ ನನ್ನ ಕನಸಿನ ಮಾದರಿ ಕ್ಷೇತ್ರ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ವಾರದಲ್ಲಿ 4 ದಿನ ಇಡೀ ರಾಜ್ಯವನ್ನು ಸುತ್ತಿದರೂ ವಾರದ ಕೊನೆಯ ಮೂರು ದಿನ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೇ ಇರುತ್ತೇನೆ ಎಂದು ಅವರು ಭರವಸೆ ನೀಡಿದರು.

click me!