ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೂರನೇ ಟಿಪ್ಪು ಎನ್ನಲು ನನ್ನಲ್ಲಿ ಫೋಟೋ ದಾಖಲೆಗಳಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶಾಸಕ ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದರು.
ವಿಜಯಪುರ (ಡಿ.27): ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೂರನೇ ಟಿಪ್ಪು ಎನ್ನಲು ನನ್ನಲ್ಲಿ ಫೋಟೋ ದಾಖಲೆಗಳಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶಾಸಕ ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಎರಡನೇ ಟಿಪ್ಪು ಸುಲ್ತಾನ್ ಎಂದು ಹೇಳುತ್ತಿರುವ ಇದೇ ಯತ್ನಾಳ್. ಈ ಹಿಂದೆ ಟಿಪ್ಪು ಸುಲ್ತಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಫೋಟೋಗಳು ನನ್ನ ಬಳಿ ಇವೆ. ಮಾಧ್ಯಮದವರೇ ಯಾರೋ ನನಗೆ ಅವುಗಳನ್ನು ಕಳಿಸಿದ್ದಾರೆ. ಎಲ್ಲವೂ ನಿಮ್ಮ ಬಳಿಯೇ ಇದ್ದರೂ ನಮ್ಮ ಬಾಯಿಂದ ಹೇಳಿಸುತ್ತೀರಲ್ಲ ಎಂದು ಪತ್ರಕರ್ತರಿಗೆ ಮರುಪ್ರಶ್ನೆ ಹಾಕಿದರು.
ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುವ ಮುನ್ನ ಹೊಂದಾಣಿಕೆ, ಸೌಹಾರ್ದತೆ ಇತ್ತು. ಇದೀಗ ಕದಡಲಾಗಿದ್ದು, ಶಿಕ್ಷಣದ ನೆಲೆಗಳಲ್ಲಿ ಜಾತಿ, ಧರ್ಮ, ಪಕ್ಷ ಅಂತೆಲ್ಲ ವೈಮನಸ್ಸು ಸೃಷ್ಟಿಸಲಾಗಿದೆ. ಪರಿಣಾಮ ಹಿಜಾಬ್ ವಿಷಯ ಇದೀಗ ಕೋರ್ಟ್ ಮೆಟ್ಟಿಲೇರಿದೆ ಎಂದು ಎಂದರು. ಈ ಹಿಂದೆ ಶಾಲಾ ಕಾಲೇಜುಗಳಲ್ಲಿ ಪರಸ್ಪರ ಹೊಂದಾಣಿಕೆ, ವಿಶ್ವಾಸ, ಸೌಹಾರ್ದತೆ ಕದಡಲಾಗಿದೆ. ಸದ್ಯ ಹಿಜಾಬ್ ನಿಷೇಧ ಪ್ರಕರಣ ನ್ಯಾಯಾಲಯದಲ್ಲಿದ್ದು, ಕಾನೂನಾತ್ಮಕವಾಗಿ ವಿಚಾರ ಮಾಡುತ್ತೇವೆ ಎಂದು ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡರು.
ಸಿದ್ದರಾಮಯ್ಯ ಸರ್ಕಾರ ಗೊಂದಲದ ಗೂಡಾಗಿದೆ: ಕೋಟ ಶ್ರೀನಿವಾಸ ಪೂಜಾರಿ
ರೈತರು, ಬರ, ಸಾಲ ಮನ್ನಾ ವಿಷಯದಲ್ಲಿ ಸಚಿವ ಶಿವಾನಂದ ಪಾಟೀಲ ಏನು ಹೇಳಿಕೆ ನೀಡಿದ್ದಾರೆಂದು ನಾನು ಗಮನಿಸಿಲ್ಲ. ಹೀಗಾಗಿ ಈ ವಿಷಯದಲ್ಲಿ ನೀವು ಅವರನ್ನೇ ಕೇಳಿದರೆ ಸೂಕ್ತ ಎಂದರು. ವಿಜಯಪುರ ನಗರದಲ್ಲಿ ವೃಕ್ಷೋಥಾನ್ ಹೆರಿಟೇಜ್ ಮ್ಯಾರಥಾನ್ ಹಾಗೂ ಬೆಳಗಾವಿಯಲ್ಲಿ ಪ್ರಭಾಕರ ಕೋರೆ ಅವರ ವಿವಾಹದ 50ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪೂರ್ವ ನಿರ್ಧಾರಿತ ಕಾರ್ಯಕ್ರಮಗಳಿದ್ದವು. ಹೀಗಾಗಿ ದಾವಣಗೆರೆಯಲ್ಲಿ ನಡೆದ ವೀರಶೈವ ಲಿಂಗಾಯತ ಸಮಾವೇಶಕ್ಕೆ ಹೋಗಿರಲಿಲ್ಲ. ಆದರೆ ಸಂದೇಶ ಕಳಿಸಿದ್ದೆ ಎಂದರು.
