ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಚಿವರ ರಾಜೀನಾಮೆ ಕೇಳುತ್ತಿರುವ ಬಿಜೆಪಿ ನಾಯಕರು ಪುಲ್ವಾಮಾ ದಾಳಿಯಾಗಿದ್ದು ಯಾವ ಸರ್ಕಾರದಲ್ಲಿ ಎಂದು ಬಹಿರಂಗಪಡಿಸಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರಿಹಾಯ್ದರು.
ಶಿವಮೊಗ್ಗ (ಮಾ.05): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಚಿವರ ರಾಜೀನಾಮೆ ಕೇಳುತ್ತಿರುವ ಬಿಜೆಪಿ ನಾಯಕರು ಪುಲ್ವಾಮಾ ದಾಳಿಯಾಗಿದ್ದು ಯಾವ ಸರ್ಕಾರದಲ್ಲಿ ಎಂದು ಬಹಿರಂಗಪಡಿಸಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರಿಹಾಯ್ದರು. ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರ ಇದ್ದಾಗ ಏನು ಆಗಿಯೇ ಇಲ್ವಾ? ಬಿಜೆಪಿಯವರು ವಿನಾಕಾರಣ ಬಾಂಬ್ ಬ್ಲಾಸ್ಟ್ ಮತ್ತು ಪಾಕಿಸ್ತಾನ ಪರ ಘೋಷಣೆಯ ವಿಚಾರಗಳನ್ನು ಎತ್ತುತ್ತಿದ್ದಾರೆ.
ಈಗಾಗಲೇ ಸರ್ಕಾರ ಸ್ಪಷ್ಟವಾಗಿ ಹೇಳಿದೆ. ಯಾರೇ ಆಗಲಿ ದೇಶದ್ರೋಹದ ಕೆಲಸ ಮಾಡಿದರೆ, ಅದನ್ನು ಕ್ಷಮಿಸುವುದಿಲ್ಲ. ಹಾಗೆಯೇ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್‌ಎಸ್‌ಎಲ್ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಕ್ರಮ ತೆಗೆದುಕೊಳ್ಳುವಾಗ ಕಾನೂನುನ್ನು ಅನುಸರಿಸುವುದು ಸಹಜ ಪ್ರಕ್ರಿಯೆ ಎಂದು ಕುಟುಕಿದರು. ಈಗಾಗಲೇ ಬಾಂಬ್ ಬ್ಲಾಸ್ಟ್ ಬಗ್ಗೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಮುಖ್ಯಮಂತ್ರಿ ಅವರು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಬಂದಿದ್ದಾರೆ. ಆರೋಪಿಗಳ ಸುಳಿವು ಕೂಡ ಸಿಕ್ಕಿದೆ. ಅಗತ್ಯ ಕಾನೂನು ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತದೆ.
undefined
ಬಿಜೆಪಿ-ಜೆಡಿಎಸ್‌ನವರಿಗೆ ಅಧಿಕಾರ ಸಿಕ್ಕರೂ ಏನೂ ಮಾಡಲಿಲ್ಲ: ಡಿ.ಕೆ.ಶಿವಕುಮಾರ್
ಆದರೆ, ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಗ್ರಾಪಂ ಅನುದಾನ ನೀಡಲು ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ. ಗ್ರಾಮ ಪಂಚಾಯಿತಿಗಳಿಗೆ ಅನುದಾನ ನೀಡುವುದು ಯಾರು ಕೇಂದ್ರ ಸರ್ಕಾರ ಅಲ್ಲವೇ. ಕೇಂದ್ರ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಲಿ. ರಾಜ್ಯದಲ್ಲಿ ಬರ ಸಮಸ್ಯೆಯನ್ನು ಎದುರಿಸಲು ಸರ್ಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದೆ. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಎಲ್ಲ ಜಿಲ್ಲಾಧಿಕಾರಿ ಬಳಿ ಹಣ ಇದೆ. ತೀರ ತೊಂದರೆಯಾದ ಕಡೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರವಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಖಜಾನೆ ಖಾಲಿಯಾಗಲು ಸಾಧ್ಯವಿಲ್ಲ, ಇದು ಕಮಿಷನ್ ಸರ್ಕಾರವಲ್ಲ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು. ನಗರದ ಅಲ್ಲಮ್ಮ ಪ್ರಭು ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿ, ಐತಿಹಾಸಿಕ ಕಾರ್ಯಕ್ರಮ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಚುನಾವಣೆ ಪೂರ್ವದಲ್ಲಿ ನನಗೆ ಪ್ರಣಾಳಿಕೆ ಉಪಾಧ್ಯಕ್ಷನ್ನಾಗಿ ಮಾಡಿದ್ದರು. ಚುನಾವಣೆ ಪೂರ್ವದಲ್ಲೇ ನಾವು ಈ ಗ್ಯಾರಂಟಿ ಕಾರ್ಡ್ ಕೊಟ್ಟಿದ್ದೇವು. ಸಾಮಾನ್ಯ ಜನರ ಕುಟುಂಬಕ್ಕೆ ನಾವು ಪಾಲುದಾರರಾಗಬೇಕೆಂಬ ಸಂಕಲ್ಪ ತೊಟ್ಟಿದ್ದೆವು.
