ರೌಡಿಶೀಟರ್ ತರಹದ ವ್ಯಕ್ತಿಯನ್ನು ಬೆಳೆಸಲು ಬಿಜೆಪಿ ನಾಯಕರು ಹೋರಾಟಕ್ಕೆ ಮುಂದಾಗಿದ್ದು, ನಾಚಿಗೇಡಿನ ಸಂಗತಿ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದರು.
ವಿಜಯಪುರ (ಜ.04): ರೌಡಿಶೀಟರ್ ತರಹದ ವ್ಯಕ್ತಿಯನ್ನು ಬೆಳೆಸಲು ಬಿಜೆಪಿ ನಾಯಕರು ಹೋರಾಟಕ್ಕೆ ಮುಂದಾಗಿದ್ದು, ನಾಚಿಗೇಡಿನ ಸಂಗತಿ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರಕ್ಕೆ ಆಗಮಿಸಿದ್ದ ಕೇಂದ್ರದ ಪ್ರಹ್ಲಾದ ಜೋಶಿ ಅವರು ದೊಡ್ಡ ದೊಡ್ಡ ಮಾತನಾಡಿ ಹೋಗಿದ್ದಾರೆ. ಹುಬ್ಬಳ್ಳಿ ಹಿಂದೂ ಕಾರ್ಯಕರ್ತನ ಬಂಧನ ಮಾಡಲಾಗಿದೆ ಎಂದಿದ್ದಾರೆ. ಮಟ್ಕಾ ಸೇರಿದಂತೆ 18 ಪ್ರಕರಣಗಳು ದಾಖಲಾಗಿರುವ ವ್ಯಕ್ತಿ ಶ್ರೀಕಾಂತ್ ಪೂಜಾರಿ ಬಂಧನವನ್ನು ವಿರೋಧಿಸಿ ಬಿಜೆಪಿ ಹೋರಾಟ ನಡೆಸಿದೆ.
ರೌಡಿಶೀಟರ್ ತರಹದ ವ್ಯಕ್ತಿಯನ್ನು ಬೆಳೆಸಲು ಬಿಜೆಪಿ ನಾಯಕರು ಹೋರಾಟಕ್ಕೆ ಮುಂದಾಗಿದ್ದಾರೆ. ಇತಿಹಾಸ ತಿರುಚುವಂಥದ್ದು ನಾಚಿಗೇಡಿನ ಸಂಗತಿ ಎಂದು ದೂರಿದರು. ಎಸ್ಸಿಪಿ, ಟಿಎಸ್ಪಿ ಯೋಜನೆ ಜಾರಿಗೊಳಿಸಿದವರು ಯಾರು ಎಂದು ಸಿ.ಟಿ.ರವಿ ಅವರನ್ನು ಕೇಳಿ. ಬಜೆಟ್‌ಗಿಂತ ಹೆಚ್ಚಾಗಿ ₹10-20 ಸಾವಿರ ಕೋಟಿ ಹೆಚ್ಚಿನ ವೆಚ್ಚ ಮಾಡಿ ರಾಜ್ಯವನ್ನು ಲೂಟಿ ಹೊಡೆದಿರುವ ಇವರು ರಾಮರಾಜ್ಯದ ಬಗ್ಗೆ ಮಾತನಾಡುತ್ತಾರೆ. ಇದು ಇವರ ರಾಮ ರಾಜ್ಯವೇ ಎಂದು ಕಿಡಿಕಾರಿದ ಅವರು, ಇಂಥ ಬಿಜೆಪಿ ನಾಯಕರಿಂದ ನಾವು ಕಲಿಯುವುದು ಏನೂ ಇಲ್ಲ ಎಂದು ತಿರುಗೇಟು ನೀಡಿದರು.
undefined
ಮೋದಿ ಗ್ಯಾರಂಟಿಯೆದುರು ಬೇರಾವ ಗ್ಯಾರಂಟಿಯೂ ಇಲ್ಲ: ಕೇಂದ್ರ ಸಚಿವ ಕ್ರಿಶನ್ ಪಾಲ್
ಎಲ್ಲ ಜಾತಿ, ಧರ್ಮಗಳ ಬಗ್ಗೆ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರಕ್ಕೆ ಕಾಳಜಿ ಇದೆ. ಈ ಕಾರಣಕ್ಕಾಗಿ ರಾಜ್ಯದ ಜನರು ಸಿದ್ದರಾಮಯ್ಯ ಅವರನ್ನು ಎರಡು ಬಾರಿ ಮುಖ್ಯಮಂತ್ರಿ ಮಾಡಿ, ಸಿ.ಟಿ.ರವಿ ಅವರನ್ನು ಮನೆಗೆ ಕಳಿಸಿದ್ದಾರೆ. ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲ ವರ್ಗದ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಜಾತಿ ಹೆಸರಲ್ಲಿ ರಾಜಕೀಯ ಮಾಡಲು ಹೊರಟಿರುವ ಬಿಜೆಪಿ ನಾಯಕರ ನಡೆ ಸರಿಯಾದ ಕ್ರಮವಲ್ಲ ಎಂದು ದೂರಿದರು. ಪುಲ್ವಾಮಾ, ಬಾಲಾಕೋಟ್ ದುರ್ಘಟನೆಗಳ ಹೆಸರಿನಲ್ಲಿ ಚುನಾವಣಾ ರಾಜಕೀಯ ಮಾಡುತ್ತ ಬರುತ್ತಿರುವ ಬಿಜೆಪಿ ನಾಯಕರು ಇದೀಗ ಮತ್ತೆ ರಾಮನ ಹೆಸರಲ್ಲಿ ರಾಜಕೀಯ ಮಾಡಲು ಮುಂದಾಗಿದ್ದಾರೆ ಎಂದು ಕುಟುಕಿದರು.