ನಾವು ‘ಆಪರೇಷನ್ ಹಸ್ತ’ ಮಾಡುತ್ತಿಲ್ಲ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಆದ್ದರಿಂದ ಬಿಜೆಪಿಗರು ಕಾಂಗ್ರೆಸ್ಸಿಗೆ ಬರುವ ಒಲವು ಹೊಂದಿದ್ದಾರೆ ಎಂದು ಬೃಹತ್ ಹಾಗೂ ಮಧ್ಯಮ, ಮೂಲ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ವಿಜಯಪುರ (ಆ.25): ನಾವು ‘ಆಪರೇಷನ್ ಹಸ್ತ’ ಮಾಡುತ್ತಿಲ್ಲ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಆದ್ದರಿಂದ ಬಿಜೆಪಿಗರು ಕಾಂಗ್ರೆಸ್ಸಿಗೆ ಬರುವ ಒಲವು ಹೊಂದಿದ್ದಾರೆ ಎಂದು ಬೃಹತ್ ಹಾಗೂ ಮಧ್ಯಮ, ಮೂಲ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಸ್ವ-ಇಚ್ಚೆಯಿಂದ, ಕಾಂಗ್ರೆಸ್ ಪಕ್ಷದ ಸಿದ್ದಾಂತಗಳನ್ನು ನಂಬಿ, ಯಾವುದೇ ಷರತ್ತು ಹಾಕದೆ ಬಂದರೆ ಅವರನ್ನು ಸ್ವಾಗತ ಮಾಡುತ್ತೇವೆ ಎಂದರು.
ಕೆಲ ನಾಯಕರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳಬಾರದು ಎಂದು ಕೆಲ ‘ಕೈ’ ನಾಯಕರು ವರಿಷ್ಠರಿಗೆ ದೂರು ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದನ್ನು ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ. ಎಐಸಿಸಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಅವರು ಈ ವಿಷಯದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ಇಸ್ರೋಗೆ ಮೋದಿ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿ, ಚಂದ್ರಯಾನ-3 ಯಶಸ್ವಿಯಾಗಿದ್ದು ದೇಶಕ್ಕೆ ಹೆಮ್ಮೆಯ ವಿಷಯ. ಚಂದ್ರನ ಅಂಗಳ ತಲುಪಿದ 4 ರಾಷ್ಟ್ರಗಳಲ್ಲಿ ನಾವು ಒಂದಾಗಿದ್ದೇವೆ.
ಲೋಕಸಭೆಗೆ ಸ್ಪರ್ಧಿಸುವ ಹುಚ್ಚಿಲ್ಲ: ಶಾಸಕ ಎಸ್.ಟಿ.ಸೋಮಶೇಖರ್
ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ ನಾವು ವಿಶ್ವದಲ್ಲಿ ಇತರರಿಗಿಂತ ಕಡಿಮೆ ಇಲ್ಲ ಎಂಬುದನ್ನು ಇಸ್ರೋ ನಿರೂಪಿಸಿದೆ. ಈ ಕೀರ್ತಿ ಇಡೀ ಇಸ್ರೋ ತಂಡ ಹಾಗೂ ಪ್ರಧಾನಿಗೆ ಸಲ್ಲುತ್ತದೆ. ಐತಿಹಾಸಿಕ ಸಾಧನೆ ಹಿನ್ನೆಲೆಯಲ್ಲಿ ಮೋದಿಯವರು ಸ್ವಾಭಾವಿಕವಾಗಿ ಇಸ್ರೋಗೆ ಭೇಟಿ ನೀಡುತ್ತಿದ್ದಾರೆ. ಅದರಲ್ಲಿ ತಪ್ಪೇನಿಲ್ಲ ಎಂದರು. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಚಂದ್ರಯಾನ-3ರ ಯಶಸ್ಸನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮೋದಿ ಮುಂದಾಗಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸೈನ್ಸ್ ಆ್ಯಂಡ್ ಟೆಕ್ನಾಲಜಿ ಬೇರೆ.
ಇಸ್ರೋ ವಿಜ್ಞಾನಿಗಳ ಭೇಟಿಗೆ ಶನಿವಾರ ಬೆಂಗಳೂರಿಗೆ ಪ್ರಧಾನಿ ಮೋದಿ: 1 ಕಿಮೀ ರೋಡ್ ಶೋ
ರಾಜಕೀಯವೇ ಬೇರೆ. ಜವಾಹರಲಾಲ ನೆಹರು, ಅಟಲ್ ಬಿಹಾರಿ ವಾಜಪೇಯಿಯಿಂದ ಹಿಡಿದು ಮೋದಿವರೆಗೆ ಎಲ್ಲರೂ ಕೆಲಸ ಮಾಡಿದ್ದಾರೆ. ಅದರಲ್ಲಿ ಕಾಂಗ್ರೆಸ್, ಬಿಜೆಪಿ ಎನ್ನಲು ಬರುವುದಿಲ್ಲ ಎಂದು ಹೇಳಿದರು. ಇದೇ ವೇಳೆ, ಆಲಮಟ್ಟಿಗೆ ಬಾಗಿನ ಅರ್ಪಣೆ ಕುರಿತು ಪ್ರತಿಕ್ರಿಯಿಸಿ, ಆಲಮಟ್ಟಿಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಳಿಕೊಳ್ಳಲಾಗುವುದು ಎಂದು ತಿಳಿಸಿದರು.