ಗೆಲುವಿನ ಹುಮ್ಮಸ್ಸು ಹಾಗೂ ಕಾಂಗ್ರೆಸ್ ಮೇಲಿನ ವಿಶ್ವಾಸದಿಂದ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ಗೆ ಕರೆತರುತ್ತೇನೆ ಎಂದು ಯೋಗೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು, ಕಾರಕರ್ತರು ಯಾರು ಬೇಕಾದರೂ ಬರಬಹುದು ಎಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ(ನ.27): ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ಗೆ ಸೆಳೆಯುವ ನೂತನ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದಲೂ ಬೆಂಬಲ ವ್ಯಕ್ತವಾಗಿದೆ. ಯೋಗೇಶ್ವರ್ ಹೇಳಿಕೆಯಂತೆ ನಡೆದರೆ ತಪ್ಪೇನೂ ಇಲ್ಲ. ಜೆಡಿ ಎಸ್‌ನವರ ಆಪರೇಷನ್ ಶಿವಮೊಗ್ಗದಿಂದಲೇ ಯಾಕೆ ಆಗಬಾರದು? ಎಂದು ಮಾರ್ಮಿಕವಾಗಿ ನುಡಿದರು.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಗೆಲುವಿನ ಹುಮ್ಮಸ್ಸು ಹಾಗೂ ಕಾಂಗ್ರೆಸ್ ಮೇಲಿನ ವಿಶ್ವಾಸದಿಂದ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ಗೆ ಕರೆತರುತ್ತೇನೆ ಎಂದು ಯೋಗೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು, ಕಾರಕರ್ತರು ಯಾರು ಬೇಕಾದರೂ ಬರಬಹುದು ಎಂದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದಿಲ್ಲ, ಯೋಗೇಶ್ವರ್ ಗೆದ್ದಿರೋದು: ಅಶ್ವತ್ಥನಾರಾಯಣ್
ನಾನು ಕೂಡ ಬೇರೆ ಪಕ್ಷದಿಂದ ಕಾಂಗ್ರೆಸ್‌ಗೆ ಬಂದವನು. ನನಗೆ ಸಚಿವ ಸ್ಥಾನವನ್ನೂ ಕೊಟ್ಟಿದ್ದಾರೆ. ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಕಾಂಗ್ರೆಸ್ ಒಳ್ಳೆಯ ಪಕ್ಷ. ಗ್ಯಾರಂಟಿ ಯೋಜನೆಗಳನ್ನು ಬಡವರಿಗೆ ಕೊಡುತ್ತಿದೆ. ಇಂದಿನ ಕೆಟ್ಟ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವುದೇ ಒಳಿತು ಎಂದು ಪ್ರತಿಪಕ್ಷದ ಮುಖಂಡರಿಗೆ ಮಧು ಬಂಗಾರಪ್ಪ ಸಲಹೆ ನೀಡಿದರು.
ಜೆಡಿಎಸ್ ಕೂಡ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಪಕ್ಷ. ಅದೇ ರೀತಿ ಬೇರೆ ಪಕ್ಷದಿಂದಲೂ ಯಾರೇ ಕಾಂಗ್ರೆಸ್ ಸೇರ್ಪಡೆ ಗೊಂಡರೂ ಒಳ್ಳೆಯದೆ. ಆದರೆ ಒಂದು ಪಕ್ಷ ದಲ್ಲಿ ಶಾಸಕರನ್ನು ತಯಾರಿಸುವುದೇ ಕಾರ್ಯಕರ್ತರು. ಮೊದಲುಕಾರ್ಯಕರ್ತರು ಬರಬೇಕು. ಕಾರ್ಯಕರ್ತರೇ ಪಕ್ಷದ ಶಕ್ತಿ ಎಂದರು. ಪಕ್ಷ ಟಾಸ್ಕ್ ನೀಡಿದರೆ ಜೆಡಿಎಸ್‌ನ ಎಲ್ಲಾ ಶಾಸಕರನ್ನು ಕಾಂಗ್ರೆಸ್‌ಗೆ ಕರೆತರುತ್ತೇನೆ ಎಂದು ಇತ್ತೀಚೆಗೆ ಯೋಗೇಶ್ವರ್ ಹೇಳಿದ್ದರು.
