ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

By Kannadaprabha NewsFirst Published Dec 10, 2023, 4:58 PM IST
Highlights

ಮುಖ್ಯಮಂತ್ರಿ ಮಾಡುವ ವಿಷಯ ಕಾಂಗ್ರೆಸ್ ಪಕ್ಷದ ವರಿಷ್ಠರ ಕೈಯಲ್ಲಿರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಹೈಕಮಾಂಡ್ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇದ್ದಾರೆ. ಅವರೆಲ್ಲ ವೀಕ್ಷಣೆ ಮಾಡಿ, ಶಾಸಕರ ಅಭಿಪ್ರಾಯ ಪಡೆದು, ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧಾರ ಮಾಡುತ್ತಾರೆ: ಸಚಿವ ಎಂ.ಬಿ.ಪಾಟೀಲ 
 

ವಿಜಯಪುರ(ಡಿ.10):   ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು. ನೋಣವಿನಕೆರೆ ಸ್ವಾಮೀಜಿಯವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗಲಿ ಎಂದು ನೀಡಿರುವ ಹೇಳಿಕೆ ಕುರಿತು ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿ ಮಾಡುವ ವಿಷಯ ಕಾಂಗ್ರೆಸ್ ಪಕ್ಷದ ವರಿಷ್ಠರ ಕೈಯಲ್ಲಿರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಹೈಕಮಾಂಡ್ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇದ್ದಾರೆ. ಅವರೆಲ್ಲ ವೀಕ್ಷಣೆ ಮಾಡಿ, ಶಾಸಕರ ಅಭಿಪ್ರಾಯ ಪಡೆದು, ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧಾರ ಮಾಡುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಏನು ಮಾತನಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇಂಥ ವಿಷಯಗಳಲ್ಲಿ ಬಹಿರಂಗವಾಗಿ ಚರ್ಚಿಸದೆ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

Latest Videos

ಜೆಡಿಎಸ್‌ನಲ್ಲಿದ್ದಾಗ ಮುಸ್ಲಿಮರ ಓಲೈಕೆ ಮಾಡ್ತಿದ್ದ ಯತ್ನಾಳ, ಬಿಜೆಪಿ ಸೇರುತ್ತಲೇ ಹಿಂದೂ ಹುಲಿ ಆಗಿಬಿಟ್ಟ: ಎಂಬಿ ಪಾಟೀಲ್ 

ಅಪ್ಪಟ ಕಾಂಗ್ರೆಸ್ಸಿಗರಾದ ಬಿ.ಕೆ.ಹರಿಪ್ರಸಾದ್ ಬದ್ಧತೆಯನ್ನು ನಾವ್ಯಾರೂ ಪ್ರಶ್ನೆ ಮಾಡುವುದಿಲ್ಲ, ಪ್ರಶ್ನೆ ಮಾಡಲು ಆಗದು. ಅನೇಕ ಬಾರಿ ಅವರು ಸಲಹೆ, ಸೂಚನೆ ಕೊಟ್ಟಿದ್ದಾರೆ. ಎಲ್ಲ ಸಮುದಾಯಗಳಿಗೂ ಅನುದಾನ ಕೊಡಿ ಎಂದು ಹೇಳಿರುತ್ತಾರೆ. ಹಿಂದುಳಿದ ಸಮುದಾಯಗಳ ನಾಯಕರಾದ ಅವರು ಜನರ ನೋವನ್ನು ಅರ್ಥೈಸಿಕೊಂಡವರು. ಹೀಗಾಗಿ ಎಲ್ಲರಿಗೂ ಅನುದಾನ ಕೊಡಿ ಎಂದು ಹೇಳಿರಬಹುದು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದರು.

click me!