ಕಾಂಗ್ರೆಸ್‌-ಜೆಡಿಎಸ್‌ ಅಭಿವೃದ್ಧಿಗೆ ಮಾರಕ: ಸಚಿವ ಮುರುಗೇಶ ನಿರಾಣಿ

Published : Apr 09, 2023, 10:00 PM IST
ಕಾಂಗ್ರೆಸ್‌-ಜೆಡಿಎಸ್‌ ಅಭಿವೃದ್ಧಿಗೆ ಮಾರಕ: ಸಚಿವ ಮುರುಗೇಶ ನಿರಾಣಿ

ಸಾರಾಂಶ

ಯಡಿಯೂರಪ್ಪ ಹಾಗೂ ಬೊಮ್ಮಾಯಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಳೆದ 4 ವರ್ಷ ಸುಸ್ಥಿರ ಸರ್ಕಾರ ನೀಡಿದ್ದೇವೆ. ರೈತರು, ಮಹಿಳೆಯರು, ಯುವಕರು ಹಾಗೂ ಶ್ರಮಿಕರ ಕಲ್ಯಾಣಕ್ಕಾಗಿ ದುಡಿದಿದ್ದೇವೆ. ಕಾಂಗ್ರೆಸ್‌ ಕೇವಲ ಗರೀಬ್‌ ಕಲ್ಯಾಣ ಹೆಸರಿನಲ್ಲಿ ಕೇವಲ ಪ್ರಚಾರ ಪಡೆದಿದೆ: ನಿರಾಣಿ 

ಬೀಳಗಿ(ಏ.09):  ಕಳೆದ ಐದು ವರ್ಷಗಳ ಅವ​ಧಿಯಲ್ಲಿ ಬೀಳಗಿ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಎಲ್ಲ ಸ್ತರದ ಜನತೆಯನ್ನು ಮುಟ್ಟಿವೆ. ಬೀಳಗಿ ಪಟ್ಟಣದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಂಡ ಫಲವಾಗಿ ಪಟ್ಟಣ ಅಭಿವೃದ್ಧಿಯಿಂದ ಕಂಗೊಳಿಸುತ್ತಿದೆ ಎಂದು ಸಚಿವ ಮುರಗೇಶ ನಿರಾಣಿ ಹೇಳಿದರು.

ಬೀಳಗಿ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ನಂತರ ಕಾರ್ಯಕರ್ತರು ಹಾಗೂ ಪಟ್ಟಣದ ನಾಗರಿಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಟ್ಟಣದ 24/7 ಕುಡಿಯುವ ನೀರಿನ ಸೌಕರ್ಯಕ್ಕಾಗಿ 40 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಡಿವೈಡರ್‌ ರಸ್ತೆ, ಬೀದಿದೀಪ, ದೇವಸ್ಥಾನಗಳ ಜೀರ್ಣೋದ್ಧಾರ ಹೀಗೆ ಜನತೆಗೆ ಕಲ್ಪಿಸಬೇಕಾದ ಎಲ್ಲ ಸೌಕರ್ಯಗಳನ್ನು ಈ 5 ವರ್ಷಗಳ ಅವ​ಧಿಯಲ್ಲಿ ನೀಡಲಾಗಿದೆ. ಈ ಬಾರಿಯ ಮತ ಅಭಿವೃದ್ಧಿಗೆ ಮೀಸಲಿಟ್ಟು, ಬಿಜೆಪಿ ಬೆಂಬಲಿಸುವ ಮೂಲಕ ಮತ್ತೊಮ್ಮೆ ಆಶೀರ್ವದಿಸಿ ಗೆಲ್ಲಿಸಬೇಕು ಎಂದು ವಿನಂತಿಸಿಕೊಂಡರು.

ಕಾಂಗ್ರೆಸ್‌ ಟಿಕೆಟ್‌ ಫೈಟ್‌ಗೆ ಸ್ವಾಮೀಜಿಗಳ ಎಂಟ್ರಿ: ಉಮಾಶ್ರೀಗೆ ಟಿಕೆಟ್‌ ನೀಡದಂತೆ ಮಠಾಧೀಶರ ಒತ್ತಡ

ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿವೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಳೆದ 4 ವರ್ಷ ಸುಸ್ಥಿರ ಸರ್ಕಾರ ನೀಡಿದ್ದೇವೆ. ರೈತರು, ಮಹಿಳೆಯರು, ಯುವಕರು ಹಾಗೂ ಶ್ರಮಿಕರ ಕಲ್ಯಾಣಕ್ಕಾಗಿ ದುಡಿದಿದ್ದೇವೆ. ಕಾಂಗ್ರೆಸ್‌ ಕೇವಲ ಗರೀಬ್‌ ಕಲ್ಯಾಣ ಹೆಸರಿನಲ್ಲಿ ಕೇವಲ ಪ್ರಚಾರ ಪಡೆದಿದೆ. ಇದನ್ನು ಅರಿತು ಸರ್ವ ಜನಾಂಗದವರು ಬಿಜೆಪಿ ಬೆನ್ನಿಗೆ ನಿಲ್ಲುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಬಿಜೆಪಿ ತಾಲೂಕಾಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಪಪಂ ಅಧ್ಯಕ್ಷ ವಿಠ್ಠಲ ಬಾಗೇವಾಡಿ, ಮಲ್ಲಿಕಾರ್ಜುನ ಅಂಗಡಿ, ಮಾಜಿ ಅಧ್ಯಕ್ಷ ಸಂಗಪ್ಪ ಕಟಗೇರಿ, ವ್ಹಿ.ಜಿ.ರೇವಡಿಗಾರ, ಶ್ರೀಶೈಲ ದಳವಾಯಿ, ಸಿದ್ದು ಮಾದರ, ಪಡಿಯಪ್ಪ ಕಳ್ಳಿಮನಿ, ವಿಠ್ಠಲ ನಿಂಭಾಳ್ಕರ ಹಾಗೂ ಇನ್ನೂ ಅನೇಕರು ಇದ್ದರು.

ಬಿಜೆಪಿಗೆ ಬೆಂಬಲ:

ಬೀಳಗಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜೈ ಕರ್ನಾಟಕ ಸಂಘದಿಂದ ಮುರಗೇಶ ನಿರಾಣಿಯವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ವಿಪ ಸದಸ್ಯ ಹಣಮಂತ ನಿರಾಣಿ ಹಾಗೂ ಸಂಗಮೇಶ ನಿರಾಣಿ ಸಮ್ಮುಖದಲ್ಲಿ ಬೀಳಗಿ, ಸುನಗ, ಸಿದ್ದಾಪೂರ, ಕೊರ್ತಿ ಗ್ರಾಮದ ಸಂಘಟನೆಗಳ ಅಧ್ಯಕ್ಷರು, ಪದಾ​ಧಿಕಾರಿಗಳು, ಮಹಿಳಾ ಘಟಕದವರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾದರು. ಅಲ್ಲದೇ ಬೀಳಗಿ ಪಟ್ಟಣ, ಚಿಕ್ಕ ಹಂಚಿನಾಳ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿ ಸೇರ್ಪಡೆಯಾದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