ಕಲಬುರಗಿ ಜನ ಸೋಂಬೇರಿ ಹೇಳಿಕೆಗೆ ಕೊನೆಗೂ ವಿಷಾದ ವ್ಯಕ್ತಪಡಿಸಿದ ಸಚಿವ ನಿರಾಣಿ

By Suvarna NewsFirst Published Aug 28, 2021, 3:52 PM IST
Highlights

* ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸಚಿವ ಮುರುಗೇಶ ನಿರಾಣಿ
* ಕಲಬುರಗಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಬಹಿರಂಗ  ವಿಷಾದ
* ಕಲಬುರಗಿ ಜಿಲ್ಲೆಯ ಜನರು ಸೋಂಬೇರಿಗಳು ಎಂದಿದ್ದ ಸಚಿವ ಮುರುಗೇಶ ನಿರಾಣಿ 

ಕಲಬುರಗಿ, (ಆ.28): ಕಲಬುರಗಿ ಜಿಲ್ಲೆಯ ಜನರು ಸೋಂಬೇರಿಗಳು ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ  ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಇದೀಗ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ನಗರದ ಲುಂಬಿಣಿ ಗ್ರ್ಯಾಂಡ್ ಹೋಟೆಲ್‌ನಲ್ಲಿ ಇಂದು (ಆ.28)ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇಲ್ಲಿನ ಜನಗಳ ಬಗ್ಗೆ ಕಾಳಜಿ ಇಟ್ಟುಕೊಂಡೇ ಎದೆಯಾಳದ ಮಾತುಗಳನ್ನು ಹೇಳಿದ್ದೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಕಲಬುರಗಿ ಜಿಲ್ಲೆ ಹಾಗೂ ಜನಗಳ ಬಗ್ಗೆ ಅಪಾರವಾದ ಕಾಳಜಿ ಇದೆ ಎಂದು ಸ್ಪಷ್ಟಪಡಿಸಿದರು.

ದೇವರ ಆಕ್ಷೇಪಾರ್ಹ ಚಿತ್ರ: ನಿರಾಣಿ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಕಲಬುರಗಿ ಜಿಲ್ಲೆಯಲ್ಲಿ ಹೊಳೆ ತುಂಬಿರುತ್ತವೆ, ಆದ್ರೆ ನೀರಾವರಿ ಮಾಡುವ ಹವ್ಯಾಸ ಅವರಿಗಿಲ್ಲ. ಭಾರಿ ಲೇಜಿ ಅವರು ಎಂದು ಇತ್ತೀಚಿಗೆ  ಬಾಗಲಕೋಟೆಯಲ್ಲಿ ಮುರುಗೇಶ ನಿರಾಣಿ ಹೇಳಿಕೆ ನೀಡಿದ್ದರು.

ಇದಕ್ಕೆ ಕಲಬುರಗಿ ಜಿಲ್ಲೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಜಿಲ್ಲೆಯ ಜನಗಳ ಬಗ್ಗೆ ನೀಡಿದ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಮುಖಂಡ ಸುಭಾಷ್ ರಾಠೋಡ, ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು.

ಇದರಿಂದ ಎಚ್ಚೆತ್ತ ನಿರಾಣಿ, ಶನಿವಾರ ಕಲಬುರಗಿ ಜಿಲ್ಲೆಯಲ್ಲೇ ಸುದ್ದಿಗೊಷ್ಠಿಯಲ್ಲಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು.

click me!