ವಿಷ ಕನ್ಯೆ ಪದ ಬಳಿಕೆ ಮಾಡಿರುವ ಶಾಸಕ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ. ಅವರ ಸಂಸ್ಕೃತಿ ಎಂಥದ್ದು ಅಂತ ರಾಜ್ಯದ ಜನರು ನೋಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಟಾಂಗ್ ನೀಡಿದರು.
ಬೆಳಗಾವಿ (ಜೂ.28): ವಿಷ ಕನ್ಯೆ ಪದ ಬಳಿಕೆ ಮಾಡಿರುವ ಶಾಸಕ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ. ಅವರ ಸಂಸ್ಕೃತಿ ಎಂಥದ್ದು ಅಂತ ರಾಜ್ಯದ ಜನರು ನೋಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಟಾಂಗ್ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷ ಕನ್ಯೆ ಪದ ಬಳಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರ ಹೇಳಿಕೆಗೆ ನಾನು ಉತ್ತರ ಕೊಡುವುದಿಲ್ಲ. ಜನರೇ ತಕ್ಕ ಉತ್ತರ ಕೊಡುತ್ತಾರೆ. ಭಾರತದ ಸಂಸ್ಕೃತಿಯಲ್ಲಿ ವಿಶ್ವಾಸ ಇಟ್ಟವರು ನಾವು.
ಅವರು ವಿಷ ಕನ್ಯೆ ಅಂತಾರೋ, ಇನ್ನೊಂದು ಕನ್ಯೆ ಅಂತಾರೋ ಅವರೇನು, ಸಂಸ್ಕೃತಿ ಏನು ಎನ್ನುವುದು ರಾಜ್ಯದ ಜನ ನೋಡಿದ್ದಾರೆ. ಅವರ ಸಂಸ್ಕೃತಿ ಬಗ್ಗೆಯೂ ನೋಡಿದ್ದಾರೆ. ಅವರು ದೊಡ್ಡವರು ಅವರ ಬಗ್ಗೆ ಮಾತನಾಡಲ್ಲ ಎಂದರು. ನಮ್ಮ ಬಳಿ ಎಲ್ಲಿ ದುಡ್ಡ ಇದೆ. ನಾನು ಹೆಸರಿಗಷ್ಟೆ ಲಕ್ಷ್ಮೀ ನನ್ನ ಬಳಿ ಹಣವಿಲ್ಲ. ಅವರಿಗೆ ಸಾಹುಕಾರ್ ಅಂತಾರೆ ನಮ್ಮ ಬಳಿ ಎಲ್ಲಿ ದುಡ್ಡು ಸಾಹುಕಾರಗಳು ಅವರಲ್ವಾ ಎಂದು ಲೇವಡಿ ಮಾಡಿದರು. ನಾನು ಯಾರ ಬಳಿಯಾದರೂ ಹಣ ತೆಗದುಕೊಂಡಿದ್ದರೆ ದಾಖಲೆ ಕೊಡಲಿ, ಆ ಮೇಲೆ ಮಾತನಾಡುತ್ತೇನೆ ಎಂದರು.
