ಲೋಕಸಭೆ ಚುನಾವಣೆ 2024: ಮೋದಿ ಮಾರಿ ನೋಡಿ ವೋಟು ಹಾಕುವ ದಿನ ಹೋದವು, ಎಂ.ಬಿ.ಪಾಟೀಲ

By Kannadaprabha News  |  First Published Apr 11, 2024, 11:52 AM IST

ಮೋದಿ ಅವರು ಹೇಳಿರುವ ಯಾವ ಭರವಸೆಯೂ ಈಡೇರಿಲ್ಲ. ಆದರೂ ಯುವಕರು ಭ್ರಮೆಯಲ್ಲಿ ತೇಲುತ್ತ ಮೋದಿ ಮೋದಿ ಎನ್ನುತ್ತಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಅಜಗಜಾಂತರವಾಗಿ ಏರಿದೆ. ಸದ್ಯ ಚುನಾವಣಾ ಬಾಂಡ್ ಹಗರಣದಿಂದ ಮೋದಿಯವರ ಒಳ ಮರ್ಮ ಹೊರ ಬಂದಿದೆ ಎಂದ ಸಚಿವ ಎಂ.ಬಿ.ಪಾಟೀಲ 


ಚಡಚಣ(ಏ.11): ದೇಶದ ಮೇಲೆ 100 ಲಕ್ಷಕ್ಕೂ ಅಧಿಕ ಸಾಲ ಮಾಡಿದ ಮೋದಿ ಅವರ ಮೋಡಿ ಈ ಸಲ ನಡೆಯುವುದಿಲ್ಲ. ಅವರು ಮಾಡಿದ ಬೆಲೆ ಏರಿಕೆ, ಜಿಎಸ್‌ಟಿ ಹೆಚ್ಚಳ, ಶ್ರೀಮಂತರ ಸಾಲಮನ್ನಾ ಮಾಡಿರುವ ಸಾಧನೆಗಳಿಂದ ಜನರು ಮೋದಿ ಅವರ ಮಾರಿ ನೋಡಿ ವೋಟು ಹಾಕುವ ದಿನಗಳು ಹೋದವು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಪಟ್ಟಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಲಾದ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣೆ ಅಭ್ಯರ್ಥಿ ರಾಜೂ ಆಲಗೂರ ಅವರ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಅವರು ಹೇಳಿರುವ ಯಾವ ಭರವಸೆಯೂ ಈಡೇರಿಲ್ಲ. ಆದರೂ ಯುವಕರು ಭ್ರಮೆಯಲ್ಲಿ ತೇಲುತ್ತ ಮೋದಿ ಮೋದಿ ಎನ್ನುತ್ತಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಅಜಗಜಾಂತರವಾಗಿ ಏರಿದೆ. ಸದ್ಯ ಚುನಾವಣಾ ಬಾಂಡ್ ಹಗರಣದಿಂದ ಮೋದಿಯವರ ಒಳ ಮರ್ಮ ಹೊರ ಬಂದಿದೆ ಎಂದರು.

Latest Videos

undefined

Lok Sabha Election 2024: ಬಿಜೆಪಿಯಲ್ಲಿ ಮೋದಿ ಬಿಟ್ಟರೆ ಬೇರೆ ನಾಯಕರಿಲ್ಲ: ನಾಡಗೌಡ

ಭ್ರಷ್ಟಾಚಾರಕ್ಕೆ ಹೊಸ ಭಾಷ್ಯ ಬರೆದ ಮೋದಿ:ಕೇಜ್ರವಾಲ್

ಬಂಧನಕ್ಕೆ ಕಾರಣವಾಗಿರುವ ಕಂಪನಿಯಿಂದಲೇ ಬಿಜೆಪಿ ಬಾಂಡ್ ಹೆಸರಲ್ಲಿ ದುಡ್ಡು ಹೊಡೆದಿದೆ. ಕಳ್ಳತನದಿಂದ ಪಡೆಯುತ್ತಿರುವುದನ್ನು ರಹದಾರಿಯಲ್ಲಿ ಪಡೆದಿದ್ದೇವೆ ಅಂತಲೂ ಇವರು ಹೇಳುತ್ತಾರೆ. ಸುಪ್ರೀಂ ಕೋರ್ಟ್ ಪದೇ ಪದೇ ಛೀಮಾರಿ ಹಾಕುತ್ತಿದೆ. ಇಡಿ, ಸಿಬಿಐ ಮೂಲಕ ಭೂ ಬಿಟ್ಟು ನಂತರ ಬಾಂಡ್ ಮೂಲಕ ಹಣ ಎತ್ತಿದ್ದಾರೆ. ಭ್ರಷ್ಟಾ ಚಾರಕ್ಕೆ ಹೊಸ ಭಾಷ್ಯ ಬರೆದವರು ಮಾನ್ಯ ಮೋದಿ. ಇವರ ಮುಖವಾಡವೀಗ ಕಳಚಿ ಬಿದ್ದಿದೆ ಎಂದು ಹರಿ ಹಾಯ್ದರು.
ಈ ಭಾಗ ಜೂನ್ ತಿಂಗಳ ಹೊತ್ತಿಗೆ ಸಂಪೂರ್ಣ ನೀರಿನ ಸಮಸ್ಯೆಯಿಂದ ಮುಕ್ತವಾಗಲಿದೆ. ಇದಕ್ಕೆ ಬದ್ಧ. ಸದ್ಯ ಬದಲಾವಣೆ ಕಾಲವಾಗಿದ್ದು, ನೀವು ಕಾಂಗ್ರೆಸ್‌ಗೆ ಮತ ನೀಡಿದರೆ ದೇಶದಲ್ಲೂ ಗ್ಯಾರಂಟಿಗಳ ಪರ್ವ
ಆರಂಭವಾಗಲಿದೆ. ಆಲಗೂರರು ಕೆಲಸಗಾರರಾಗಿದ್ದಾರೆ. ಇವರನ್ನು ಆರಿಸಿ ಕಳಿಸಿ. ಚಡಚಣ ಭಾಗದಿಂದ ಐವತ್ತು ಸಾವಿರ ಬಹುಮತ ಬರಬೇಕು ಎಂದು ಹೇಳಿದರು.

ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ .ರಾಜು ಆಲಗೂರ ಮಾತನಾಡಿ, ಇದೊಂದು ಬಾರಿ ತಮಗೆ ಅವಕಾಶ ನೀಡಿದರೆ ಜಿಲ್ಲೆ ಹಿಂದೆಂದೂ ಕಾಣದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಹೇಳಿದರು.

ಜಿಗಜಿಣಗಿಯವರು ಒಂದಿನವೂ ಎಲ್ಲೂ ಕಂಡಿಲ್ಲ. ಯಾವ ಊರಲ್ಲೂ ಅವರ ಕೆಲಸದ ಬೋರ್ಡಿಲ್ಲ. ಮೋದಿ ಮುಖ ನೋಡಿ ಮತ ಹಾಕಿ ನೀವೆಲ್ಲ ಬೇಸತ್ತಿರಿ. ಇಂತಹವರು ನಿಮಗೆ ಬೇಕೆ ಎಂದು ಯೋಚಿಸಿ ಮತ ನೀಡಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರದಿಂದ ಹಿಂದೂಗಳಿಗೆ ಉಳಿಗಾಲವಿಲ್ಲ: ಯತ್ನಾಳ್‌

ಶಾಸಕ ವಿಠಲ ಕಟಕದೊಂಡ ಮಾತನಾಡಿ, ಸಂಸದರು ಮಾತ್ರ ಇಲ್ಲಯವರೆಗೆ ಈ ಭಾಗದ ರೈತರಿಗೆ ನೀರು ತರುವ ಗೋಜಿಗೆ ಹಾಗೂ ಸಂಸತ್ತಿನಲ್ಲಿ ನಮ್ಮ ಜನರ ಕೂಗು ಎತ್ತದ ಸಂಸದರು ಯಾರಾದರೂದ್ದರೆ ಅವರು ರಮೇಶ ಜಿಗಜಣಗಿ ಎಂದರು.

ಈ ವೇಳೆ ಮುಖಂಡರಾದ ಬಾಬುಗೌಡ ಪಾಟೀಲ, ವಿಶ್ವನಾಥ ಧೋತ್ರೆ ರಾಜೂ ಡೋಣಗಾಂವ, ಇನೂಸ ಅಲಿ ಮಕಾನದಾರ, ಮುರ್ತುಜಾ ನಧಾಫ ಸೇರಿದಂತೆ ನೂರಾರು ಜನ ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.
ವೇದಿಕೆಯಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಪ್ರಮುಖರಾದ ದಾನಮ್ಮಗೌಡತಿ ಬಿರಾದಾರ, ಶ್ರೀದೇವಿ ಉತ್ಸಾಲರ, ಎಂ.ಆರ್.ಪಾಟೀಲ, ಸುರೇಶಗೌಡ ಪಾಟೀಲ, ಡಿ.ಎಲ್. ಚವ್ಹಾಣ, ಬ್ಲಾಕ್ ಅಧ್ಯಕ್ಷ ಆರ್.ಡಿ.ಹಕ್ಕೆ, ಸುರೇಶ ಗೊಣಸಗಿ, ಮುರ್ತುಜಾ ನದಾಫ್, ಪ್ರಕಾಶ ಪಾಟೀಲ, ಸಾಹೇಬಗೌಡಪಾಟೀಲ, ಗೌಡೇಶಗೌಡ, ಬಸುಸಾಹುಕಾರ್ ಬಿರಾದಾರ, ಶಿವರಾಜಸಿಂಗ್, ಮಹಾದೇವ ಹಿರೇಕುರುಬರ, ಡಾ.ಪವಾರ ಅನೇಕರಿದ್ದರು.

click me!