ಪ್ರತಾಪ್‌ ಸಿಂಹ ಅಣ್ಣನಂಥ ಬುದ್ಧಿವಂತ ರಾಜಕಾರಣಿ ದೇಶದಲ್ಲೇ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

By Kannadaprabha NewsFirst Published Jun 5, 2023, 3:00 AM IST
Highlights

ಪ್ರತಾಪ್‌ ಸಿಂಹ ಅಣ್ಣನವರು ಬಹಳ ಬುದ್ಧಿವಂತರು. ಅವರು ಸರ್ವಜ್ಞರು ಇದ್ದಂತೆ. ಅವರ ಚಿಂತನೆಗಳಿಗೆ ಸರಿಸಾಟಿಯಾಗುವ ರಾಜಕಾರಣಿಗಳು ರಾಜ್ಯ ಹಾಗೂ ದೇಶದಲ್ಲಿ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯವಾಡಿದರು. 

ಶಿವಮೊಗ್ಗ (ಜೂ.05): ಪ್ರತಾಪ್‌ ಸಿಂಹ ಅಣ್ಣನವರು ಬಹಳ ಬುದ್ಧಿವಂತರು. ಅವರು ಸರ್ವಜ್ಞರು ಇದ್ದಂತೆ. ಅವರ ಚಿಂತನೆಗಳಿಗೆ ಸರಿಸಾಟಿಯಾಗುವ ರಾಜಕಾರಣಿಗಳು ರಾಜ್ಯ ಹಾಗೂ ದೇಶದಲ್ಲಿ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯವಾಡಿದರು. ಭದ್ರಾವತಿ ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅವರನ್ನು ಸುಮ್ಮನೆ ಕೂರಿಸುವುದಕ್ಕೆ ನಮಗೆ ಅಧಿಕಾರ ಕೊಟ್ಟಿದ್ದಾರೆ. ಗೃಹಲಕ್ಷ್ಮೀ ಯೋಜನೆ ಎಲ್ಲರಿಗೂ ತಲುಪುತ್ತದೆ. ಯಾವುದೇ ಕುಟುಂಬಗಳನ್ನು ಒಡೆಯುವ ಕೆಲಸ ನಮ್ಮ ಸರ್ಕಾರ ಮಾಡುವುದಿಲ್ಲ. ಗೃಹಲಕ್ಷ್ಮೀ ಯೋಜನೆಯ ಫಾಮ್‌ರ್‍ಗಳನ್ನು ಎಲ್ಲರಿಗೂ ವಿತರಿಸಲಾಗುತ್ತದೆ. 

ರಾಜ್ಯದಲ್ಲಿ ಶೇ.88 ಜನ ಬಿಪಿಎಲ್‌ ಮತ್ರು ಎಪಿಎಲ್‌ ಕಾರ್ಡ್‌ ಹೋಲ್ಡ​ರ್‍ಸ್ ಇದ್ದಾರೆ. ಅವರ ಅಂಕಿ ಅಂಶಗಳನ್ನು ತೆಗೆದುಕೊಂಡು ರಾಜ್ಯ ಸರ್ಕಾರ ಅವರಿಗೆ ಗೃಹಲಕ್ಷ್ಮೀ ಯೋಜನೆ ವಿಸ್ತರಿಸಲಾಗುತ್ತದೆ. ಅದಕ್ಕೆ ಕೆಲವು ಸಮಯಗಳು ಬೇಕಾಗುತ್ತದೆ. ಆ ಕಾರಣದಿಂದ ಸ್ವಲ್ಪ ವಿಳಂಬವಾಗುತ್ತಿದೆ ಎಂದರು. ಹಿಂದಿನ ಸರ್ಕಾರದ ಎಲ್ಲ ಹಗರಣಗಳನ್ನು ನಮ್ಮ ಸರ್ಕಾರದಲ್ಲಿ ತನಿಖೆ ಮಾಡುವ ವಿಚಾರವನ್ನು ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗುತ್ತದೆ. ನಾವು 40 ಪರ್ಸೆಂಟ್‌ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡಿ ಅಧಿಕಾರ ಬಂದಿದ್ದೇವೆ. ಭ್ರಷ್ಟಾಚಾರ, ಬೆಲೆ ಏರಿಕೆ ತೆಗೆಯುವುದೇ ಕಾಂಗ್ರೆಸ್‌ ಸರ್ಕಾರದ ಉದ್ದೇಶ ಎಂದರು.

