ಸಿದ್ದರಾಮಯ್ಯ ನನ್ನ ಗುರು, ಅವರಿಂದ ಕಲಿಯಬೇಕಾದದ್ದು ಬಹಳಷ್ಟಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By Kannadaprabha News  |  First Published Oct 4, 2023, 4:23 PM IST

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತ್ಯತೀತ ತತ್ವದ ಮೇಲೆ ಆಡಳಿತ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಕೇವಲ ಕುರುಬರ ಕಣ್ಮಣಿ ಅಲ್ಲ, ಸಮಸ್ತ ಸಮಾಜದ, ಸಮಸ್ತ ಕನ್ನಡಿಗರ ಕಣ್ಮಣಿ. ಪಕ್ಷಾತೀತವಾಗಿ ಅವರಿಗೆ ಅಭಿಮಾನಿಗಳಿದ್ದಾರೆ.


ಬೆಳಗಾವಿ (ಅ.04): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತ್ಯತೀತ ತತ್ವದ ಮೇಲೆ ಆಡಳಿತ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಕೇವಲ ಕುರುಬರ ಕಣ್ಮಣಿ ಅಲ್ಲ, ಸಮಸ್ತ ಸಮಾಜದ, ಸಮಸ್ತ ಕನ್ನಡಿಗರ ಕಣ್ಮಣಿ. ಪಕ್ಷಾತೀತವಾಗಿ ಅವರಿಗೆ ಅಭಿಮಾನಿಗಳಿದ್ದಾರೆ. ಸಿದ್ದರಾಮಯ್ಯ ನನಗೆ 4 ಬಾರಿ ಬಿ ಫಾರ್ಮ್ ನೀಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಎಂದು ತಲೆಯ ಮೇಲೆ ಕೈ ಇಟ್ಟು ಆಶಿರ್ವದಿಸಿದ್ದಾರೆ. ನನ್ನಂತ ಸಾವಿರಾರು ಜನರನ್ನು ಬೆಳೆಸಿದ್ದಾರೆ. ಅವರಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಿದ್ದರಾಮಯ್ಯ ನನ್ನ ರಾಜಕೀಯ ಗುರು ಎಂದು ಹೇಳಿದರು. 

ಸಿದ್ದರಾಮಯ್ಯ ನೇತೃತ್ವದಲ್ಲಿ ಅತ್ಯುತ್ತಮ ಆಡಳಿತ ನೀಡುತ್ತಿದ್ದೇವೆ. ಜಾತ್ಯತೀತವಾಗಿ, ಪಕ್ಷಾತೀತವಾಗಿ 5 ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಒಳ್ಳೆಯ ಕೆಲಸ ಮಾಡಿದ್ದಕ್ಕೇ ಅವರು 14 ಬಾರಿ ಬಜೆಟ್ ಮಂಡಿಸಿದ್ದಾರೆ. ಸಮಾಜದ ದೃವತಾರೆಯಾಗಿರುವ ಸಿದ್ದರಾಮಯ್ಯ ಹೀಗೇ ಬೆಳೆಯುತ್ತಿರಬೇಕು ಎಂದು ಹೆಬ್ಬಾಳಕರ ಹೇಳಿದರು. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಮಾತನಾಡಿ, ನಮ್ಮ ಸಮಾಜ ನಂಬಿದವರು ಯಾರೂ ಕೆಟ್ಟವರಿಲ್ಲ. 2023ರ ವಿಧಾನಸಭೆ ಚುನಾವಣೆ ವೇಳೆ ನನಗೆ ಸಿಎಂ ಸಿದ್ದರಾಮಯ್ಯ ಅವರು ಕರೆದು ಬಿ ಫಾರಂ ನೀಡಿದರು. ನಾನು ಕುರುಬ ಎಂದು ಟಿಕೆಟ್ ಕೊಟ್ಟಿದ್ದಾರೆ.  2013ರಲ್ಲಿಸಿದ್ದರಾಮಯ್ಯ ಭಾಗ್ಯಗಳ ಸರದಾರ ಎಂದು ಖ್ಯಾತಿ ಪಡೆದರು. ಈಗ ಐದು ಗ್ಯಾರಂಟಿ ಕೊಟ್ಟಿದ್ದಾರೆ. 

