ಬರ ವಿಚಾರದಲ್ಲಿ ಬೊಮ್ಮಾಯಿ ರಾಜಕೀಯ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

By Kannadaprabha News  |  First Published Aug 26, 2023, 5:43 AM IST

ಬರ ಘೋಷಣೆ ವಿಷಯದಲ್ಲಿ ರಾಜ್ಯದಲ್ಲಿ ಕುಳಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜಕೀಯ ಮಾಡುವುದನ್ನು ಬಿಟ್ಟು ದೆಹಲಿಗೆ ತೆರಳಿ ಬರ ಘೋಷಣೆ ಸಂಬಂಧ ಕೇಂದ್ರದ ಮಾನದಂಡಗಳನ್ನು ಬದಲಿಸುವಂತೆ ಕೇಂದ್ರದ ಮನವೊಲಿಸಿ ರಾಜ್ಯದ ಜನರ ಹಿತ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್‌ ಅವರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕಿವಿಮಾತು ಹೇಳಿದರು.


ವಿಜಯಪುರ (ಆ.26): ಬರ ಘೋಷಣೆ ವಿಷಯದಲ್ಲಿ ರಾಜ್ಯದಲ್ಲಿ ಕುಳಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜಕೀಯ ಮಾಡುವುದನ್ನು ಬಿಟ್ಟು ದೆಹಲಿಗೆ ತೆರಳಿ ಬರ ಘೋಷಣೆ ಸಂಬಂಧ ಕೇಂದ್ರದ ಮಾನದಂಡಗಳನ್ನು ಬದಲಿಸುವಂತೆ ಕೇಂದ್ರದ ಮನವೊಲಿಸಿ ರಾಜ್ಯದ ಜನರ ಹಿತ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್‌ ಅವರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕಿವಿಮಾತು ಹೇಳಿದರು. ತಾವರಖೇಡದಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿದೆ. 

ಬರ ಪ್ರದೇಶವೆಂದು ಘೋಷಣೆ ಮಾಡಲು ಕೇಂದ್ರದ ನಿಮಮಗಳು, ಮಾನದಂಡಗಳು ಅಡ್ಡಿಯಾಗಿವೆ. ಆದ್ದರಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದಲ್ಲಿ ಕುಳಿತು ರಾಜ್ಯ ಸರ್ಕಾರ ಬರ ಘೋಷಣೆ ಮಾಡಬೇಕು ಎಂದು ಹೇಳಿಕೆ ನೀಡುವ ಮೂಲಕ ರಾಜಕೀಯ ಮಾಡಬಾರದು ಎಂದು ಹೇಳಿದರು. ರಾಜ್ಯದ ರೈತರ ಹಿತ ಕಾಪಾಡಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರ ಬಳಿ ಹೋಗಿ ಬರ ಘೋಷಣೆ ಮಾನದಂಡಗಳನ್ನು ಮಾರ್ಪಾಡು ಮಾಡುವಂತೆ ಒತ್ತಾಯಿಸಬೇಕು ಎಂದು ತಿಳಿಸಿದರು.

Tap to resize

Latest Videos

ನಾವು ‘ಆಪರೇಷನ್‌ ಹಸ್ತ’ ಮಾಡುತ್ತಿಲ್ಲ, ಅವರೇ ಬರ್ತಿದ್ದಾರೆ: ಸಚಿವ ಎಂ.ಬಿ.ಪಾಟೀಲ್‌

ಕೇಂದ್ರವು ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ಸಹಾಯಕ್ಕೆ ಬರಬೇಕಿದೆ. ಆದರೆ ಕೇಂದ್ರ ರಾಜ್ಯದ ರೈತರ ಸಹಾಯಕ್ಕೆ ಬರುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ರಾಜ್ಯದ ರೈತರ ಹಿತ ರಕ್ಷಣೆ ಮಾಡುವ ಇಚ್ಚೆ ಇದ್ದರೆ ದೆಹಲಿಗೆ ತೆರಳಿ ಕೇಂದ್ರದ ಮನವೊಲಿಸಿ ಬರ ಘೋಷಣೆ ಮಾನದಂಡಗಳನ್ನು ಸರಳೀಕರಣಗೊಳಿಸಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ತಿಳಿಸಿದರು.