ಕಾಡು ಪ್ರಾಣಿಗಳ ದಾಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಿ: ಎಚ್‌.ಡಿ.ಕುಮಾರಸ್ವಾಮಿ

ಕಳಪೆ ಗುಣಮಟ್ಟದ ಮೊಟ್ಟೆ ವಿತರಣೆ ಸಂಬಂಧ ನಮ್ಮ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಈಗಾಗಲೇ ಅನುಭವಸ್ಥರ ಜೊತೆ ಕುಳಿತುಕೊಂಡು ಈ ಇಲಾಖೆ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದೇನೆ. ನಮ್ಮ ಇಲಾಖೆ ರಾಜ್ಯದ 60 ಪರ್ಸೆಂಟ್‌ ಜನರಿಗೆ ತಲುಪುತ್ತದೆ. ಗುಣಮಟ್ಟದ ಆಹಾರ ಪೂರೈಕೆ ಮಾಡುವುದು ನಮ್ಮ ಗುರಿ. ಇಲಾಖೆಯಲ್ಲಿ ಎಲ್ಲೆಲ್ಲಿ ನ್ಯೂನತೆಗಳಿವೆ ಅದನ್ನು ಸರಿ ಮಾಡುತ್ತೇವೆ. ಇಲಾಖೆಯಲ್ಲಿ ಸೋರುವಿಕೆ ತಡೆಗಟ್ಟಿನಾವು ಗುಣಮಟ್ಟದ ಆಹಾರವನ್ನು ಪೂರೈಕೆ ಮಾಡುವತ್ತ ಗಮನಹರಿಸುತ್ತೇವೆ. ನಮ್ಮ ಸರ್ಕಾರ ಪೌಷ್ಟಿಕತೆ, ಉತ್ತಮ ಆರೋಗ್ಯ ಕಡೆ ಗಮನವನ್ನು ಕೊಡುತ್ತದೆ ಎಂದು ತಿಳಿಸಿದರು.

ಗೃಹ ಲಕ್ಷ್ಮಿ ಹೆಸರಲ್ಲಿ ಕುಟುಂಬ ಒಡೆಯಬೇಡಿ: ಕಾಂಗ್ರೆಸ್‌ನ ‘ಗೃಹಲಕ್ಷ್ಮೀ’ ಯೋಜನೆಗೆ ಮನೆಯ ಯಜಮಾನಿ ಯಾರು ಎಂದು ನಿರ್ಧರಿಸಬೇಕಂತೆ. ಕುಟುಂಬದಲ್ಲಿ ಅತ್ತೆ-ಸೊಸೆ ಜಗಳ ಗೊತ್ತೇ ಇದೆ. ಅವರು ಕುಳಿತುಕೊಂಡು ಯಜಮಾನಿ ಯಾರು ಎಂದು ತೀರ್ಮಾನಿಸಲು ಸಾಧ್ಯವೇ? ಎಂದು ಸಂಸದ ಪ್ರತಾಪ ಸಿಂಹ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ಟೀಕಿಸಿದರು. ಮುಸ್ಲಿಮರ ಮನೆಯಲ್ಲಿ ಎರಡು, ಮೂರು ಹೆಂಡತಿ ಇದ್ದರೆ ಕುಟುಂಬದ ಯಜಮಾನಿ ಯಾರು ಎಂಬ ವಿಚಾರವಾಗಿ ಅವರ ಮನೆಗೆ ಬೆಂಕಿ ಬೀಳುತ್ತದೆ. 