Tap to resize

Latest Videos

ಕೋಮುಗಲಭೆ ಮಾಡಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯ

30 ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಕರ್ನಾಟಕದಲ್ಲಿ ಯಾವುದೇ ಮುಖ್ಯಮಂತ್ರಿಯಿಂದ ಈ ಕೆಲಸ ಆಗಿರಲಿಲ್ಲ. ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ ಎಂದರು. ಮಾಜಿ ಸಚಿವ ಬಂಡೆಪ್ಪ ಶಾಶಂಪುರ ಮಾತನಾಡಿ, ಕುರುಬ ಸಮುದಾಯಕ್ಕೆ ಐದು ಸಾವಿರ ಕೋಟಿ ಕುರಿಗಾರರಿಗೆ ಅನುದಾನದ ಗ್ಯಾರಂಟಿ ಕೊಡಬೇಕು. ಎರಡು ವರ್ಷದಲ್ಲಿ ಐದರಿಂದ ಹತ್ತು ಪಟ್ಟು ಸರ್ಕಾರಕ್ಕೆ ಕೊಡುವ ಶಕ್ತಿ ನಮ್ಮ ಸಮಾಜಕ್ಕಿದೆ. ಸಿಎಂ ಸಿದ್ದರಾಮಯ್ಯ ಅವರು ಐದು ಗ್ಯಾರಂಟಿ ಕೊಟ್ಟಿದ್ದು ಸ್ವಾಗತ. ಈ ವೇಳೆ ಕುರುಬ ಸಮುದಾಯಕ್ಕೆ ಒಂದು ಗ್ಯಾರಂಟಿ ಕೊಡಬೇಕು. ತೆಲಂಗಾಣದಲ್ಲಿ ಕುರುಬರಿಗೆ 15 ಸಾವಿರ ಕೋಟಿ ಸಾಲ ಸೌಲಭ್ಯ ನೀಡಲಾಗಿದೆ. ಶೇ. 90 ರಷ್ಟು ಸಬ್ಸಿಡಿ ನೀಡಲಾಗಿದೆ. ನಮ್ಮ ರಾಜ್ಯದಲ್ಲಿ ಕುರಿ ಅಭಿವೃದ್ಧಿ ನಿಗಮ ಮಂಡಳಿ ಇದೆ. ಅದರ ಮೂಲಕ 5 ಸಾವಿರ ಕೋಟಿ ಕುರಿಗಾರರಿಗೆ ಅನುದಾನ ಕೊಡಬೇಕು ಎಂದು ಒತ್ತಾಯಿಸಿದರು.

ಏರ್ಪೋರ್ಟ್‌ ಅಭಿವೃದ್ಧಿ ನೆಪದಲ್ಲಿ ರೈತರಿಗೆ ತೊಂದರೆಯಾದ್ರೆ ಸಹಿಸುವುದಿಲ್ಲ: ಸಾಂಬ್ರಾ ವಿಮಾನ ನಿಲ್ದಾಣ ಅಭಿವೃದ್ಧಿಗೆ ಎಲ್ಲ ರೀತಿಯಿಂದಲೂ ನನ್ನ ಸಹಕಾರವಿದೆ. ಆದರೆ ಸುತ್ತಲಿನ ಹಳ್ಳಿಗಳಿಗೆ ಮತ್ತು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗಾಗಿ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದ ನಂತರ ನಡೆದ ಉನ್ನತಾಧಿಕಾರ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣ ಅಭಿವೃದ್ಧಿಗೆ ಅನುಕೂಲ ಮಾಡಿ ಕೊಡೋಣ. ಆದರೆ, ಸಾಂಬ್ರಾ ವಿಮಾನ ನಿಲ್ದಾಣಕ್ಕಾಗಿ ಈಗಾಗಲೇ ರೈತರು ಸಾಕಷ್ಟು ಜಮೀನು ನೀಡಿದ್ದಾರೆ. ಇನ್ನು ಮುಂದೆ ಯಾವುದೇ ಮನೆಗಳನ್ನು ತೆರವುಗೊಳಿಸಲು ಅವಕಾಶ ನೀಡುವುದಿಲ್ಲ. ಜತೆಗೆ ರೈತರಿಂದ ಬಲವಂತವಾಗಿ ಜಮೀನು ವಶಪಡಿಸಿಕೊಳ್ಳುವಂತಿಲ್ಲ. 

ರಾಜ್ಯದಲ್ಲಿ ಇಸ್ಲಾಮಿಕ್‌ ಮತಾಂಧರು ತಲೆ ಎತ್ತುತ್ತಿದ್ದಾರೆ: ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ

ರೈತರೊಂದಿಗೆ ಚರ್ಚಿಸದೇ ಮುಂದಡಿ ಇಡಲು ಅವಕಾಶ ಕೊಡುವುದಿಲ್ಲ. ರೈತರನ್ನು ಮೊದಲು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ತ್ಯಾಗರಾಜನ್, ಪೊಲೀಸ್ ಆಯುಕ್ತ ಸಿದ್ರಾಮಪ್ಪ, ಎಸ್.ಪಿ ಭೀಮಾಶಂಕರ್ ಗುಳೇದ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಡಿಸಿಪಿ ಸ್ನೇಹಾ ಪಿ.ವಿ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

click me!