ನರೇಗಾ ಬಾಕಿ ಹಣ ಬಿಡುಗಡೆ, ಬರ ಘೋಷಣೆಗೆ ಆಗ್ರಹ: ನರೇಗಾ ಕೂಲಿ ಕಾರ್ಮಿಕರಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಬೇಕು ಮತ್ತು ಕೂಡಲೇ ಬರ ಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ಶುಕ್ರವಾರ ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಮೆರವಣೆಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷರಾದ ದೀಪಾ ಧಾರವಾಡ ಮಾತನಾಡಿ, ರಾಜ್ಯದಲ್ಲಿ ಈ ವರ್ಷ ಮುಂಗಾರು ತಡವಾಗಿ ಪ್ರವೇಶ ಮಾಡಿತು. ತಡವಾದರೂ ಸಹಿತ ಬಹುತೇಕ ಜಿಲ್ಲೆಗಳಲ್ಲಿ ಬಿತ್ತನೆ ಮಾಡಿದರೂ ಮಳೆಯಿಲ್ಲದೆ ಬೆಳೆ ನಷ್ಟವಾಯಿತು. ಕೆಲವೆಡೆ ಮತ್ತೊಮ್ಮೆ ಬಿತ್ತನೆ ಮಾಡಿಯೂ ಮಳೆಗಾಗಿ ರೈತರು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಮುಂಗಾರುಮಳೆ ಕ್ಷೀಣವಾಗುತ್ತಿದ್ದು ಬಿತ್ತಿದ ಬೆಳೆಯು ಒಣಗುತ್ತಿದೆ. ಸಾಲ ಮಾಡಿ ಬಿತ್ತನೆಗೆ ಖರ್ಚು ಮಾಡಿದ ಹಣ ವಾಪಸ್ ಬರುವಂತೆ ಕಾಣುತ್ತಿಲ್ಲ, ಈ ಪರಿಸ್ಥಿತಿಯನ್ನು ಮನಗಂಡ ರೈತರು ಕಂಗಾಲಾಗುತ್ತಿದ್ದಾರೆ. ರೈತರು ಆತ್ಮಹತ್ಯೆಯತ್ತ ಮನಸ್ಸು ಮಾಡುತ್ತಿದ್ದಾರೆ. ಸರ್ಕಾರ ಎಚ್ಚೆತ್ತುಕೊಳ್ಳದೆ, ಬರಗಾಲ ಎಂದು ಘೋಷಿಸದೆ ರೈತರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರ ಕಮಿಷನ್‌ ಕೇಳಿದ್ದಕ್ಕೆ ಸಾಕ್ಷ್ಯ ಎಲ್ಲಿದೆ?: ಸಚಿವ ಎಂ.ಬಿ.ಪಾಟೀಲ್‌

ಜಿಲ್ಲಾ ಕಾರ್ಯದರ್ಶಿ ಶರಣು ಗೋನವಾರ ಮಾತನಾಡಿ, ದೇಶದ ಬೆನ್ನೆಲುಬು ಆಗಿರುವ ರೈತನ ಬೆನ್ನೆಲುಬೇ ಮುರಿಯುತ್ತಿದೆ. ದೇಶದ ಪ್ರಗತಿ ರೈತನ ಬದುಕಿನಮೇಲೆ ನಿಂತಿದೆ. ಹಾಗಾಗಿ ಈ ಕೂಡಲೇ ಸರ್ಕಾರ ಯುದ್ದೋಪಾದಿಯಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದರು. ಮನವಿ ಸ್ವೀಕರಿಸಿದ ಕಾರ್ಯನಿರ್ವಾಹಕ ಅಧಿಕಾರಿಗಳು, ಕೋಡಲೇ ಪಿಡಿಒಗಳ ಸಭೆಯನ್ನು ಕರೆದು, ನರೇಗಾ ಕೂಲಿ ಕಾರ್ಮಿಕರ ಸಮಸ್ಯೆಗಳಾದ ನಿರಂತರ ಕೆಲಸ ನೀಡದಿರುವುದು, ಕೆಲಸ ನೀಡುವಲ್ಲಿ ವಿಳಂಬ ಮತ್ತು ಹೊಸ ಜಾಬ್ ಕಾರ್ಡ್‌ ಮಾಡುವಲ್ಲಿ ಸಮಸ್ಯೆಗಳ ಸೇರಿ ಇನ್ನಿತರ ಯಾವುದೇ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.

click me!