ಅವರು ಪ್ರೀತಿಯಿಂದ ನಿಮಗೆ ವೋಟು ಹಾಕಿದ್ದಾರೆ. ಕೊಡುತ್ತೇವೆ ಎಂದರೆ ಧಾರಾಳವಾಗಿ ಕೊಟ್ಟು ಬಿಡಿ. ಆಗದಿದ್ದರೆ ಚುನಾವಣೆಗಾಗಿ ಹೇಳಿದ್ದು ಎಂದು ಒಪ್ಪಿಕೊಂಡು ಬಿಡಿ. ಆದರೆ, ಕುಟುಂಬ ಒಡೆಯುವ ಕೆಲಸ ಮಾಡಬೇಡಿ ಎಂದು ಕಿವಿಮಾತು ಹೇಳಿದರು. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ದಿವಾಳಿ ಆಗುತ್ತಿದೆ. ಸುಭಿಕ್ಷ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್‌ ಭಿಕ್ಷಾ ರಾಜ್ಯ ಮಾಡುತ್ತಿದೆ. ಸದ್ಯದಲ್ಲಿಯೇ ಎಲ್ಲಾ ರೀತಿಯ ತೆರಿಗೆಗಳನ್ನು ಹೆಚ್ಚು ಮಾಡುತ್ತಾರೆ. ಆಸ್ತಿ ನೋಂದಣಿ ಶುಲ್ಕ ಮತ್ತು ಮದ್ಯದ ತೆರಿಗೆ ಹೀಗೆ ಎಲ್ಲವೂ ಹೆಚ್ಚಾಗುತ್ತದೆ. ಕರ್ನಾಟಕಕ್ಕೆ ಶ್ರೀಲಂಕಾ, ಬಾಂಗ್ಲಾದೇಶದ ಸ್ಥಿತಿ ಬರುವ ಕಾಲ ದೂರವಿಲ್ಲ. 

ಪ್ರಧಾನಿ ಮೋದಿಗೆ ಪರ್ಯಾಯ ನಾಯಕ ಸಿದ್ದರಾಮಯ್ಯ: ಪುಟ್ಟರಂಗಶೆಟ್ಟಿ

ಅರವಿಂದ ಕೇಜ್ರಿವಾಲ್‌ ಅವರು 2013ರಲ್ಲಿ ಕಳಪೆ ಮತ್ತು ಫ್ರೀ ಯೋಜನೆ ಜಾರಿಗೆ ತಂದಿದ್ದರು. ಈಗ ಅದನ್ನೇ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ ಎಂದರು. ಇದು ಕರ್ನಾಟಕ ಮಾದರಿ ಅಲ್ಲ. ಇದನ್ನು ಹಲವು ರಾಜ್ಯದಲ್ಲಿ ಮಾಡಿ ಜನರನ್ನು ಮಂಗ್ಯಾ ಮಾಡಲಾಗುತ್ತಿದೆ. ಕಾಂಗ್ರೆಸ್‌ನ ಪ್ರಣಾಳಿಕೆ ಈಡೇರಿಸಲು ಕೇಂದ್ರ ಬಜೆಟ್‌ ಹಣ ತಂದರೂ ಆಗಲ್ಲ. ಲೋಕಸಭಾ ಚುನಾವಣೆವರೆಗೂ ಜನರನ್ನು ಗ್ಯಾರಂಟಿ ಜಾರಿ ಹೆಸರಿನಲ್ಲಿ ಮಂಗ್ಯಾ ಮಾಡುತ್ತಾರೆ ಎಂದು ಕಿಡಿಕಾರಿದರು. ಆಹಾರ ಸಂರಕ್ಷಣಾ ಕಾಯ್ದೆಯಡಿ ಕೇಂದ್ರ ಸರ್ಕಾರ ನೀಡುತ್ತಿರುವ 6 ಕೆಜಿ ಅಕ್ಕಿಯ ಹೊರತಾಗಿ ರಾಜ್ಯ ಸರ್ಕಾರ 10 ಕೆಜಿ ಅಕ್ಕಿಯನ್ನು ಪ್ರತ್ಯೇಕವಾಗಿ ನೀಡಬೇಕು ಎಂದು ಅವರು ಆಗ್ರಹಿಸಿದರು.

click me!