ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಚಲುವರಾಯಸ್ವಾಮಿ ನಡುವಿನ ಮಾತಿನ ಸಮರ ಮುಂದುವರಿದಿದೆ. ಇತ್ತೀಚೆಗೆ ‘ಚಲುವರಾಯಸ್ವಾಮಿ ಎರಡು ತಲೆ ರಾಜಕಾರಣ ಮಾಡುತ್ತಿದ್ದಾರೆ’ ಎಂಬ ಕುಮಾರಸ್ವಾಮಿ ಅವರ ಹೇಳಿಕಗೆ ಪ್ರತಿಕ್ರಿಯಿಸಿರುವ ಸಚಿವರು, ‘ಪಾಪ ಅವರಿಗೆ ಮಾತ್ರ ಒಂದೇ ತಲೆ ಇರೋದು.
ಮಂಡ್ಯ (ಫೆ.09): ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಚಲುವರಾಯಸ್ವಾಮಿ ನಡುವಿನ ಮಾತಿನ ಸಮರ ಮುಂದುವರಿದಿದೆ. ಇತ್ತೀಚೆಗೆ ‘ಚಲುವರಾಯಸ್ವಾಮಿ ಎರಡು ತಲೆ ರಾಜಕಾರಣ ಮಾಡುತ್ತಿದ್ದಾರೆ’ ಎಂಬ ಕುಮಾರಸ್ವಾಮಿ ಅವರ ಹೇಳಿಕಗೆ ಪ್ರತಿಕ್ರಿಯಿಸಿರುವ ಸಚಿವರು, ‘ಪಾಪ ಅವರಿಗೆ ಮಾತ್ರ ಒಂದೇ ತಲೆ ಇರೋದು. ಈ ದೇಶದಲ್ಲಿ ಮಹಾತ್ಮಗಾಂಧಿ ಬಿಟ್ಟರೆ ಸತ್ಯ ಹೇಳೋರು ಅವರೊಬ್ಬರೆ’ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿ, ನಮ್ಮ ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಬದ್ಧತೆ ಇರಬೇಕಿತ್ತು. ನಮ್ಮ ಹೋರಾಟಕ್ಕೆ ಡಿ.ಕೆ.ಸುರೇಶ್ ಹೊರತುಪಡಿಸಿ ಸ್ವಾಭಿಮಾನಿ ಸಂಸದರು ಯಾರೂ ಬರಲಿಲ್ಲ ಎಂದರು. ಇದೇ ವೇಳೆ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ. ಮುಂದಿನ ಹತ್ತು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.
undefined
ಪ್ರತಿಭಟನೆಗೆ ಬರಲು ಬಿಜೆಪಿ ಸಂಸದರಿಗೆ ತಾಕತ್ತಿದೆಯಾ?: ಸಚಿವ ಚಲುವರಾಯಸ್ವಾಮಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾರಾಯಣಗೌಡ ಭೇಟಿ ಮಾಡಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಜೊತೆ ಮಾತನಾಡಿದ ಕೂಡಲೇ ಕಾಂಗ್ರೆಸ್ ಸೇರುತ್ತಾರೆಂದು ಹೇಳಲಾಗುವುದಿಲ್ಲ. ಮುಂದಿನ ಹತ್ತು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಪಕ್ಷ ಸೇರುವ ವಿಚಾರವಾಗಿ ನಾರಾಯಣಗೌಡ ಯಾವುದೇ ಬೇಡಿಕೆ ಇಟ್ಟಿಲ್ಲ. ನಾವೂ ಯಾವುದೇ ಭರವಸೆ ಕೊಟ್ಟಿಲ್ಲ. ಈ ಹಿಂದೆಯೇ ಹೇಳಿದಂತೆ ಮಂಡ್ಯ ಜಿಲ್ಲೆಯಲ್ಲಿ ಒಂದಷ್ಟು ಜನ ಕಾಂಗ್ರೆಸ್ ಸೇರುತ್ತಾರೆ. ನಾರಾಯಣಗೌಡ ಜೆಡಿಎಸ್ ಸರಿ ಇಲ್ಲ ಎಂದು ಬಿಜೆಪಿಗೆ ಹೋದರು. ಈಗ ಅವರಿಬ್ಬರೂ ಒಂದಾಗಿದ್ದಾರೆ ಎಂದು ಕಾಂಗ್ರೆಸ್ ಕಡೆ ಬರುತ್ತಿದ್ದಾರೆ ಎಂದು ಕಾಣುತ್ತೆ ಎಂದರು.
ರೈತ ದಿಲೀಪ್ ಕುಮಾರ್ ಸಾಧನೆ ಅದ್ಭುತ: ಒಬ್ಬ ಸಾಮಾನ್ಯ ರೈತ ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಯರಗುಂಟೆ ಗ್ರಾಮದ ದಿಲೀಪ್‌ಕುಮಾರ್ ಅವರು ಸಾಕ್ಷಿ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ತಾಲೂಕಿನ ಯರಗುಂಟೆ ಗ್ರಾಮದಲ್ಲಿ ಜೀನಿ ಸಿರಿಧಾನ್ಯಗಳ ಹೆಲ್ತ್ ಮಿಲೇಟ್ ಮಿಕ್ಸ್ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಘಟಕವನ್ನು ವೀಕ್ಷಣೆ ಮಾಡಿ ಮಾತನಾಡಿದರು. ದಿಲೀಪ್ ಕುಮಾರ್ ಅವರು ಅದ್ಭುತವಾದ ಸಾಧನೆ ಮಾಡಿದ್ದಾರೆ. ಕುಗ್ರಾಮದಿಂದ ರಾಷ್ಟ್ರಮಟ್ಟಕ್ಕೆ ಬೆಳೆದಿದ್ದಾರೆ.
ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಚಿವ ಚಲುವರಾಯಸ್ವಾಮಿ
ಸುಮಾರು ೫೦೦ ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದ್ದಾರೆ. ಸಿರಿಧಾನ್ಯಗಳಿಂದ ಹೊಸ ಉತ್ಪನ್ನಗಳನ್ನು ತಯಾರಿಸಿ ಅದರಲ್ಲಿ ಯಶಸ್ಸು ಗಳಿಸುವುದೆಂದರೆ ಸಾಮಾನ್ಯವಾದ ವಿಷಯವಲ್ಲ. ದೇಶದ ಲಕ್ಷಾಂತರ ಮಕ್ಕಳಿಗೆ ದೊಡ್ಡವರಿಗೆ ಆರೋಗ್ಯಕರವಾದ ಹೆಲ್ತ್ ಮಿಕ್ಸ್ ನೀಡುತ್ತಿದ್ದಾರೆ. ಪ್ರತಿ ತಿಂಗಳು ಅವರು ತಯಾರಿಸುತ್ತಿರುವ ಉತ್ಪನ್ನಕ್ಕೆ ಬೇಡಿಕೆ ಹೆಚ್ಚುತ್ತಿದೆ ಎಂದರು. ದಿಲೀಪ್ ಕುಮಾರ್ ಅವರು ತಿಂಗಳಿಗೆ ೧೦ ಕೋಟಿ ವ್ಯವಹಾರ ಮಾಡಿದರೂ ಸಾಮಾನ್ಯರಂತೆಯೇ ಜೀವನ ಮಾಡುತ್ತಿದ್ದಾರೆ ಜೊತೆಗೆ ಹಲವಾರು ಸರ್ಕಾರಿ ಶಾಲೆಗಳ ದುರಸ್ತಿಗೆ ಸಹಾಯಧನ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.