
ಕೆ.ಆರ್.ಪೇಟೆ(ಫೆ.11): ಕೇಸರಿ ಧ್ವಜವನ್ನು ರಾಷ್ಟ್ರಧ್ವಜ ಮಾಡುತ್ತೇನೆ ಎಂದಿದ್ದ ಮಾಜಿ ಸಚಿವ ಈಶ್ವರಪ್ಪ ಹಾಗೂ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದ ಸಂಸದ ಅನಂತಕುಮಾರ್ ಹೆಗಡೆಗೆ ಬಿಜೆಪಿಯವರು ಗುಂಡಿಕ್ಕಲಿ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದೇಶ ವಿಭಜನೆಯ ಬಗ್ಗೆ ಮಾತನಾಡಿರುವ ಸಂಸದ ಡಿ.ಕೆ.ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ, ಈಶ್ವರಪ್ಪನವರ ಮೆದುಳಿಗೂ, ನಾಲಿಗೆಗೂ ಸಂಪರ್ಕ ಕಡಿತವಾಗಿದೆ. ಹಾಗಾಗಿ, ಅವರಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದರು.
ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಸಿಡಿದೆದ್ದ ಕೆಸಿ ನಾರಾಯಣಗೌಡ ಶೀಘ್ರದಲ್ಲೇ ಕಾಂಗ್ರೆಸ್‌ಗೆ?
ಬಿಜೆಪಿಯವರಂತೆ ಕಾಂಗ್ರೆಸ್ ಶಾಸಕರು, ಸಂಸದರು ರಾಷ್ಟ್ರ ಮತ್ತು ಸಂವಿಧಾನಕ್ಕೆ ಅವಮಾನ ಮಾಡಿಲ್ಲ. ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೇಳುವುದೇ ತಪ್ಪಾ?. ಅವರು ಕೊಟ್ಟಿದ್ದನ್ನಷ್ಟೇ ಪಡೆಯಬೇಕಾ?. ಅದನ್ನು ಯಾರೂ ಪ್ರಶ್ನಿಸಬಾರದಾ?. ಹಾಗೇನಾದರೂ ಪ್ರಶ್ನಿಸಿದರೆ ಅವರು ರಾಷ್ಟ್ರದ್ರೋಹಿಗಳಾ? ಎಂದು ಖಾರವಾಗಿ ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.