ಉದ್ಯಮಿಗಳ ಜೊತೆ ಎಂಬಿಪಾ ಚರ್ಚೆ: ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು ಮುಂಬೈಗೆ ಎರಡು ದಿನಗಳ ಭೇಟಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಮಂಗಳವಾರ ಹಲವು ಬೃಹತ್ ಕಂಪನಿಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದರು. ಮಹೀಂದ್ರ, ಜಿಂದಾಲ್ ಸ್ಟೀಲ್ ವರ್ಕ್ಸ್, ಟಾಟಾ, ಬ್ಲ್ಯಾಕ್ ಸ್ಟೋನ್ ಮತ್ತು ಆರ್ ಪಿಜಿ ಸಮೂಹದ ಪ್ರಮುಖರನ್ನು ಭೇಟಿ ಮಾಡಿದ ಪಾಟೀಲ್, ರಾಜ್ಯದಲ್ಲಿರುವ ಹೂಡಿಕೆಗೆ ಪೂರಕವಾದ ನೀತಿ, ಉತ್ತೇಜನ, ಪ್ರೋತ್ಸಾಹ ಕ್ರಮಗಳು, ವಿಶೇಷ ರಿಯಾಯಿತಿ, ಸೌಲಭ್ಯಗಳನ್ನು ವಿವರಿಸಿದರು.
ಸಹೋದರನ ಮೇಲೆ ನೂರಾರು ಮರ ಕಡಿದ ಆರೋಪ: ಸಂಸದ ಪ್ರತಾಪ್ ಸಿಂಹ ಹೇಳಿದ್ದೇನು?
ಮಹೀಂದ್ರ ಸಮೂಹದ ಅಂಗಸಂಸ್ಥೆ ಆಟೋ ಅಂಡ್ ಫಾರಂ ವಿಭಾಗದ ಅಧ್ಯಕ್ಷ ವಿನೋದ್ ಸಹಾಯ್, ಜಿಂದಾಲ್ ಸಮೂಹದ ಅಧ್ಯಕ್ಷ ಸಜ್ಜನ್ ಜಿಂದಾಲ್ ಮತ್ತು ಪಾರ್ಥ ಜಿಂದಾಲ್, ಟಾಟಾ ಸಮೂಹದ ಮುಖ್ಯಸ್ಥ ಎನ್. ಚಂದ್ರಶೇಖರನ್, ಆರ್‌ಪಿಜಿ ಸಮೂಹದ ಉಪಾಧ್ಯಕ್ಷ ಅನಂತ್ ಗೋಯೆಂಕಾ ಮತ್ತಿತರರೊಂದಿಗೆ ಪಾಟೀಲ್ ಮಾತುಕತೆ ನಡೆಸಿದರು. ಡಿ.20 ರಂದು ಬಿರ್ಲಾ ಮತ್ತು ರಿಲಯನ್ಸ್ ಉದ್ಯಮ ಸಮೂಹ ಸೇರಿದಂತೆ ಹಲವು ಕಂಪನಿಗಳ ಪ್ರಮುಖರನ್ನು ಅವರು ಭೇಟಿ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪಾಟೀಲ್, ಕರ್ನಾಟಕವು ಅತ್ಯುತ್ತಮವಾದ ಕೈಗಾರಿಕಾ ನೀತಿ ಹೊಂದಿದೆ. ವಿದೇಶಿ ನೇರ ಹೂಡಿಕೆ ಆಕರ್ಷಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಆದ್ದರಿಂದ ಬಂಡವಾಳ ತೊಡಗಿಸಬೇಕು ಎಂದು ಕೋರಿದರು.