ನಾನು ಆಸೆ ಪಟ್ಟರೆ ಡಿಸಿಎಂ ಮಾಡಿಯೇ ಬಿಡುತ್ತಾರೆಯೇ. ನನಗೆ ಏನೇ ಸ್ಥಾನಮಾನ ಕೊಟ್ಟರು ಹೈಕಮಾಂಡ್ ತೀರ್ಮಾನ. ರಾಜ್ಯದಲ್ಲಿ ನನಗೆ ದೊಡ್ಡ ಇಲಾಖೆಯಲ್ಲಿ ಕೆಲಸ ಮಾಡುವ ಅವಕಾಶ ಕೊಟ್ಟಿದೆ. ಇದನ್ನು ನಿಭಾಯಿಸುತ್ತೇನೆ. ನಾನು ಮುಗಿಲಿಗೆ ಏಣಿ ಹಾಕುವವಳಲ್ಲ. ರಾಜಕಾರಣ ಎಂದರೆ ಯುದ್ಧದಲ್ಲಿ ಸೋಲನ್ನು ಒಪ್ಪಿಕೊಂಡು ಶಸ್ತ್ರಾಸ್ತ್ರವನ್ನು ತ್ಯಾಗ ಮಾಡಿದಾಗ ಅದು ಸೋಲು. ರಾಜಕಾರಣದಲ್ಲಿ ಸೋಲು ಒಂದೇ ಎಂದು ತೆಗೆದುಕೊಳ್ಳಲಾಗುವುದಿಲ್ಲ. ಸೋಲನ್ನು ಕೂಡ ಸಮಾನವಾಗಿ ಸ್ವೀಕಾರ ಮಾಡಿ ಗೆಲುವಿನ ಮುನ್ನುಡಿ ಬರೆದಿರುವುದು ಜನರಿಗೆ ಗೊತ್ತಿದೆ. ಈಗ ನನ್ನ ಮಗ ಸೋಲು ಕಂಡಿದ್ದಾನೆ. ಎಲ್ಲಿ ಸೋಲು ಕಂಡಿದ್ದಾನೋ ಅಲ್ಲಿಯೇ ಗೆಲ್ಲಬೇಕು ಎನ್ನುವ ಛಲ ಮಾಡಿದ್ದಾನೆ. ಇದೊಂದೆ ಸೋಲಿನಿಂದ ಕಂಗೆಡುವಂತಿಲ್ಲ. ನಾವು ಮೌನಕ್ಕೆ ಜಾರಿರುವುದು ಎಲ್ಲಿ ನಮ್ಮಿಂದ ತಪ್ಪಾಗಿದೆ ಎನ್ನುವುದನ್ನು ಹುಡುಕುತ್ತಿದ್ದೇವೆ ಎಂದು ಹೇಳಿದರು.
ಚಿನ್ನ ಕುದಿವ ಕುಲುಮೆಯಲ್ಲಿದೆ, ಅಪರಂಜಿ ಆಗಿ ಬರಲು ಸಮಯ ಬೇಕು: ದರ್ಶನ್ ಬಗ್ಗೆ ಗಾಯಕಿ ಶಮಿತಾ ಮಲ್ನಾಡ್ ಪೋಸ್ಟ್!
ನಮ್ಮ ಪಕ್ಷದಲ್ಲಿ 136 ಜನ ಶಾಸಕರಿದ್ದಾರೆ. ಎಲ್ಲರ ಅಭಿಪ್ರಾಯ ತೆಗೆದುಕೊಂಡು ಒಳ್ಳೆಯ ಮುಖ್ಯಮಂತ್ರಿಯನ್ನು ನೇಮಕ ಮಾಡಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಈಗಾಗಲೇ ಸಿದ್ದರಾಮಯ್ಯನವರು ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ನೀಡಿದ ಆಶ್ವಾಸನೆ ಈಡೇರಿಸಿ ಮುಂದೆ ಹೋಗುತ್ತಿದ್ದೇವೆ. ಡಿಸಿಎಂ ಡಿ.ಕೆ.ಶಿವಕುಮಾರ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಪಕ್ಷ ಸಂಘಟನೆ ಮಾಡಿದ್ದಾರೆ. ಸಿದ್ದರಾಮಯ್ಯನವರು ಸಂಘಟನೆ ಮಾಡಿ ಮುಖ್ಯಮಂತ್ರಿಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್ ನ ಎರಡು ಕಣ್ಣು ಇದ್ದಹಾಗೆ. ನಾನು ತಳಮಟ್ಟದದಿಂದ ಬಂದ ಕಾರ್ಯಕರ್ತೆ. ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
-ಲಕ್ಷ್ಮೀ ಹೆಬ್ಬಾಳಕರ, ಸಚಿವೆ