ಮೊದಲ ಬಾರಿಗೆ ಆಪರೇಷನ್ ಕಮಲ ಜಾರಿಗೆ ತಂದಿದ್ದು ಬಿಜೆಪಿ: ಸಿಎಂ ಸಿದ್ದರಾಮಯ್ಯ
ಇವತ್ತು ನಿಮ್ಮ ಮನೆ ಬೆಳಕಾಗಿದೆ ಎಂದರೆ ಕಾಂಗ್ರೆಸ್ ಸರ್ಕಾರದಿಂದ ಆಗಿದೆ ಎಂದರು. ಕಾಂಗ್ರೆಸ್ ಸರ್ಕಾರ ಎಲ್ಲ ಜನರ ಮನೆಯ ಬೆಳಕಿನ ಜೊತೆಗೆ ಜೀವನವನ್ನು ಬೆಳಕಾಗಿಸಿದೆ. ಈ ಸರ್ಕಾರ ಹೆತ್ತವರು ಮಹಿಳೆಯರು. ಅದಕ್ಕಾಗಿ ಅವರಿಗೆ ಎಲ್ಲಾ ಯೋಜನೆ ಸಮರ್ಪಿಸಲಾಗಿದೆ. ಹೆಣ್ಣು ಮಕ್ಕಳಿಗೆ ಯೋಜನೆ ತಲುಪಿಸಲಾಗಿದೆ. ಅದರ ಪರಿಣಾಮ ತಿಳಿಯುವ ಕೆಲಸವೇ ಈ ಸಮಾವೇಶ ಎಂದು ಹೇಳಿದರು. 32 ವರ್ಷದ ಹಿಂದೆ ಉಚಿತ ಕರೆಂಟ್ ಕೊಟ್ಟಿದ್ದು ಬಂಗಾರಪ್ಪ. ಭೂ ಹಕ್ಕು ಕೊಟ್ಟಿದ್ದು ದೇವರಾಜ ಅರಸು, ಬಂಗಾರಪ್ಪ, ಕಾಗೋಡು ತಿಮ್ಮಪ್ಪ. ಹೀಗೆ ವಿವಿಧ ಹಂತಗಳಲ್ಲಿ ಕಾಂಗ್ರೆಸ್ ಜನಪರ ಕೆಲಸ ಮಾಡುತ್ತಲೇ ಬಂದಿದೆ. ಕಾಂಗ್ರೆಸ್ ಯೋಜನೆಗಳಿಗೆ ಗ್ಯಾರಂಟಿ, ವಾರಂಟಿ ಇಲ್ಲ ಎಂಬ ಟೀಕೆ ಮಾಡುವವರು ಇದನ್ನು ಅರಿಯಬೇಕು. ಟೀಕೆಗಾಗಿ ಟೀಕೆ ಮಾಡಬಾರದು. ಈ ಸತ್ಯ ಜನರಿಗೆ ತಿಳಿದಿದೆ ಎಂದು ಕುಟುಕಿದರು.