ಬೇರೆ ಪಕ್ಷದವರು ಬರಲು ಅಡ್ಡಿಯಿಲ್ಲ ಯೋಗೇಶ್ವರ್ ಹೇಳಿಕೆಯಂತೆ ನಡೆದರೆ ತಪ್ಪೇನೂ ಇಲ್ಲ. ಉಪ ಚುನಾವಣೆ ಗೆಲುವಿನ ಹುಮ್ಮಸ್ಸು ಹಾಗೂ ಕಾಂಗ್ರೆಸ್ ಪಕ್ಷದ ಮೇಲಿನ ವಿಶ್ವಾಸದಿಂದ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ಗೆ ಕರೆತರುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು, ಕಾರ್ಯಕರ್ತರು ಯಾರು ಬೇಕಾದರೂ ಬರಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಜೆಡಿಎಸ್ ಶಾಸಕರ ಕರೆತರುವೆ: 'ಕೈ'ಲ್ಲಿ ಯೋಗಿ ಹೇಳಿಕೆ ಸಂಚಲನ, ಇಂಥ ದುರ್ಗತಿ ನಮಗೆ ಬಂದಿಲ್ಲ ಎಂದ ಕಾಂಗ್ರೆಸ್ ನಾಯಕರು
ಬೆಂಗಳೂರು: 'ಪಕ್ಷ ಟಾಸ್ಕ್ ನೀಡಿದರೆ ಜೆಡಿಎಸ್ ಶಾಸಕರನ್ನು ಒಡೆದು ಕಾಂಗ್ರೆಸ್‌ಗೆ ತರುತ್ತೇನೆ' ಎಂಬ ಚನ್ನಪಟ್ಟಣ ಕಾಂಗ್ರೆಸ್ ಶಾಸಕ ಸಿ.ಪಿ. ಯೋಗೇಶ್ವರ್ ಹೇಳಿಕೆಯು ಕಾಂಗ್ರೆಸ್ ವಲಯದಲ್ಲಿ ತೀವ್ರ ಗುಲ್ಲೆಬ್ಬಿಸಿದ್ದು, 'ಅಂತಹ ಯಾವುದೇ ಪ್ರಸ್ತಾವನೆಯಿಲ್ಲ. ಅದರ ಅಗತ್ಯವೂ ನಮಗಿಲ್ಲ' ಎಂದು ಬಹುತೇಕ ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ.
ಗೌಡರ ಕುಟುಂಬದಿಂದ ಆಚೆ ಬರಲು ಒಕ್ಕಲಿಗ ಸಮುದಾಯ ತೀರ್ಮಾನಿಸಿದೆ: ಯೋಗೇಶ್ವರ್
ಕಾಂಗ್ರೆಸ್ ಪಕ ತಮಗೆ ಟಾಸ್ಕ್ ನೀಡಿದರೆ ಒಂದು ತಿಂಗಳೊಳಗೆ ಜೆಡಿಎಸ್ ವಿಭಜಿಸಿ ಕಾಂಗ್ರೆಸ್‌ನೊಳಗೆ ಸೇರುವಂತೆ ಮಾಡುತ್ತೇನೆ. ಆ ಸಾಮರ್ಥ ತಮಗಿದೆ ಎಂದು ಯೋಗೇಶ್ವರ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು, ಜೆಡಿಎಸ್ ಶಾಸಕರು ಕಾಂಗ್ರೆಸ್ ಬರುವ ಬಗ್ಗೆ ನನ್ನೊಂದಿಗೆ ಯಾರೂ ಚರ್ಚಿಲ್ಲ ಎಂದಿದ್ದಾರೆ. ಇನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕಾಂಗ್ರೆಸ್ ಅಂತಹ ಆಗತ್ಯವಿಲ್ಲ ಎಂದು ಹೇಳಿದ್ದರೆ ನಮಗೆ ಅಂತಹ ದುರ್ಗತಿ ಬಂದಿಲ್ಲ ಎಂದು ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನಿಷ್ಟುರವಾಗಿ ಮಾತನಾಡಿದ್ದಾರೆ.
ಜಿ.ಟಿ. ದೇವೇಗೌಡರಿಗೆ ಕರೆದಿದ್ದೆ- ಡಿಕೆಶಿ:
ಈ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಕರೆತರುವ ಕುರಿತ ಯೋಗೇಶ್ವರ್ ಹೇಳಿಕೆ ಗೊತ್ತಿಲ್ಲ, ಜಿ.ಟಿ ದೇವೇಗೌಡ ಹಿರಿಯ ನಾಯಕರು. ಅವರ ಪಕ್ಷದ ಕೋರ್ಕಮಿಟಿ ಅಧ್ಯಕ್ಷರಾಗಿದ್ದಾರೆ. ನಾವು ಈ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ಒಮ್ಮೆ ಆಹ್ವಾನ ನೀಡಿದ್ದೆವು. ಆದರೆ ಅವರು ಕುಮಾರಣ್ಣ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ನಮ್ಮ ಆಹ್ವಾನ ತಿರಸ್ಕರಿಸಿದರು. ಈಗ ಅವರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ಅವರು ನೊಂದಿದ್ದಾರೆ ಎಂದರು. ಜೆಡಿಎಸ್ ನೊಂದ ಶಾಸಕರು ಕಾಂಗ್ರೆಸ್ ಸೇರುತ್ತಾರಾ ಎಂದು ಕೇಳಿದಾಗ, ಈ ವಿಚಾರವಾಗಿ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ ಎಂದಷ್ಟೇ ಹೇಳಿದರು