ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದ ಬಿಜೆಪಿಯ ಬಹಿರಂಗ ಸಭೆಯಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಶಾಸಕ ಸಂಜಯ ಪಾಟೀಲ ನೀಡಿದ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿ (ಏ.13): ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದ ಬಿಜೆಪಿಯ ಬಹಿರಂಗ ಸಭೆಯಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಶಾಸಕ ಸಂಜಯ ಪಾಟೀಲ ನೀಡಿದ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ. ಪ್ರಚಾರಕ್ಕಾಗಿ ನೀಚತನದ, ಕೀಳು ಮಟ್ಟದ ಹೇಳಿಕೆ ನನ್ನ ಬಗ್ಗೆ ಸಂಜಯ್ ಪಾಟೀಲ್ ನೀಡಿದ್ದಾರೆ. ಕರ್ನಾಟಕ ರಾಜ್ಯದ ಮಹಿಳೆಯರು ಮಕ್ಕಳನ್ನು ನಿಭಾಯಿಸುವ ಸಚಿವೆಗೆ ಇವರು ಈ ರೀತಿ ಹೇಳಿಕೆ ನೀಡ್ತಾರೆ. ಈ ಮೂಲಕ ಬಿಜೆಪಿಯವರಿಗೆ ಮಹಿಳೆಯರು ಮತ್ತು ಮಹಿಳಾ ಕುಲದ ಬಗ್ಗೆ ಇರು ಗೌರವ ಎಷ್ಟು ಎನ್ನುವುದು ತೋರಿಸುತ್ತೆ. ಬಿಜೆಪಿಯವರ ಅಜೆಂಡಾ ಏನು ಎನ್ನುವುದು ಈ ಮೂಲಕ ಗೊತ್ತಾಗುತ್ತೆ ಎಂದರು.
ಬರೀ ಮಾತಲ್ಲಿ ರಾಮ ಅಂತಾರೆ ಭೇಟಿ ಬಚಾವೋ, ಭೇಟಿ ಪಡಾವೋ ಅಂತಾರೆ. ಪ್ರತಿಯೊಬ್ಬ ಮಹಿಳೆಯನ್ನು ಗೌರವ ನೀಡುವುದು ಹಿಂದೂ ಸಂಸ್ಕ್ರತಿ. ಸಂಜಯ್ ಪಾಟೀಲ್ ಅವರ ಈ ಹೇಳಿಕೆ ಲಕ್ಷ್ಮೀ ಹೆಬ್ಬಾಳಕರ್ ಅಷ್ಟೆ. ರಾಜ್ಯದ ಹಾಗೂ ದೇಶದ ಹೆಣ್ಣು ಮಕ್ಕಳಿಗೆ ಮಾಡಿದ ಅವಮಾನ. ನಾನು ರಾಜ್ಯದ ಮಹಿಳೆಯರಿಗೆ ಕರೆ ನೀಡ್ತಿನಿ ಇಂತಹ ಹಿಡನ್ ಅಜೆಂಡಾ ಇಟ್ಟುಕೊಂಡಿರುವ ಬಿಜೆಪಿಗೆ ಧಿಕ್ಕಾರ ಕೂಗಬೇಕು. ಸಂಜಯ್ ಪಾಟೀಲ್ ಅವರ ಹೇಳಿಕೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಸಂಸದೆ ಮಂಗಳಾ ಅಂಗಡಿ ನಕ್ಕರು. ಇದು ಬಿಜೆಪಿಯ ಹಿಡನ್ ಅಜೆಂಡಾ ಎಂಬುದನ್ನು ತೋರಿಸುತ್ತೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
undefined
ಸಂಜಯ್ ಪಾಟೀಲ ಹೇಳಿಕೆಯನ್ನು ವೇದಿಕೆ ಮೇಲೆಯೇ ಬಿಜೆಪಿ ನಾಯಕರು ಖಂಡಿಸಬೇಕಿತ್ತು. ಖಂಡಿಸಿದ್ರೆ ಬಿಜೆಪಿಯವರು ಹೆಣ್ಣಿಗೆ ಗೌರವ ಕೊಡ್ತಾರೆ ಎಂದಾಗುತ್ತಿತ್ತು. ಆದರೆ ಇವತ್ತು ಬಿಜೆಪಿಯವರ ಮುಖವಾಡ ಕಳಚಿದೆ ಎಂದು ಸಚಿವೆ ಹೆಬ್ಬಾಳಕರ್ ಆಕ್ರೋಶವನ್ನು ವ್ಯಕ್ತಪಡಿಸಿದರು.
ಮೋದಿ ವಿಶ್ವ ನಾಯಕ, ಜೆಡಿಎಸ್ ಜೊತೆ ಯಾಕೆ ಮೈತ್ರಿ ಮಾಡಿಕೊಂಡಿದ್ದಾರೆ: ಸಚಿವ ಕೆ.ವೆಂಕಟೇಶ್
ಏನಿದು ಘಟನೆ: ಶನಿವಾರ ಹಿಂಡಲಗಾದಲ್ಲಿ ನಡೆದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ್, 'ಅಕ್ಕನ ಕ್ಷೇತ್ರದಲ್ಲಿಯೇ ಬಿಜೆಪಿ ಸಮಾವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಸೇರಿದ್ದಾರೆ. ಅಕ್ಕ ನಿದ್ದೆಗೆಡುವುದು ಗ್ಯಾರಂಟಿ' . ಅವರಿಂದು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲವೇ ಒಂದು ಎಕ್ಸ್‌ಟ್ರಾ ಪೆಗ್ ಹೆಚ್ಚುವರಿ ಕುಡಿಯಬೇಕು’ ಎಂದು ಹೇಳಿದ್ದರು.