ಸಚಿವರಿದ್ದ ಕಾರನ್ನು ಸಚಿವ ಮಧು ಬಂಗಾರಪ್ಪ ಅವರು ಸ್ವತಃ ಚಾಲನೆ ಮಾಡಿಕೊಂಡು ಜಿಲ್ಲಾಧಿಕಾರಿ ಕಚೇರಿ ಸಭೆಗೆ ಆಗಮಿಸಿ ಎಲ್ಲರ ಗಮನ ಸೆಳೆದರು. ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಯೋಜನೆ ಚಾಲನೆಯ ಸಿದ್ಧತೆ ವೀಕ್ಷಣೆಗೆ ಸಚಿವರು ಆಗಮಿಸಿದ್ದರು.
ಶಿವಮೊಗ್ಗ (ಜ.04): ಸಚಿವರಿದ್ದ ಕಾರನ್ನು ಸಚಿವ ಮಧು ಬಂಗಾರಪ್ಪ ಅವರು ಸ್ವತಃ ಚಾಲನೆ ಮಾಡಿಕೊಂಡು ಜಿಲ್ಲಾಧಿಕಾರಿ ಕಚೇರಿ ಸಭೆಗೆ ಆಗಮಿಸಿ ಎಲ್ಲರ ಗಮನ ಸೆಳೆದರು. ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಯೋಜನೆ ಚಾಲನೆಯ ಸಿದ್ಧತೆ ವೀಕ್ಷಣೆಗೆ ಸಚಿವರು ಆಗಮಿಸಿದ್ದರು. ಪರಿಶೀಲನೆ ಬಳಿಕ ಡಿಸಿ ಕಚೇರಿಗೆ ಹೋಗಬೇಕಾಗಿತ್ತು. ಈ ವೇಳೆ ತಮ್ಮ ಮಂದಿ ಸಹೋದ್ಯೋಗಿ ಸಚಿವರನ್ನು ತಮ್ಮ ಖಾಸಗಿ ಕಾರಿನಲ್ಲಿ ಕೂರಿಸಿಕೊಂಡು ಸಚಿವ ಮಧು ಬಂಗಾರಪ್ಪ ಕಾರನ್ನು ಸ್ವತಃ ತಾವೇ ಚಾಲನೆ ಮಾಡಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಎಲ್ಲರ ಗಮನ ಸೆಳೆದರು. ಜೊತೆಗೆ ತಾವು ಸೀಟ್ ಬೆಲ್ಟ್ ಧರಿಸಿದ್ದಲ್ಲದೇ. ಉಳಿದ ಸಚಿವರಿಗೂ ಬೆಲ್ಟ್ ಧರಿಸುವಂತೆ ತಿಳಿಸಿದ್ದರು.
ಜ.12ರಂದು ಯುವನಿಧಿ ಯೋಜನೆಗೆ ಅಧಿಕೃತ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ. ಈ ಹಿನ್ನೆಲೆ ಫ್ರೀಡಂ ಪಾರ್ಕ್‌ನಲ್ಲಿ ಸಿದ್ಧತೆ ಪರಿಶೀಲನೆಗೆ ಸಚಿವ ಮಧು ಬಂಗಾರಪ್ಪ ಅವರು ಸಹೋದ್ಯೋಗಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್, ಎಂ.ಸಿ. ಸುಧಾಕರ್ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಜೊತೆ ತೆರಳಿದ್ದರು. ವೀಕ್ಷಣೆ ಬಳಿಕ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ಬರುವಾಗ ತಮ್ಮ ಖಾಸಗಿ ಕಾರನ್ನು ಏರಿದ ಮಧು ಬಂಗಾರಪ್ಪ ಅವರು, ಉಳಿದ ಸಚಿವರು ಹಾಗೂ ತಮ್ಮ ವಿರುದ್ಧ ಸದಾ ಹೇಳಿಕೆ ನೀಡುತ್ತಿದ್ದ ಬೇಳೂರು ಗೋಪಾಲಕೃಷ್ಣ ಅವರನ್ನು ಕಾರಿನಲ್ಲಿ ಕೂರಿಸಿಕೊಂಡರು. ತಾವು ಬೆಲ್ಟ್ ಧರಿಸಿದ್ದಲ್ಲದೆ, ಉಳಿದ ಸಚಿವರಿಗೂ ಸೀಟ್ ಬೆಲ್ಟ್ ಧರಿಸುವಂತೆ ತಿಳಿಸಿ ಕಾರನ್ನು ಚಾಲನೆ ಮಾಡಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.
ಜನ ನಂಬಿರುವುದು ನರೇಂದ್ರ ಮೋದಿ ಗ್ಯಾರಂಟಿ: ಕೇಂದ್ರ ಸಚಿವ ಭಗವಂತ ಖೂಬಾ
ಮಧು ಬಂಗಾರಪ್ಪ ರಾಜೀನಾಮೆಗೆ ಆಗ್ರಹಿಸಿ ಮನವಿ: ಚೆಕ್‌ಬೌನ್ಸ್ ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಡಲಗಿ ಘಟಕ ಕಾರ್ಯಕರ್ತರು ಬುಧುವಾರ ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಹಸೀಲ್ದಾರ್ ಮಹಾದೇವ ಸನ್ನಮುರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸದರು. ಈ ವೇಳೆ ಎಬಿವಿಪಿಯ ಚಿಕ್ಕೋಡಿ ಜಿಲ್ಲಾ ಸಂಚಾಲಕ ಮಹಾದೇವ ನವನಿ ಮಾತನಾಡಿ, ಭಾರತದ ಎಲ್ಲ ಸಮಸ್ಯೆಗಳಿಗೆ ಶಿಕ್ಷಣವೊಂದೇ ಪರಿಹಾರ ಎಂದು ನಂಬಿದ್ದೇವೆ. ಆದರೆ, ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ ಶಿಕ್ಷಣ ಸಚಿವನಾಗಿ ಮುಂದುವರೆಯುವುದು ವಿಪರ್ಯಾಸದ ಸಂಗತಿ. ಶಿಕ್ಷಣ ಇಲಾಖೆಗೆ ಕಪ್ಪು ಚುಕ್ಕಿ ತಂದಿರುವ ಮಧು ಬಂಗಾರಪ್ಪ ಈ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.